CrimeNEWSನಮ್ಮಜಿಲ್ಲೆ

KKRTC: ಕಂಡಕ್ಟರ್‌ರಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಸಿ ಜಗದೀಶ್‌

ವಿಜಯಪಥ ಸಮಗ್ರ ಸುದ್ದಿ

ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಹೊಸಪೇಟೆ ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿ (ಡಿಸಿ) ನಿರ್ವಾಹಕರೊಬ್ಬರಿಂದ ಲಂಚ ತೆಗೆದುಕೊಳ್ಳುತ್ತಿದ್ದಾಗ ರೆಡ್‌ಹ್ಯಾಂಡ್‌ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಎಸ್‌.ಜಗದೀಶ್‌ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಅಧಿಕಾರಿ. ಬುಧವಾರ ರಾತ್ರಿ ಹೊಸಪೇಟೆಯಲ್ಲಿರುವ ಕಚೇರಿ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಕರ್ತವ್ಯ ಲೋಪ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ನಿರ್ವಾಹಕರೊಬ್ಬರಿಂದ ₹20 ಸಾವಿರ ಲಂಚ ಪಡೆಯುತ್ತಿದ್ದಾಗ ಖೆಡ್ಡಕ್ಕೆ ಬೀಳಿಸಿದ್ದಾರೆ.

ನಿರ್ವಾಹಕರ ಪ್ರಕರಣದಲ್ಲಿ ಇಲಾಖಾ ವಿಚಾರಣೆಯನ್ನು ಕೈಬಿಡಲು ಡಿಸಿ ಜಗದೀಶ್‌ 25 ಸಾವಿರ ರೂ.ಗಳೀಗೆ ಬೇಡಿಕೆ ಇಟ್ಟಿದ್ದ. ಈ ಪೈಕಿ 5 ಸಾವಿರ ರೂ.ಗಳನ್ನು ಮುಂಗಡವಾಗಿ ಪಡೆದಿದ್ದ. ಇನ್ನು ಉಳಿದ 20 ಸಾವಿರ ರೂ.ಗಳನ್ನು ಕೆಕೆಆರ್‌ಟಿಸಿ ಬಸ್‌ ನಿಲ್ದಾಣದ ಮೊದಲ ಮಹಡಿಯಲ್ಲಿರುವ ತಮ್ಮ ಕಚೇರಿಯಲ್ಲಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಸದ್ಯ ನಗದು ಸಮೇತ ಡಿಸಿ ಸಿಕ್ಕಿಬಿದ್ದಿರುವುದಾಗಿ ಬಳ್ಳಾರಿ ಲೋಕಾಯುಕ್ತ ಎಸ್‌ಪಿ ಸಿದ್ದರಾಜು ತಿಳಿಸಿದ್ದಾರೆ. ಡಿವೈಎಸ್‌ಪಿ ಶೀಲವಂತ ಹೊಸಮನಿ ನೇತೃತ್ವದಲ್ಲಿ ಈ ದಾಳಿ ನಡೆಯಿತು ಎಂದು ವಿವರಿಸಿದ್ದಾರೆ.

ಸಾರಿಗೆಯ ನಾಲ್ಕೂ ನಿಗಮದ ಬಹುತೇಕ ಎಲ್ಲ ಡಿಸಿಗಳು ತಮ್ಮ ನೌಕರರಿಂದ ಲಂಚ ವಸೂಲಿ ಮಾಡುವುದಕ್ಕೇ ಡಿಪೋ ಮಟ್ಟದಲ್ಲಿ ಚೇಳಾಗಳನ್ನು ಇಟ್ಟುಕೊಂಡಿದ್ದಾರೆ. ಆ ಚೇಳಾಗಳಿಗೆ ನೌಕರರಿಂದ ಲಂಚ ವಸೂಲಿ ಮಾಡುವುದು ಬಿಟ್ಟರೆ ಬೇರೆ ಕೆಲಸವೇ ಇಲ್ಲ.

ಇನ್ನು ಇಂಥವರಿಗೆ ನೌಕರರ ಪರ ಸಂಘಟನೆಗಳು ಏನು ಮಾಡುವುದಿಲ್ಲ, ಕೆಚ್ಚೆದೆಯ ನೌಕರರೇ ಬುದ್ಧಿ ಕಲಿಸಬೇಕು. ಆದರೆ, ಬಹುತೇಕ ನೌಕರರು ಎಲ್ಲಿ ಕೆಲಸಕ್ಕೆ ಕುತ್ತು ತರುತ್ತರೋ ಎಂದು ಹೆದರಿ ಈ ಅಧಿಕಾರಿಗಳು ಮತ್ತು ಅವರ ಚೇಳಾಗಳು ಇಡುವ ಲಂಚದ ಬೇಡಿಕೆಗೆ ಒಪ್ಪಿ ಕಷ್ಟಪಟ್ಟು ದುಡಿದಿರುವುದನ್ನು ಈ ಮಿಕಗಳಿಗೆ ಹಾಕುತ್ತಿದ್ದಾರೆ.

ಇನ್ನಾದರೂ ಸಾರಿಗೆ ನಿಗಮದ ಎಲ್ಲ ಡಿಗಳು ಎಚ್ಚೆತ್ತುಕೊಳ್ಳಬೇಕು. ಜತೆಗೆ ನಾಲ್ಕೂ ನಿಗಮಗಳ ಎಂಡಿಗಳು ಇಂಥವರನ್ನು ವಜಾಮಾಡಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ