ಬೆಂಗಳೂರು ಗ್ರಾಮಾಂತರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ನೀಡುತ್ತಿರುವ 6000 ರೂ.ಗಳ ಅರ್ಥಿಕ ನೆರವು ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತನಿಗೆ ಸಿಗುವಂತಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ 2025-26 ನೇ ಸಾಲಿನ ಮೊದಲನೇ ತ್ರೈಮಾಸಿಕ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಿಸಾನ್ ಸಮ್ಮಾನ್ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕವಾಗಿ ಬೆಂಬಲವಾಗಿ ನಿಲ್ಲಲು ವಾರ್ಷಿಕ 6000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 1,70,000 ರೈತರಿದ್ದು ಕಳೆದ ಸಾಲಿನಲ್ಲಿ 63,375 ರೈತರು ಮಾತ್ರ ಯೋಜನೆಯ ಸೌಲಭ್ಯ ಪಡೆದುಕೊಂಡಿದ್ದಾರೆ. ಈ ಯೋಜನೆಯ ಬಗ್ಗೆ ಜಿಲ್ಲೆಯಲ್ಲಿ ವಿಶೇಷ ಅಭಿಯಾನ ಕೈಗೊಳ್ಳುವ ಮೂಲಕ ಕ್ಷೇತ್ರ ಭೇಟಿ ನೀಡಿ ಸೌಲಭ್ಯ ವಂಚಿತ ರೈತರ ಸಮಸ್ಯೆ ಆಲಿಸಿ, ಅದನ್ನು ಬಗೆ ಹರಿಸುವ ಮೂಲಕ ಅರ್ಹ ಪ್ರತಿಯೊಬ್ಬ ರೈತನಿಗೂ ಈ ಯೋಜನೆಯ ಸೌಲಭ್ಯ ಸಿಗುವಂತೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆ ಮಾಡಿಸುವುದರಿಂದ ಬೆಳೆ ನಷ್ಟವನ್ನು ವಿಮೆ ಮೂಲಕ ಪಡೆಯಬಹುದು. ಈ ಬಗ್ಗೆ ರೈತರಿಗೆ ಮನವರಿಕೆ ಮಾಡುವ ಮೂಲಕ ವ್ಯಾಪಕ ಪ್ರಚಾರ ಕೈಗೊಂಡು ನೋಂದಣಿ ಹೆಚ್ಚಿಸಿ ಎಂದರು.
ಕಿಸಾನ್ ಕ್ರೆಡಿಟ್ ಕಾರ್ಡ್ ಸದುಉಪಯೋಗ ಪಡೆಯಿರಿ: ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯು ರೈತರಿಗೆ ಕೃಷಿ ಮತ್ತು ಕೃಷಿ ಆಧಾರಿತ ಚಟುವಟಿಕೆ ಕೈಗೊಳ್ಳಲು ಬ್ಯಾಂಕಿಂಗ್ ವ್ಯವಸ್ಥೆಯಿಂದ ಸಾಕಷ್ಟು ಮತ್ತು ಸಕಾಲಿಕ ಸಾಲ ಬೆಂಬಲವನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ.
ರೈತರಿಗೆ ಅವರ ಕೃಷಿ ಕಾರ್ಯಾಚರಣೆಗಳಿಗೆ ಸಾಕಷ್ಟು ಮತ್ತು ಸಕಾಲಿಕ ಸಾಲವನ್ನು ಒದಗಿಸುವ ಉದ್ದೇಶದಿಂದ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಯೋಜನೆಯನ್ನು ಪರಿಚಯಿಸಲಾಯಿತು. ಕೇಂದ್ರ ಸರ್ಕಾರವು ರೈತರಿಗೆ 2% ಬಡ್ಡಿ ಸಬ್ವೆನ್ಷನ್ ಮತ್ತು 3% ತ್ವರಿತ ಮರುಪಾವತಿ ಪ್ರೋತ್ಸಾಹವನ್ನು ನೀಡುತ್ತದೆ, ಹೀಗಾಗಿ ಸಾಲವು ವಾರ್ಷಿಕ 4% ಸಬ್ಸಿಡಿ ದರದಲ್ಲಿ ಲಭ್ಯವಾಗುತ್ತಿದೆ. ಈ ಯೋಜನೆ ಬಗ್ಗೆ ರೈತರಿಗೆ ಹೆಚ್ಚಿನ ಜಾಗೃತಿ ಮೂಡಿಸಿ ಹೆಚ್ಚು ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಮಾಡಿಸಲು ಅಗತ್ಯ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜೆ.ಜೆ.ಎಂ ಕಾಮಗಾರಿಗೆ 968 ಕೋಟಿ ಅನುದಾನ: ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಕಲ್ಪಿಸುವ ದೃಷ್ಟಿಯಿಂದ ಜಲ ಜೀವನ್ ಮಿಷನ್ ಯೋಜನೆ ಜಾರಿಗೆ ತರಲಾಗಿದೆ. ಜಿಲ್ಲೆಗೆ 968.15 ಕೋಟಿ ಅನುದಾನ ಬಿಡುಗಡೆ ಆಗಿದೆ. 616 ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಂಡಿದೆ. ಕಾಮಾಗಾರಿ ಪೂರ್ಣಗೊಂಡಿರುವ ಗ್ರಾಮಗಳಲ್ಲಿ ಖುದ್ದು ಪರಿಶೀಲನೆ ನೆಡೆಸಲಾಗುವುದು ಎಂದರು.
ಜಿಲ್ಲೆಯಲ್ಲಿ 770 ಶುದ್ಧ ಕುಡಿಯುವ ನೀರು ಘಟಕಗಳಿದ್ದು 4 ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ವರದಿ ಬಂದಿದೆ. 1000 ಕ್ಕಿಂತ ಅಧಿಕ ಜನ ವಾಸಿಸುವ ಗ್ರಾಮಗಳಲ್ಲಿ ಹೆಚ್ಚುವರಿಯಾಗಿ ಇನ್ನೊಂದು ಘಟಕ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಿ. ಅಂಗನವಾಡಿ, ಶಾಲಾ ಕಾಲೇಜು, ಆಸ್ಪತ್ರೆ, ಹಾಸ್ಟೆಲ್, ಸಾರ್ವಜನಿಕ ಪ್ರದೇಶಗಳಲ್ಲಿನ ಶುದ್ಧ ಕುಡಿಯುವ ನೀರು ಘಟಕಗಳನ್ನು ಖಡ್ಡಾಯವಾಗಿ ಕಾಲಕಾಲಕ್ಕೆ ಪರೀಕ್ಷೆ ನಡೆಸಿ ಎಂದರು.
ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸಮಸ್ಯೆ ಬಹುದಿನಗಳಿಂದ ಸಮಸ್ಯೆ ಆಗಿಯೇ ಉಳಿದಿದೆ. ಕೊಳವೆ ಬಾವಿಗಳಲ್ಲಿ ನೀರು ಕಡಿಮೆ ಆಗಿದೆ. ವಾರಕ್ಕೆ, 15 ದಿನಕ್ಕೊಮ್ಮೆ ನೀರು ಸಿಗುತ್ತಿದ್ದು ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಪರಿಹಾರ ಕಂಡುಹಿಡಿದು ನೀರಿನ ಬವಣೆ ನೀಗಿಸಲು ಕ್ರಮ ವಹಿಸಿ ಎಂದರು.
ಆಯುಷ್ಮಾನ್ ಕಾರ್ಡ್ ಪ್ರತಿಯೊಬ್ಬರಿಗೂ ತಲುಪವಂತೆ ಕ್ರಮ ವಹಿಸಿ. ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿ ವ್ಯಕ್ತಿಗೆ 5 ಲಕ್ಷ ರೂಪಾಯಿಗಳ ಉಚಿತ ವೈದ್ಯಕೀಯ ಸೌಲಭ್ಯ ಸಿಗುತ್ತದೆ. ಪ್ರತಿಯೊಬ್ಬರಿಗೂ ಈ ಸೌಲಭ್ಯ ಸಿಗುವಂತಾಗಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಕೊರತೆ ಬಗ್ಗೆ ದೂರು ಬಂದಿದ್ದು ಔಷಧಿ ಕೊರತೆ ಉಂಟಾದ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಎಂದರು.
ಕೇಂದ್ರ ವಸತಿ ಶಾಲೆ, ನಿಲಯಗಳಿಗೆ ಪ್ರಸ್ತಾವನೆ ಸಲ್ಲಿಸಿ: ಕೆಂದ್ರ ಸರ್ಕಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆ ಇಲ್ಲ. ಜಿಲ್ಲೆಯಿಂದ ಇದುವರೆಗೆ ಯಾವುದೇ ಇಲಾಖೆಯಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ. ವಸತಿ ಶಾಲೆ, ನಿಲಯಗಳ ಸ್ಥಾಪನೆ, ವೃದ್ಧಾಪ್ಯ ವೇತನ, ಅನಾಥಾಶ್ರಮ, ಮನೆ ನಿರ್ಮಾಣ, ಶೀಥಲ ಶೇಖರಣಾ ಕೇಂದ್ರ, ಮಲ್ಟಿ ಟಾಸ್ಕಿಂಗ್ ಮಾರ್ಕೆಟಿಂಗ್ ಸೆಂಟರ್ ಈ ಎಲ್ಲವನ್ನೂ ಸ್ಥಾಪಿಸಲು ಅವಕಾಶವಿದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಪ್ರಸ್ತಾವನೆ ಸಲ್ಲಿಸಿ, ಕೇಂದ್ರದಲ್ಲಿ ಅನುಮೋದನೆ ಮಾಡಿಸುತ್ತೇನೆ ಎಂದರು. ಆದರ್ಶ ಗ್ರಾಮ ಯೋಜನೆಯಡಿ ಜಿಲ್ಲೆಯಲ್ಲಿ 14 ಗ್ರಾಮ ಆಯ್ಕೆ ಆಗಿದ್ದು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಹೇಳಿದರು.
ಕೇಂದ್ರ ಸರ್ಕಾರವು ದೇಶದ ಅಭಿವೃದ್ಧಿಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದೆ. ರೈತರ ಆದಾಯ ದ್ವಿಗುಣಗೊಳಿಸುವುದು, ಮಹಿಳೆಯರ ಸಬಲೀಕರಣ, ಆರೋಗ್ಯ ಕ್ಷೇತ್ರ, ತಂತ್ರಜ್ಞಾನ, ವೈಜ್ಞಾನಿಕ ಕ್ಷೇತ್ರ ಹಾಗೂ ಇತರೆ ಕ್ಷೇತ್ರಗಳನ್ನು ಗಮನದಲ್ಲಿ ಇಟ್ಟುಕೊಂಡು ವಿಕಸಿತ ಭಾರತ ನಿರ್ಮಾಣಕ್ಕೆ ಹಲವು ಜನಪರ ಯೋಜನೆಗಳು ಜಾರಿಗೆ ತರಲಾಗಿದೆ. ಅಂತಹ ಕೇಂದ್ರ ಪುರಸ್ಕೃತ ಸರ್ಕಾರದ ಯೋಜನೆಗಳ ಸೌಲಭ್ಯ ಪ್ರತಿಯೊಬ್ಬ ಫಲಾನುಭವಿಗೆ ತಲುಪಲು ಅಧಿಕಾರಿಗಳ ಸಮನ್ವಯತೆ ಮತ್ತು ಕಾರ್ಯಕ್ಷಮತೆ ಮುಖ್ಯ. ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ವಿವಿಧ ಹಂತಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಎನ್.ಅನುರಾಧ, ಉಪಕಾರ್ಯದರ್ಶಿ ಶಿವಕುಮಾರ್, ದೊಡ್ಡಬಳ್ಳಾಪುರ ವಿಭಾಗದ ಡಿವೈಎಸ್ಪಿ ರವಿ, ದಿಶಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Related

You Might Also Like
ಕರ್ತವ್ಯ ಲೋಪವೆಸಗಿದ ಮೂವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ
ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯ ಮಹಾಲಕ್ಷ್ಮಿಪುರ ವಿಭಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಸಿಬ್ಬಂದಿಯನ್ನು ಕರ್ತವ್ಯ ಲೋಪವೆಸಗಿರುವ ಕಾರಣ ಕರ್ತವ್ಯದಿಂದ ಬಿಡುಗಡೆಗೊಳಿ ಪಶ್ಚಿಮ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್...
ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ: ಜಿಲ್ಲಾಧಿಕಾರಿ ಬಸವರಾಜು
10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ...
ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸುವ ನೌಕರರ ವಿರುದ್ಧ ಕ್ರಮ: KSRTC ಎಂಡಿ ಅಕ್ರಮ್ ಪಾಷ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ತೀರ್ಮಾನಿಸಿರುವುದರಿಂದ ನೌಕರರು...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ನಾಳೆ ಖಾಸಗಿ ಬಸ್ ಮಾಲೀಕರ ಸಭೆ ಕರೆದ ಸಾರಿಗೆ ಆಯುಕ್ತರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ಆಯುಕ್ತರ...
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...