ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿಯಿರುವ ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇರ ನೇಮಕಾತಿಗೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೂಲ ದಾಖಲಾತಿಗಳ ಪರಿಶೀಲನೆಯ ಸಮಯದಲ್ಲಿ ಚಾಲನಾ ಪರೀಕ್ಷೆಗೆ ಅರ್ಹರಾಗಿರುವ ಅಭ್ಯರ್ಥಿಗಳಿಗೆ ಮಾತ್ರ 3-07-2023ರಿಂದ ಚಾಲನಾ ಪರೀಕ್ಷೆಯನ್ನು ಕೆಕೆಆರ್‌ಟಿಸಿ ನಿಗಮದ “ಪ್ರಾದೇಶಿಕ ತರಬೇತಿ ಕೇಂದ್ರ-ಹುಮನಾಬಾದ್”ನಲ್ಲಿ ಆರಂಭಿಸಲಾಗುವುದು.
ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್: kkrtcjobs .karnataka.gov.in/drivingtest ಗೆ ಭೇಟಿ ನೀಡಿ, ತಮ್ಮ ಕರೆಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು, ಕರೆ ಪತ್ರದಲ್ಲಿ ನಮೂದಿಸಲಾದ ದಿನಾಂಕದಂದು ತಪ್ಪದೇ ಪರೀಕ್ಷಾ ಸ್ಥಳದಲ್ಲಿ ಹಾಜರಿರಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ 6366374977/ 08472-227687ಕ್ಕೆ ಕರೆ ಮಾಡ ಬಹುದು.