ದೇಶ-ವಿದೇಶ

 KIAನಲ್ಲಿಆರೋಗ್ಯ ತಪಾಸಣೆ ಕಡ್ಡಾಯ: ಅಪರ ಜಿಲ್ಲಾಧಿಕಾರಿ ಜಗದೀಶ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿದೇಶಗಳಿಂದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸುವುದು ಕಡ್ಡಾಯವಾಗಿದ್ದು, ದೇವನಹಳ್ಳಿ ತಾಲೂಕಿನ ಪ್ರಸನ್ನಹಳ್ಳಿಯ ಆಕಾಶ್ ಮೆಡಿಕಲ್ ಕಾಲೇಜಿನಲ್ಲಿ ವಿಮಾನ ನಿಲ್ದಾಣದಿಂದ ಬರುವ ಪ್ರಯಾಣಿಕರಿಗೆ ಕರೋನಾ ವೈರಸ್ ಕುರಿತ ಆರೋಗ್ಯ ತಪಾಸಣಾ (Quarantine Facilities) ಸೌಲಭ್ಯ ಕಲ್ಪಿಸಲಾಗಿದೆ ಎಂದು ಬೆಂಗಳೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಜಗದೀಶ್ ಕೆ.ನಾಯಕ್ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ “ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬರುವ ಪ್ರಯಾಣಿಕರಿಗೆ Quarantine Facilities ಅನ್ನು ಒದಗಿಸುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಬರುವ  ಪ್ರಯಾಣಿಕರಲ್ಲಿ ಕರೋನಾ ವೈರಸ್ ಕುರಿತ ಆರೋಗ್ಯ ತಪಾಸಣೆಯಲ್ಲಿ ಈಗಾಗಲೇ ಎ.ಬಿ.ಸಿ ಎಂದು 03 ಗುಂಪುಗಳನ್ನು ಮಾಡಿಕೊಳ್ಳಲಾಗಿದ್ದು, ನೆಗಡಿ, ಕೆಮ್ಮು, ಜ್ವರದ ಲಕ್ಷಣ ಹೊಂದಿರುವವರನ್ನು ಎ ಗುಂಪು, 60 ವರ್ಷ ಮೇಲ್ಪಟ್ಟಿರುವ ಮಧುಮೇಹ, ರಕ್ತದೊತ್ತಡ, ಅಸ್ತಮಾ ಸೇರಿದಂತೆ ಇನ್ನಿತರೆ ಕಾಯಿಲೆಯಿಂದ ಬಳುತ್ತಿರುವವ ಪ್ರಯಾಣಿಕರನ್ನು ಬಿ ಗುಂಪು ಹಾಗೂ 60 ವರ್ಷದ ಕಡಿಮೆ ವಯಸ್ಸಿನವರಲ್ಲಿ ಕರೋನ ರೋಗದ  ಸೋಂಕಿನ ಲಕ್ಷಣಗಳಿರುವ ಪ್ರಯಾಣಿಕರನ್ನು ಸಿ ಗುಂಪೆಂದು ವಿಂಗಡಿಸಲಾಗಿದ್ದು, ಕರೋನಾ ಸೋಂಕಿತ ಶಂಕಿತ ಪ್ರಯಾಣಿಕರನ್ನು 14 ದಿನಗಳ ಕಾಲ ವೈದ್ಯರ ಮೇಲ್ವಿಚಾರಣೆಯಲ್ಲಿ ತೀವ್ರ ನಿಗಾ ವಹಿಸಲಾಗುವುದು ಎಂದು ತಿಳಿಸಿದರು.

ರಾಜ್ಯ ಸರ್ಕಾರವು ರಾಜ್ಯ ವಿಪತ್ತು ತುರ್ತು ಪರಿಸ್ಥಿತಿ ಎಂದು ಘೋಷಿದ ಹಿನ್ನೆಲೆ ಈಗಾಗಲೇ ಕರೋನಾ ವೈರಸ್ ಹರಡದಂತೆ  ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಡಳಿತವು 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರಲ್ಲದೆ, ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಿ, ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖುದ್ದು ಹಾಜರಿದ್ದು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬರುವ ಪ್ರಯಾಣಿಕರಲ್ಲಿ ಕರೋನಾ ವೈರಸ್ ಕುರಿತ ಆರೋಗ್ಯ ತಪಾಸಣೆಗೆ ದೇವನಹಳ್ಳಿಯ ಆಕಾಶ್ ಮೆಡಿಕಲ್ ಕಾಲೇಜಿಗೆ ಪ್ರಯಾಣಿಕರನ್ನು ಕಾಯ್ದಿರಿಸಿದ ಕೆ.ಎಸ್.ಆರ್.ಟಿ.ಸಿ ಹಾಗೂ ಆಂಬ್ಯುಲೆನ್ಸ್ ಮೂಲಕ ಕರೆದೊಯ್ಯುವಂತೆ ಸೂಚಿಸಿದರು.

ಕರೋನಾ ಶಂಕಿತ ವ್ಯಕ್ತಿಗಳಿಗೆ ಆಕಾಶ್ ಮೆಡಿಕಲ್ ಕಾಲೇಜಿನಲ್ಲಿ ಈಗಾಗಲೇ ಅಗತ್ಯ ಸೌಕರ್ಯಗಳ ಏರ್ಪಾಟು ಮಾಡಲಾಗಿದ್ದು, ಅಧಿಕಾರಿಗಳು ಸಹಕಾರದೊಂದಿಗೆ ಕಾರ್ಯನಿರ್ವಹಿಸುವಂತೆ ಹೇಳಿದರು. ಉಪ ವಿಭಾಗಾಧಿಕಾರಿ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು