NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಕರ್ನಾಟಕ ಶಾಸಕರು ದೇಶದಲ್ಲೇ ಅತ್ಯಂತ ಸಿರಿವಂತರು – ಡಿಕೆಶಿ ಸೇರಿ ಮೂವರು ಟಾಪ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರು ದೇಶದಲ್ಲೇ ಅತ್ಯಂತ ಸಿರಿವಂತರು ಎಂಬ ವರದಿಯೊಂದು ಹೊರಬಿದ್ದಿದೆ. ಅದರಲ್ಲಿ ಕನಕಪುರ ಕ್ಷೇತ್ರದ ಡಿ.ಕೆ.ಶಿವಕುಮಾರ್​, ಗೌರಿಬಿದನೂರು ಕ್ಷೇತ್ರ ಪುಟ್ಟಸ್ವಾಮಿಗೌಡ, ಗೋವಿಂದರಾಜನಗರದ ಪ್ರಿಯಕೃಷ್ಣ ರಾಜ್ಯದ ಮೂವರು ಶ್ರೀಮಂತ ಶಾಸಕರು ಎಂದು ಗುರುತಿಸಿಕೊಂಡಿದ್ದಾರೆ.

ಅಸೋಸಿಯೇಷನ್​ ಫಾರ್​ ಡೆಮಾಕ್ರೆಟಿಕ್​ ರಿಫರ್ಮ್ಸ್​ ಮತ್ತು ನ್ಯಾಷನಲ್​ ಎಲೆಕ್ಷನ್​ ವಾಚ್​ ಎಂಬ ಎರಡು ಸಂಸ್ಥೆಗಳು ಅಧ್ಯಯನ ನಡೆಸಿದ್ದು, ದೇಶದ ವಿವಿಧ ರಾಜ್ಯಗಳ ಶಾಸಕರ ಆಸ್ತಿ ಪ್ರಮಾಣದ ಬಗ್ಗೆ ಅಧ್ಯಯನ ನಡೆಸಿದೆ. ಅದರಲ್ಲಿ ಒಟ್ಟಾರೆ 64.39 ಕೋಟಿಯಷ್ಟಿದೆ ಎಂದು ತಿಳಿದುಬಂದಿದೆ. ಇನ್ನು ಕರ್ನಾಟಕ ಶಾಸಕರ ಆಸ್ತಿ ಪ್ರಮಾಣದ 64.39 ಕೋಟಿಯಷ್ಟಿದೆ ಎಂದು ವರದಿ ಹೇಳಿದೆ.

28 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶ 4033 ಶಾಸಕರು ಕುರಿತಾಗಿ ಅಧ್ಯಯನಕ್ಕಿಳಿದ ಅಸೋಸಿಯೇಷನ್​ ಫಾರ್​ ಡೆಮಾಕ್ರೆಟಿಕ್​ ರಿಫರ್ಮ್ಸ್​ ಮತ್ತು ನ್ಯಾಷನಲ್​ ಎಲೆಕ್ಷನ್​ ವಾಚ್ ಸಂಸ್ಥೆ 4001 ಶಾಸಕರು ಅಫಿಡವಿಟ್​​ನಲ್ಲಿ ನೀಡಿರುವ ಮಾಹಿತಿ ಆಧರಿಸಿ ಅಧ್ಯಯನ ಮಾಡಿದೆ.

ಇನ್ನು ಕರ್ನಾಟಕದ 223 ಶಾಸಕರ ಪೈಕಿ 32 ಶಾಸಕರು 100 ಕೋಟಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ. ಆ ಮೂಲಕ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದಾರೆ. ಕರ್ನಾಟಕದ ಬಳಿಕ ಅರುಣಾಚಲಪ್ರದೇಶ, ಆಂಧ್ರಪ್ರದೇಶ ನಂತರದ ಸ್ಥಾನಗಳಲ್ಲಿವೆ.

ಅಂದಹಾಗೆಯೇ ಡಿ.ಕೆ.ಶಿವಕುಮಾರ್​ 1413 ಕೋಟಿ, ಪುಟ್ಟಸ್ವಾಮಿಗೌಡ 1267 ಕೋಟಿ, ಪ್ರಿಯಕೃಷ್ಣ 1156 ಕೋಟಿಯಷ್ಟು ಆಸ್ತಿಯನ್ನು ಹೊಂದಿದ್ದಾರೆ. ಕರ್ನಾಟಕ ಮಾತ್ರವಲ್ಲ, ಮಹಾರಾಷ್ಟ್ರ, ಗುಜರಾತ್​, ಹಿಮಾಚಲ ಪ್ರದೇಶ, ಮಧ್ಯ ಪ್ರದೇಶಗಳಲ್ಲೂ ಕೂಡ ಅತಿ ಹೆಚ್ಚು ಆಸ್ತಿಯನ್ನು ಹೊಂದಿರುವ ಶಾಸಕರು ಇದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ