ಭಾಲ್ಕಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬೀದರ ವಿಭಾಗ ಭಾಲ್ಕಿ ಘಟಕದಲ್ಲಿ ಜಾಕ್ ಸ್ಲಿಪ್ ಆದ ಪರಿಣಾಮ ತಾಂತ್ರಿಕ ಸಿಬ್ಬಂದಿಯೊಬ್ಬರ ಎಡಗೈನ ಹೆಬ್ಬೆರಳು ತುಂಡಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಡಿ.6ರ ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ಅವಘಟ ಸಂಭವಿಸಿದ್ದು ಘಟಕದ ತಾಂತ್ರಿಕ ಸಿಬ್ಬಂದಿ ಡೊಂಡಿಬಾ ಅವರ ಹೆಬ್ಬೆರಳು ತುಂಡಾಗಿದೆ. ಕೂಡಲೆ ಅವರನ್ನು ಭಾಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ಗುರುನಾನಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ.
ಬಸ್ ರಿಪೇರಿ ಮಾಡುತ್ತಿದ್ದ ವೇಳೆ ಜಾಕ್ ಸ್ಲಿಪ್ ಆಗಿದ್ದರಿಂದ ಡೊಂಡಿಬಾ ಅವರ ಹೆಬ್ಬೆರಳು ಬಸ್ ಕೆಳಗೆ ಸಿಕ್ಕಿಹಾಕಿಕೊಂಡು ತುಂಡಾಗಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.
ಆಸ್ಪತ್ರೆಯಲ್ಲೇ ಲೇಬರ್ ಆಫೀಸರ್, ಘಟಕ ವ್ಯವಸ್ಥಾಪಕರು ಹಾಗೂ ಇತರ ಸಿಬ್ಬಂದಿ ಇದ್ದು ಅವರ ಚಿಕತ್ಸೆಗೆ ಅಗತ್ಯವಿರುವ ಎಲ್ಲ ನೆರವು ನೀಡುತ್ತಿದ್ದಾರೆ.
ಈ ನಡುವೆ ಎಲ್ಲ ತಾಂತ್ರಿಕ ಸಿಬ್ಬಂದಿಗಳು ಕೂಡ ತಾವು ಘಟಕದಲ್ಲಿ ದೈನಂದಿನ ಕಾರ್ಯನಿರ್ವಹಿಸುವಾಗ ಸುರಕ್ಷತೆ & ಜಾಗೃತೆಯಿಂದ ಕಾರ್ಯ ನಿರ್ವಹಿಸುವ ಮೂಲಕ ಇಂಥ ಅಪಾಯದಿಂದ ದೂರವಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.