CrimeNEWSದೇಶ-ವಿದೇಶ

ಕಠ್ಮಂಡು: ಭಾರೀ ಭೂಕಂಪನದಿಂದ ಉಪ ಮೇಯರ್ ಸೇರಿ 129 ಮಂದಿ ಮೃತ- ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ

ವಿಜಯಪಥ ಸಮಗ್ರ ಸುದ್ದಿ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಭಾರೀ ಭೂಕಂಪನದಿಂದ ಜಾಜರ್ ಕೋಟ್ ಉಪ ಮೇಯರ್ ಸೇರಿ 129 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.

ಜಾಜರ್ ಕೋಟ್‍ನ ನಲ್‌ಗಢ್ ಪುರಸಭೆಯ ಉಪಮೇಯರ್ ಸರಿತಾ ಸಿಂಗ್ ಅವರು ಭೂಕಂಪನದಿಂದ ಸಂಭವಿಸಿದ ದುರಂತದಲ್ಲಿ ಮೃತಪಟ್ಟಿದ್ದಾರೆ. ಸರಿತಾ ಸಿಂಗ್ ಅವರು ಪಾಲಿಕೆಯ ಪ್ರಧಾನ ಕಚೇರಿಯಲ್ಲಿರುವ ತಮ್ಮ ನಿವಾಸದಲ್ಲಿ ಮಲಗಿದ್ದರು. ಈ ವೇಳೆ ಭೂಕಂಪನದಿಂದ ಕಟ್ಟಡದಡಿ ಸಿಲುಕಿ ಅಸುನೀಗಿದ್ದಾರೆ ಎಂದು ಕರ್ನಾಲಿ ಪ್ರಾಂತ್ಯದ ಪೊಲೀಸ್ ಮುಖ್ಯಸ್ಥ ಡಿಐಜಿ ಭೀಮ್ ಧಾಕಲ್ ಮಾಹಿತಿ ನೀಡಿದ್ದಾರೆ.

ಉಪಮೇಯರ್ ಸರಿತಾ ಸಿಂಗ್ ನೇಪಾಳಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದರು. ನವೆಂಬರ್ 3 ರಂದು ರಾತ್ರಿ 11:47ರ ಸುಮಾರಿಗೆ ಸಂಭವಿಸಿದ ಭೂಕಂಪವು ಕಠ್ಮಂಡು, ಸುತ್ತಮುತ್ತಲಿನ ಜಿಲ್ಲೆಗಳು ಮತ್ತು ನವದೆಹಲಿಯವರೆಗೂ ವ್ಯಾಪಕವಾದ ಪರಿಣಾಮವನ್ನು ಬೀರಿದೆ. ವರದಿಗಳ ಪ್ರಕಾರ, ಪಶ್ಚಿಮ ನೇಪಾಳದ ಜಾಜರ್‌ ಕೋಟ್ ಮತ್ತು ರುಕುಮ್ ಜಿಲ್ಲೆಗಳಲ್ಲಿ ಸರಿಸುಮಾರು 128 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 140ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ಕಟ್ಟಡದ ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲು ನೇಪಾಳ ಸೇನೆ ಮತ್ತು ನೇಪಾಳ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ನೇಪಾಳ ಪ್ರಧಾನಿ ಪುಷ್ಪಕಮಲ್ ದಹಲ್ ಇಂದು ಬೆಳಗ್ಗೆ ವೈದ್ಯಕೀಯ ತಂಡದೊಂದಿಗೆ ಭೂಕಂಪದ ಘಟನಾ ಸ್ಥಳಕ್ಕೆ ತೆರಳಿದ್ದಾರೆ.

ಘಟನೆ ಸಂಬಂಧ ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ಎಕ್ಸ್ ನಲ್ಲಿ ಸಂತಾಪ ಸೂಚಿಸಿದ್ದಾರೆ. ಭಾರತವು ನೇಪಾಳದ ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ. ಹಾಗೆಯೇ ಸಾಧ್ಯವಿರುವ ಎಲ್ಲ ನೆರವನ್ನು ನೀಡಲು ಸಿದ್ಧವಾಗಿದೆ. ಮೃತರ ಕುಟುಂಬಸ್ಥರ ದುಃಖದಲ್ಲಿ ನಾವು ಪಾಲುದಾರರಾಗಿದ್ದೇವೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಬಯಸುತ್ತೇನೆ ಎಂದು ತಿಳಿಸಿದ್ದಾರೆ.

ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 6.4ರಷ್ಟು ದಾಖಲಾಗಿದೆ. ಕಟ್ಟಡಗಳು ಉರುಳಿದ್ದು, ಮನೆಗಳ ಗೋಡೆಗಳು ಬಿರುಕುಬಿಟ್ಟಿದೆ. ಧರೆಗುರುಳಿದ ಕಟ್ಟಡದ ಅವಶೇಷಗಳಡಿ ನೂರಾರು ಮಂದಿ ಸಿಲುಕಿದ್ದಾರೆ. ನೇಪಾಳದ ರುಕುಮ್‌ ವೆಸ್ಟ್ ಪ್ರದೇಶದಲ್ಲಿ 36 ಮಂದಿ, ಜಾಜರ್‍ಕೋಟ್ ಪ್ರದೇಶದಲ್ಲಿ 34 ಮಂದಿ ಮೃತಪಟ್ಟಿದ್ದು, ಈವರೆಗೂ 129 ಮಂದಿ ಅಸುನೀಗಿದ್ದಾರೆ. ಅಲ್ಲದೇ ಸಾವು- ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಳ ಆಗುವ ಸಂಭವ ಇದೆ.

ಭಾರತದ ಹಲವು ರಾಜ್ಯಗಳಲ್ಲೂ ಭೂಮಿ ಕಂಪಿಸಿದೆ. ಬಿಹಾರ, ಜಾರ್ಖಂಡ್, ಉತ್ತರಾಖಂಡ್ ಸೇರಿ ಹಲವೆಡೆ ಭೂಮಿ ನಡುಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 1ತಿಂಗಳಲ್ಲಿ 3ನೇ ಬಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಆತಂಕಗೊಂಡ ಜನ ಮನೆಯಿಂದ ಆಚೆ ಬಂದು ರಾತ್ರಿಯೆಲ್ಲಾ ರೋಡಲ್ಲೇ ಜಾಗರಣ ಮಾಡಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ