Thursday, October 31, 2024
NEWSದೇಶ-ವಿದೇಶರಾಜಕೀಯ

ಕರ್ನಾಟಕದ ಅಳಿಯ ರಿಷಿ ಸುನಾಕ್ ಬ್ರಿಟನ್ ಪ್ರಧಾನಿಯಾಗಿ ನೇಮಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಲಂಡನ್: ಭಾರತ ಮೂಲದ ರಿಷಿ ಸುನಾಕ್ ಅವರನ್ನು ಬ್ರಿಟನ್ ಪ್ರಧಾನಿಯಾಗಿ 3ನೇ ಕಿಂಗ್ ಚಾರ್ಲ್ಸ್ ಅವರು ಮಂಗಳವಾರ ನೇಮಕ ಮಾಡಿದ್ದಾರೆ. ಇದೀಗ ಸುನಾಕ್ ಬ್ರಿಟನ್ ಪ್ರಧಾನಿಯಾದ ಮೊದಲ ಭಾರತೀಯ ವ್ಯಕ್ತಿ ಮಾತ್ರವಲ್ಲದೇ ಅತ್ಯಂತ ಕಿರಿಯ ಯುಕೆ ಪಿಎಂ ಎನಿಸಿಕೊಂಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸುನಾಕ್ ಅವರನ್ನು ಬ್ರಿಟನ್ ಪ್ರಧಾನಿಯಾಗಿ ಆಯ್ಕೆ ಮಾಡಲು ಭಾರೀ ಬೆಂಬಲ ವ್ಯಕ್ತವಾದ ಹಿನ್ನೆಲೆ ಪೆನ್ನಿ ಮೊರ್ಡಂಟ್ ಪ್ರಧಾನಿ ಹುದ್ದೆಯ ರೇಸ್‌ನಿಂದ ಹಿಂದೆ ಸರಿದರು. ಬಳಿಕ ಸುನಾಕ್ ಸೋಮವಾರ ಅಧಿಕೃತವಾಗಿ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾದರು.

ಬ್ರಿಟನ್ ಪ್ರಧಾನಿಯಾಗಿ ನೇಮಕಗೊಂಡ ಬಳಿಕ ದೇಶವನ್ನುದ್ದೇಶಿಸಿ ತಮ್ಮ ಮೊದಲ ಭಾಷಣವನ್ನು ಮಾಡಿದ ಸುನಾಕ್, ಇದೀಗ ನಮ್ಮ ದೇಶವು ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್‌ನಲ್ಲಿ ಯುದ್ಧ ಸಾರಿ, ವಿಶ್ವದಾದ್ಯಂತ ಮಾರುಕಟ್ಟೆಗಳನ್ನು ಅಸ್ಥಿರಗೊಳಿಸಿದ್ದಾರೆ.

ಲಿಜ್ ಟ್ರಸ್ ಅವರು ಈ ದೇಶದ ಆರ್ಥಿಕ ಗುರಿಗಳಿಗಾಗಿ ಕೆಲಸ ಮಾಡುವುದು ತಪ್ಪಲ್ಲ, ನಾನು ಅವರ ನಿರ್ಧಾರವನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಕೆಲವು ತಪ್ಪುಗಳನ್ನು ಮಾಡಲಾಗಿದೆ. ಅದು ಕೆಟ್ಟ ಉದ್ದೇಶದಿಂದ ಅಲ್ಲ, ವಾಸ್ತವವಾಗಿ ವಿರುದ್ಧವಾಗಿ, ಅದೇನೇ ಇದ್ದರೂ ತಪ್ಪೇ ಆಗಿದೆ ಎಂದರು.

ಇದೀಗ ಎಲ್ಲಾ ತಪ್ಪುಗಳನ್ನು ಸರಿಪಡಿಸಲು ನಾನು ಪ್ರಧಾನಿಯಾಗಿ ನೇಮಕಗೊಂಡಿದ್ದೇನೆ. ನಾನು ನಮ್ಮ ದೇಶವನ್ನು ಕೇವಲ ಮಾತಿನಿಂದ ಅಲ್ಲ, ಬದಲಿಗೆ ಕೆಲಸ ಮಾಡುವ ಮೂಲಕ ಒಂದುಗೂಡಿಸುತ್ತೇನೆ. ಇದಕ್ಕಾಗಿ ನಾನು ಹಗಲಿರುಳು ಶ್ರಮಿಸುತ್ತೇನೆ. ಈಗ ನಂಬಿಕೆ ಗಳಿಸಿದ್ದೇನೆ, ಅದನ್ನು ಹಾಗೆಯೇ ಕಾಪಾಡಿಕೊಳ್ಳುತ್ತೇನೆ ಎಂದು ಸುನಾಕ್ ನುಡಿದರು.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ... KSRTC ಬಸ್‌ ಫುಟ್‌ಬೋರ್ಡ್‌ ಮೇಲೆ ಪ್ರಯಾಣಿಸಿದ್ದು ಜನರು - ಆದರೆ 500 ರೂ. ದಂಡ ಕಟ್ಟಿದ್ದು ಮಾತ್ರ ನೌಕರ!!