CrimeNEWSನಮ್ಮರಾಜ್ಯ

KKRTC ಬಸ್‌ ಡಿಕ್ಕಿ ಬೈಕ್‌ ಸವಾರ ಸಾವು ಮತ್ತೊಂದು ಘಟನೆಯಲ್ಲಿ ಡಿವೈಡರ್​​ಗೆ ಕಾರು ಡಿಕ್ಕಿ ಇಬ್ಬರು ಮೃತ, ಮೂವರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಬೈಕ್‌ಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಕಾಳಗಿ ತಾಲೂಕಿನ ಕಂದಗೋಳ ಗ್ರಾಮದ ಬಳಿ ಘಟನೆ ನಡೆದಿದೆ.

ಅಪಘಾತದಲ್ಲಿ ಕಾಳಗಿ ತಾಲೂಕಿನ ಸಾಲಹಳ್ಳಿ ಗ್ರಾಮದ 27 ವರ್ಷದ ಮಲ್ಲಿಕಾರ್ಜುನ ಸುಂಠಾಣ್ ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ.

ಕಲಬುರಗಿಯಿಂದ ಚಿಂಚೋಳಿ ಪಟ್ಟಣಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

ಈ ಸಂಬಂಧ ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ: ನಿದ್ರೆಯ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ತಳಕು ಗ್ರಾಮದಿಂದ ಹಾದು ಹೋಗುವ ಹೈವೇ ಬ್ರಿಡ್ಜ್ ಸಮೀಪ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಬಳ್ಳಾರಿ ಮೂಲದ ಗೋಪಿನಾಥ್ (52), ಲಲಿತಮ್ಮ (47) ಮೃತಟ್ಟಿದ್ದು, ಶ್ರೇಯ, ಶ್ರೀನಿವಾಸ್ ಹಾಗೂ ಚಾಲಕ ಸುರೇಶ್ ತೀವ್ರ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ಸದ್ಯ ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ರವಾನಿಸಲಾಗಿದೆ. ಬೆಂಗಳೂರಿನಲ್ಲಿ ಉಪನಯನ ಕಾರ್ಯಕ್ರಮ ಮುಗಿಸಿ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ತಳಕು ಪಿಎಸ್ಐ ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ