Please assign a menu to the primary menu location under menu

CrimeNEWSನಮ್ಮಜಿಲ್ಲೆ

KKRTC ಬಸ್‌-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಯುವತಿ ಸಾವು, 18ಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್‌ ಮತ್ತು ಟ್ರ್ಯಾಕ್ಟರ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಯುವತಿಯೊಬ್ಬರು ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿರುವುದು  ಲಿಂಗಸುಗೂರಿನ ಬನ್ನಿಗೋಳ ಬಳಿ ನಡೆದಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಬನ್ನಿಗೋಳ ಗ್ರಾಮದ ಬಳಿ ನಡೆದ ಅವಘಡದಲ್ಲಿ ಶ್ರೀದೇವಿ (19) ಎಂಬ ಯುವತಿ ಮೃತಪಟ್ಟಿದ್ದಾರೆ.

ಬನ್ನಿಗೋಳ ಗ್ರಾಮದ ಕೂಲಿಕಾರ್ಮಿಕರು ಟ್ರ‍್ಯಾಕ್ಟರ್‌ನಲ್ಲಿ ಕೂಲಿ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ಬಸ್ ಮತ್ತು ಟ್ರ್ಯಾಕ್ಟರ್‌  ಮುಖಾಮುಖಿ ಡಿಕ್ಕಿಯಾಗಿ, ಈ ವೇಳೆ ಟ್ರ‍್ಯಾಕ್ಟರ್ ಪಲ್ಟಿಯಾಗಿದೆ.

ಈ ಅಪಘಾತದಿಂದ ಟ್ರ‍್ಯಾಕ್ಟರ್‌ನಲ್ಲಿದ್ದ ಯುವತಿ ಶ್ರೀದೇವಿ ಸ್ಥಳದಲ್ಲೇ ಅಸುನೀಗಿದ್ದಾರೆ. ಡಿಕ್ಕಿಯಾದ ಬಸ್ ಪಕ್ಕದ ಜಮೀನಿಗೆ ಹೋಗಿ ನಿಂತಿದೆ.

ಇನ್ನು ಅವಘಡದಿಂದಾಗಿ ಬಸ್ ಹಾಗೂ ಟ್ರ್ಯಾಕ್ಟರ್‌ನಲ್ಲಿದ್ದ 18 ಜನರು ಗಾಯಗೊಂಡಿದ್ದಾರೆ. ಗಾಯಳುಗಳನ್ನು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುರಿಸಲಾಗಿದೆ.

ಅಪಘಾತ ಸಂಬಂಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
BMTC: ಅತೀ ಶೀಘ್ರದಲ್ಲೇ ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ- ಎಂಡಿ ರಾಮಚಂದ್ರನ್‌ KKRTC ಬಸ್‌-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಯುವತಿ ಸಾವು, 18ಮಂದಿಗೆ ಗಾಯ KSRTC: ಭ್ರಷ್ಟಾಚಾರ ಬಯಲು ಮಾಡದಂತೆ ದೂರುದಾರನ ಬಾಯಿ ಮುಚ್ಚಿಸಲು ATI ಮೂಲಕ ₹20 ಸಾವಿರ ಕೊಟ್ಟರೇ ಡಿಸಿ, ಡಿಟಿಒ! ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌ ಚಾಲಕನ ನಿಯಂತ್ರಣ ತಪ್ಪಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ: 14 ಜನ ಮೃತ 2026ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ: ರಾಜ್ಯಾಧ್ಯಕ್ಷ ಷಡಾಕ್ಷರಿ SBI ಬ್ಯಾಂಕ್‌ನಲ್ಲಿ ಸೇವಿಂಗ್‌ ಅಕೌಂಟ್ ಅಥವಾ ಸ್ಯಾಲರಿ ಅಕೌಂಟ್ ಇದ್ದರೆ ಒಂದು ಕೋಟಿ ರೂ.ವರೆಗೂ ಫ್ರೀ ಸೌಲಭ್ಯ NWKRTC: ನೌಕರರು LMS ತಂತ್ರಾಂಶದಲ್ಲಿ ಅನುಭವಿಸುತ್ತಿದ್ದ ಸಮಸ್ಯೆಗೆ ಮುಕ್ತಿ ಬಿಬಿಎಂಪಿಯಿಂದ ದೀರ್ಘಕಾಲದಿಂದ ಆಸ್ತಿ ತೆರಿಗೆ ಕಟ್ಟದವರ ಸ್ಥಿರ ಆಸ್ತಿಗಳ ಹರಾಜು: ಮುನೀಶ್ ಮೌದ್ಗಿಲ್ Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತರಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ...