CrimeNEWSನಮ್ಮಜಿಲ್ಲೆ

ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ : ಬೆಚ್ಚಿಬಿದ್ದ ಜನತೆ

ವಿಜಯಪಥ ಸಮಗ್ರ ಸುದ್ದಿ

ಗದಗ: ಮಲಗಿದ್ದಲ್ಲೇ ಬೇಟಗೇರಿ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರನ್ನು ಮಾರಕಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದ್ದು, ಬೆಳ್ಳಂಬೆಳಗ್ಗೆ ಸಾರ್ವಜನಿಕರನ್ನು ಬೆಚ್ಚಿಬೀಳುವಂತೆ ಮಾಡಿದೆ.

ಜಿಲ್ಲೆಯ ಬೇಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55) ಪತ್ನಿ ಲಕ್ಷ್ಮಿ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಇನ್ನು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಕೊಲೆಗಾರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಮೃತ ನಾಲ್ವರ ಪೈಕಿ ಮೂವರು ದಾಸರ ಓಣಿಯ ತಮ್ಮ ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದರು. ಈ ಮೂವರು ಮೂಲತಃ ಕೊಪ್ಪಳ ಜಿಲ್ಲೆಯವರು. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆ ಆಗಿತ್ತು. ವಿವಾಹ ಕಾರ್ಯಕ್ರಮಕ್ಕೆ ಸಂಬಂಧಿಕರು ಆಗಮಿಸಿದ್ದರು ನವ ದಂಪತಿಗೆ ಶುಭ ಕೋರಿದ್ದರು.

ಇನ್ನು ಈ ಹತ್ಯೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶ್ವಾನದಳ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್ಪಿ ಬಿ.ಎಸ್. ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ. ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಸ್ಥಳಕ್ಕೆ ಸಚಿವ ಎಚ್‌.ಕೆ ಪಾಟೀಲ್‌ ಸಹ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಚರಂಡಿಯಲ್ಲಿ ಮಾರಕಾಸ್ತ್ರ ಪತ್ತೆ: ಇನ್ನು ದುಷ್ಕರ್ಮಿಗಳು ಕೊಲೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ಚರಂಡಿಯಲ್ಲಿ ಎಸೆದು ಹೋಗಿರುವುದು ಪರಿಶೀಲನೆ ವೇಳೆ ಪತ್ತೆಯಾಗಿದೆ.

ಪ್ರಕರಣ ಕುರಿತು ಮಾಹಿತಿ ನೀಡಿರುವ ಎಸ್ಪಿ ನೇಮಗೌಡ ಅವರು, ಮಧ್ಯರಾತ್ರಿ ನಾಲ್ವರ ಕೊಲೆಯಾಗಿದೆ. ಕುಟುಂಬಸ್ಥರು ಹೇಳುವ ಪ್ರಕಾರ ತಡರಾತ್ರಿ ರಾತ್ರಿ 2 ರಿಂದ 3 ಗಂಟೆ ಸಮಯದಲ್ಲಿ ಕೊಲೆ ಆಗಿದೆ. ಮೊದಲಿಗೆ ಹಂತಕರು ಬಾಗಿಲು ಬಡಿದಿದ್ದಾರೆ, ಯಾರೊಬ್ಬರೂ ಬಾಗಿಲು ತೆರೆಯದ ಕಾರಣ, ಹತ್ಯೆಕೋರರು ಮಹಡಿಯಿಂದ ಬಂದು ಹತ್ಯೆಗೈದಿರುವ ಶಂಕೆ ಇದೆ. ಆದರೆ ಹಂತಕರು ಯಾರು ಅನ್ನೋದು ತಿಳಿದುಬಂದಿಲ್ಲ. ಆದಷ್ಟು ಬೇಗ ಅವರನ್ನು ಪತ್ತೆಹಚ್ಚಿ ಬಂಧಿಸುತ್ತೇವೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
20 ದಿನದೊಳಗೆ ರೈತರಿಗೆ ಬರ ಪರಿಹಾರ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ KSRTC: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್‌ -6ಮಂದಿಗೆ ಗಾಯ KSRTC ಗುಂಡ್ಲುಪೇಟೆ ಘಟಕ: ನೌಕರರಿಗೆ ಡ್ಯೂಟಿ ಕೊಡದೆ ಕಿರುಕುಳ ನೀಡುತ್ತಿರುವ ಡಿಎಂ, ಎಟಿಎಸ್‌ - DC ಮೌನ NWKRTC: ಬಸ್‌ನಿಂದ ಆಯತಪ್ಪಿ ಬಿದ್ದು ಚಕ್ರದಡಿ ಸಿಲುಕಿ ಮಹಿಳೆ ಧಾರುಣಸಾವು ಬಸ್‌ - ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ : ನಾಲ್ವರು ಮೃತ, ಹಲವರಿಗೆ ಗಾಯ KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!?