CrimeNEWSನಮ್ಮಜಿಲ್ಲೆ

NWKRTC ಬಸ್‌ ಟೈರ್ ಬ್ಲಾಸ್ಟ್ : ಚಾಲಕ ಸಾವು, 25 ಮಂದಿಗೆ ಗಾಯ, ಮೂವರ ಸ್ಥಿತಿ ಚಿಂತಾಜನಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಒಂದರ ಟೈರ್ ಬ್ಲಾಸ್ಟ್ ಆದ ಪರಿಣಾಮ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಬಸ್‌ನಲ್ಲಿ ಸಿಲುಕಿ ಹೊರಬರಲಾಗದೆ ಪ್ರಯಾಣಿಕರು ಪರದಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ಲಕ್ಷ್ಮೇಶ್ವರದಿಂದ ಹುಬ್ಬಳ್ಳಿ ಹೋಗುತ್ತಿದ್ದ ಬಸ್‌ನ ಮುಂದಿನ ಟೈರ್‌ ಶೆರೆವಾಡ ಸಮೀಪ ಸ್ಫೋಟಗೊಂಡಿದೆ. ಪರಿಣಾಮ ಬಸ್ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾಗಿದೆ. ಘಟನೆಯಿಂದ ಚಾಲಕ ರವೀಂದ್ರ ಬಿಂಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬಸ್ ಪಲ್ಟಿಯಾದ ವೇಳೆ ಚಾಲಕನ ಸೀಟು ಕಿತ್ತುಬಂದಿದೆ. ಅಲ್ಲದೆ ಪ್ರಯಾಣಿಕರ ಸೀಟ್‌, ಕಿಟಕಿ ಹಾಗೂ ಬಿಡಿ ಭಾಗಗಳು ಜಖಂಗೊಂಡಿವೆ. ಇವುಗಳ ನಡುವೆ ಸಿಲುಕಿ ಹೊರಬರಲಾಗದೆ ಪ್ರಯಾಣಿಕರು ಪರದಾಡಿದ್ದಾರೆ.

ಅಪಘಾತದ ತೀವ್ರತೆ ಹೇಗಿತ್ತೆಂದರೆ, ಸೀಟ್‌ ಕಿಟಕಿ ಹಾಗೂ ಬಿಡಿ ಭಾಗಗಳ ನಡುವೆ ಸಲುಕಿದ ಗಾಯಗೊಂಡ ಪ್ರಯಾಣಿಕರು ನಮ್ಮನ್ನು ಎಬ್ಬಿಸಿ ಎಂದು ಅಂಗಲಾಚುತ್ತಿದ್ದರು. ವಿಷಯ ತಿಳಿದ ಕೂಡಲೇ ಸ್ಥಳೀಯರು ಜೆಸಿಬಿ ತಂದು ಬಸ್ ಮೇಲೆತ್ತಿದ್ದಾರೆ.

ಅವಘಡದಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ