NEWSದೇಶ-ವಿದೇಶನಮ್ಮಜಿಲ್ಲೆ

ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆಎಚ್‌ಎಂ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೌಶಲ್ಯ ತರಬೇತಿಯನ್ನು ನೀಡಲು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರದ ಸೂಕ್ಷ್ಮ ಮತ್ತು ಸಣ್ಣ, ಮದ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಸಚಿವರಾದ ಶೋಭಾ ಕರಂದ್ಲಾಜೆ ಅವರಿಗೆ ಸಚಿವ ಕೆ.ಎಚ್. ಮುನಿಯಪ್ಪ ಮನವಿ ಮಾಡಿದರು.

ದೆಹಲಿಯ ಇಎಸ್ಐಸಿ ಭವನದಲ್ಲಿ ಇಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವ ಮುನಿಯಪ್ಪ ಅವರು, ಜಿಲ್ಲೆಯಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಆದ್ಯತೆ ನೀಡಬೇಕು ಎಂದು ಮನವಿ ಪತ್ರ ನೀಡಿದರು.

ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕ್ಷೇತ್ರದಲ್ಲಿ ಉದ್ಯಮ ಪೋರ್ಟಲ್ ಅಡಿಯಲ್ಲಿ ನೋಂದಾಯಿಸಲಾದ 45000 MSME ಘಟಕಗಳು ಸುಮಾರು ನಾಲ್ಕು ಲಕ್ಷ ಉದ್ಯೋಗಾವಕಾಶದೊಂದಿಗೆ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಇನ್ನು ಗ್ರಾಮಾಂತರ ಜಿಲ್ಲೆಯು ನುರಿತ ಮತ್ತು ಕೌಶಲ್ಯ ರಹಿತ ಯುವಕರನ್ನು ಹೊಂದಿದ್ದು, ಬೇಡಿಕೆ ಆಧಾರಿತ ಕೌಶಲ್ಯ ತರಬೇತಿಗಳನ್ನು ನೀಡುವ ಮೂಲಕ ಮೇಲಿನ ವಲಯಗಳಲ್ಲಿ ಕೌಶಲ್ಯ ತರಬೇತಿ ಹೆಚ್ಚಿಸುವ ಸಲುವಾಗಿ ಸಹಕರಿಸುವಂತೆ ಮನವಿ ಮಾಡಿದರು.

ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿಗೆ ಉದ್ಯಮದ ಬೇಡಿಕೆ ಆಧಾರಿತ NSIC ತಾಂತ್ರಿಕ ಸೇವಾ ಕೇಂದ್ರ / ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡಲು ಸಚಿವರಿಗೆ ಮನವಿ‌ ಮಾಡಿದರು.

ಉತ್ತಮ ಕೈಗಾರಿಕೆಗಳ ನಿರ್ಮಾಣಕ್ಕಾಗಿ ಅಗತ್ಯವಿರುವ ಭೂಮಿ ಮತ್ತು ಇತರ ಮೂಲಸೌಕರ್ಯಗಳಾದ ರಸ್ತೆ, ವಿದ್ಯುತ್ ಮತ್ತು ನೀರಿನ ಪೂರೈಕೆಯನ್ನು ಒದಗಿಸಲು ಸಿದ್ದರಿದ್ದು, ತಾವು ಅನುಮತಿ ನೀಡಿ ಗ್ರಾಮಾಂತರ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಸಹಕರಿಸಿ ಎಂದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ