KKRTC ಬಸ್ ಡಿಕ್ಕಿ ಬೈಕ್ ಸವಾರ ಸಾವು ಮತ್ತೊಂದು ಘಟನೆಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ ಇಬ್ಬರು ಮೃತ, ಮೂವರಿಗೆ ಗಾಯ
![](https://vijayapatha.in/wp-content/uploads/2024/07/15-July-bus-Accident.jpg)
ಕಲಬುರಗಿ: ಬೈಕ್‌ಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಕಾಳಗಿ ತಾಲೂಕಿನ ಕಂದಗೋಳ ಗ್ರಾಮದ ಬಳಿ ಘಟನೆ ನಡೆದಿದೆ.
ಅಪಘಾತದಲ್ಲಿ ಕಾಳಗಿ ತಾಲೂಕಿನ ಸಾಲಹಳ್ಳಿ ಗ್ರಾಮದ 27 ವರ್ಷದ ಮಲ್ಲಿಕಾರ್ಜುನ ಸುಂಠಾಣ್ ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ.
ಕಲಬುರಗಿಯಿಂದ ಚಿಂಚೋಳಿ ಪಟ್ಟಣಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಈ ಸಂಬಂಧ ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ: ನಿದ್ರೆಯ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ತಳಕು ಗ್ರಾಮದಿಂದ ಹಾದು ಹೋಗುವ ಹೈವೇ ಬ್ರಿಡ್ಜ್ ಸಮೀಪ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಬಳ್ಳಾರಿ ಮೂಲದ ಗೋಪಿನಾಥ್ (52), ಲಲಿತಮ್ಮ (47) ಮೃತಟ್ಟಿದ್ದು, ಶ್ರೇಯ, ಶ್ರೀನಿವಾಸ್ ಹಾಗೂ ಚಾಲಕ ಸುರೇಶ್ ತೀವ್ರ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ.
ಸದ್ಯ ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ರವಾನಿಸಲಾಗಿದೆ. ಬೆಂಗಳೂರಿನಲ್ಲಿ ಉಪನಯನ ಕಾರ್ಯಕ್ರಮ ಮುಗಿಸಿ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ತಳಕು ಪಿಎಸ್ಐ ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)