CrimeNEWS

KKRTC: ಚಾಲಕ, ಕಂಡಕ್ಟರ್‌ ಮೇಲೆ ಹಲ್ಲೆ – ವಿದ್ಯಾರ್ಥಿ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕುಷ್ಟಗಿ: ಕೊಪ್ಪಳ- ಕುಷ್ಟಗಿ ಮಾರ್ಗಮಧ್ಯದ ಕುದುರಿಮೋತಿ ಕ್ರಾಸ್‌ ಬಳಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ 8ಜನರಿಂದ ಗುಂಪು ಹಲ್ಲೆ ಮಾಡಿರುವ ಘಟನೆ ಜರುಗಿದೆ.

ಹಲ್ಲೆಯಲ್ಲಿ ಕುಷ್ಟಗಿ ಘಟಕದ ನೌಕರರಾದ ಚಾಲಕ ಹನುಮಂತಗೌಡ ಮತ್ತು ನಿರ್ವಾಹಕ ರಾಜಸಾಬ್‌ ಎಂಬುವರು ಗಾಯಗೊಂಡಿದ್ದು ಈ ಇಬ್ಬರನ್ನು ಕುಷ್ಟಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಫುಟ್‌ಬೋರ್ಡ್‌ನಲ್ಲಿ ನಿಂತಿದ್ದವವರನ್ನು ಒಳಗಡೆ ಬನ್ನಿ ನಿರ್ವಾಹಕರು ಕರೆದಿದ್ದಕ್ಕೆ ಕೋಪಗೊಂಡ ವಿದ್ಯಾರ್ಥಿ ತನ್ನ ಸ್ನೇಹಿತರಿಗೆ ಕರೆ ಮಾಡಿ ಕರೆಸಿಕೊಂಡು ಕುದುರಿಮೋತಿ ಹತ್ತಿರ ಬಸ್‌ ಬರುತ್ತಿದ್ದಂತೆ ಏಕಾಏಕಿ ಬಂದು ಹಲ್ಲೆ ಮಾಡಿದ್ದಾರೆ.

ಹಲ್ಲೆಯಿಂದ ನೌಕರರು ಕೈ ಮತ್ತು ಮುಖ ಸೇರಿದಂತೆ ದೇಹದ ಇತರ ಭಾಗಗಳಲ್ಲಿ ಗಾಯಗಳಾಗಿವೆ. ಮೊಣಕೈ ಮುರಿದಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಲ್ಲೆ ಸಂಬಂಧ ಕುಷ್ಟಗಿ ವಿಭಾಗೀಯ ಅಧಿಕಾರಿಗಳು ಬೇವೂರ ಪೊಲೀಸ್‌ ಠಾಣೆಯಲ್ಲಿ ನಿರ್ವಾಹಕ ರಾಜಸಾಬ್‌ ಜತೆ ಹೋಗಿ ದೂರು ನೀಡಿದ್ದಾರೆ. ಕೇಸು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ