NEWSನಮ್ಮಜಿಲ್ಲೆನಮ್ಮರಾಜ್ಯ

KKRTC: 38 ತಿಂಗಳ ಅರಿಯರ್ಸ್‌, 2024ರ ಜ.1ರಿಂದ ಜಾರಿಗೆ ಬರುವಂತೆ “ಸರಿ ಸಮಾನ ವೇತನ” ನೀಡಲು ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದ ಕೂಡ್ಲಿಗಿ ಸಿಬ್ಬಂದಿ

ವಿಜಯಪಥ ಸಮಗ್ರ ಸುದ್ದಿ

ವಿಜಯನಗರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೂಡ್ಲಿಗಿ ಘಟಕದ ಸಿಬ್ಬಂದಿಗಳು ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ನಿನ್ನೆ ಸಂಜೆ ಸಚಿವರನ್ನು ಭೇಟಿ ಮಾಡಿದ ಕೂಡ್ಲಿಗಿ ಘಟಕದ ಸಿಬ್ಬಂದಿಗಳು ಮನವಿ ಪತ್ರ ಸಲ್ಲಿಸಿ 1/1/2020ರಿಂಧ ಜಾರಿಗೆಯಾಗಬೇಕಾದ ವೇತನ ಪರಿಷ್ಕರಣೆ ವಿಳಂಬವಾಗಿ ಶೇ.15 ನೀಡಿದ್ದು, ಅದಕ್ಕೆ ಸಂಬಂಧಿಸಿದಂತೆ ಉಳಿದ 38 ತಿಂಗಳ ವೇತನ ಹಿಂಬಾಕಿಯನ್ನು (Arrears) ಒಂದೇ ಕಂತಿನಲ್ಲಿ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನು 1/1/2024ಕ್ಕೆ ಸಾರಿಗೆ ನೌಕರ ವೇತನಕ್ಕೆ ಸಂಬಂಧಿಸಿದಂತೆ ನಿಮ್ಮ ಕಾಂಗ್ರೆಸ್‌ ಪಕ್ಷ ವಿಧಾನಸಭಾ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಸರ್ಕಾರಿ ನೌಕರರ “ಸರಿ ಸಮಾನ ವೇತನ” ನೀಡಬೇಕು. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಅಂತಿಮ ಮತ್ತು ದೃಢ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಬೇಕಿದೆ.

ಇನ್ನು ಕೂಡ್ಲಿಗಿ ಡಿಪೋ ಹಳೆಯದಾಗಿದ್ದು ಅದನ್ನು ನವೀಕರಣ ಮಾಡಬೇಕು ಹಾಗೂ ಸಾರಿಗೆ ನೌಕರರ ವಸತಿ ಗೃಹಗಳನ್ನು ನಿರ್ಮಿಸಲು ಅಗತ್ಯವಾದ ನಿವೇಶನ ನೀಡಬೇಕು ಎಂದು ಮನವಿ ಮಾಡಿದರು.

ನಿಮ್ಮ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ “ಶಕ್ತಿಯೋಜನೆ”ಯನ್ನು ಸಮಪರ್ಕವಾಗಿ ಹಗಲು-ರಾತ್ರಿ ಅತ್ಯಂತ ಶ್ರಮವಹಿಸಿ ಸಂಪೂರ್ಣವಾಗಿ ನಿಭಾಯಿಸಿ ಘನಸರ್ಕಾರಕ್ಕೆ ಜನಪ್ರಿಯತೆ ತಂದುಕೊಟ್ಟಿದ್ದೇವೆ. ಆದ್ದರಿಂದ ಸಾರಿಗೆ ನೌಕಕರ ಪರಿಶ್ರಮವನ್ನು ಅರಿತು ನಮ್ಮ ಬೇಡಿಕೆಗಳನ್ನು ಅತಿ ಶೀಘ್ರದಲ್ಲಿ ಈಡೇರಿಸಿಕೊಡಬೇಕೆಂದು ಪ್ರಾರ್ಥಿಸುತ್ತೇವೆ ಎಂದು ಹೇಳಿದರು.

ಘಟಕದ ನೌಕರರಿಂದ ಮನವಿ ಸ್ವೀಕರಿಸಿದ ಸಚಿವರು ಈ ಬಗ್ಗೆ ಅಧಿಕಾರಿಗಳು ಮತ್ತು ನೌಕರರು ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂಧಿನ ದಿನಗಳಲ್ಲಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲಾಗುವುದು. ಹೀಗಾಗಿ ನಿಗಮದ ಅಧಿಕಾರಿಗಳು ಮತ್ತು ನೌಕರರು ಭಯಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು ಎಂದು ಘಟಕದ ನೌಕರರು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ