NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ಜೂ.14ರೊಳಗೆ ಡ್ಯೂಟಿ ರೋಟಾ ಬ್ಲಾಕ್ ಪ್ರದರ್ಶಿಸಿ, ಜೂ.18ರೊಳಗೆ ಜೇಷ್ಠತಾ ಪಟ್ಟಿ ಅಂತಿಮಗೊಳಿಸಿ-ಡಿಸಿಗಳಿಗೆ ಸೂಚನೆ

ಜೂನ್‌ 20ರಿಂದ 28ರೊಳಗೆ ಕೌನ್ಸೆಲಿಂಗ್ ಸಭೆ ನಡೆಸಿ, ಜೂನ್‌ 30 ರೊಳಗೆ ವಿಭಾಗೀಯ ಕಚೇರಿಯಿಂದ ಅನುಮೋದನೆ ನೀಡಬೇಕು. ಈ ಮೂಲಕ ಜುಲೈ 1 ರಿಂದ ಜಾರಿಗೆ ಬರುವಂತೆ ಹೊಸ ಡ್ಯೂಟಿ ರೋಟಾವನ್ನು ಅನುಷ್ಠಾನಗೊಳಿಸಬೇಕು

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಲ್ಲ ವಿಭಾಗಗಳ ಹಿರಿಯ, ವಿಭಾಗೀಯ ನಿಯಂತ್ರಣ ಅಧಿಕಾರಿಗಳು ಡ್ಯೂಟಿ ರೋಟಾವನ್ನು ಜುಲೈ ಒಂದರಿಂದಲೇ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಪ್ರತಿ 6 ತಿಂಗಳಿಗೊಮ್ಮೆ ಪರಿಶೀಲಿಸಿ, ಮಾರ್ಗಗಳನ್ನು ಪುನರ್ ನಿಗದಿಗೊಳಿಸಬೇಕಾಗಿದೆ. ಅದರಂತೆ ಬರುವ ತಿಂಗಳ ಜುಲೈ 1ರಿಂದ ಜಾರಿಗೆ ಬರುವಂತೆ ಹೊಸದಾಗಿ ಡ್ಯೂಟಿ ರೋಟಾವನ್ನು ಸಂಸ್ಥೆಯ ಎಲ್ಲ ಘಟಕಗಳಲ್ಲೂ ಅನುಷ್ಠಾನಗೊಳಿಸಿ ಡ್ಯೂಟಿ ರೋಟಾವನ್ನು ಜಾರಿಗೊಳಿಸಲು ಕ್ರಮವಹಿಸಬೇಕು.

ಈ ಹಿನ್ನೆಲೆಯಲ್ಲಿ ಇದೇ ಜೂನ್‌ 8ರೊಳಗಾಗಿ ನೌಕರರ ಜೇಷ್ಠತಾ ಪಟ್ಟಿಯನ್ನು ಆಯಾಯಾ ಡಿಪೋಗಳ ಸೂಚನಾ ಫಲಕದಲ್ಲಿ ಪ್ರದರ್ಶಿಸಬೇಕು. ಬಳಿಕ ಜೂನ್‌ 14ರೊಳಗಾಗಿ ಡ್ಯೂಟಿ ರೋಟಾ ಬ್ಲಾಕ್ ಗಳನ್ನು ಪ್ರದರ್ಶಿಸಬೇಕು. ಇನ್ನು ಜೇಷ್ಠತಾ ಪಟ್ಟಿಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜೂನ್‌ 16 ರೊಳಗಾಗಿ ಪಡೆದು ಜೂನ್‌ 18ರೊಳಗಾಗಿ ಜೇಷ್ಠತಾ ಪಟ್ಟಿ ಅಂತಿಮಗೊಳಿಸಬೇಕು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ತಿಳಿಸಿದ್ದಾರೆ.

ಇದಿಷ್ಟೇ ಅಲ್ಲದೆ ಜೂನ್‌ 20ರಿಂದ 28ರೊಳಗೆ ಕೌನ್ಸೆಲಿಂಗ್ ಸಭೆ ನಡೆಸಿ, ಜೂನ್‌ 30 ರೊಳಗೆ ವಿಭಾಗೀಯ ಕಚೇರಿಯಿಂದ ಅನುಮೋದನೆ ನೀಡಬೇಕು. ಈ ಮೂಲಕ ಜುಲೈ 1 ರಿಂದ ಜಾರಿಗೆ ಬರುವಂತೆ ಹೊಸ ಡ್ಯೂಟಿ ರೋಟಾವನ್ನು ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದ್ದಾರೆ.

ಜತೆಗೆ ಈ ರೀತಿ ಅಗತ್ಯ ಕ್ರಮ ಕೈಗೊಳ್ಳುವಂತೆ ಘಟಕ ವ್ಯವಸ್ಥಾಪಕರಿಗೆ ಹಾಗೂ ವಿಭಾಗದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು. ಈ ವಿಷಯದಲ್ಲಿ ಯಾವುದೇ ರೀತಿಯ ದೂರುಗಳು ಬಾರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕೈಗೊಂಡ ಕ್ರಮದ ಕುರಿತು ಡ್ಯೂಟಿ ರೋಟಾ ದೃಢೀಕೃತ ಪ್ರತಿಯೊಂದಿಗೆ ಸಂಸ್ಥೆಯ ಕೇಂದ್ರ ಕಚೇರಿಗೆ ಅನುಸರಣಾ ವರದಿಯನ್ನು ಕಳುಹಿಸಬೇಕು ಎಂದು ತಿಳಿಸಿದ್ದಾರೆ.

ಈ ಡ್ಯೂಟಿ ರೋಟಾ ಸಂಬಂಧ ಮೇ 26ರಂದೇ ಆದೇಶ ಹೊರಡಿಸಿರುವ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು, ಈ ವಿಷಯಕ್ಕೆ ಸಂಬಂಧಿಸಿದಂತೆ, ಅನುಸೂಚಿಗಳಿಗೆ ಪಾರದರ್ಶಕವಾಗಿ ಚಾಲನಾ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲು ಅನುಕೂಲವಾಗುವ ದೃಷ್ಟಿಯಿಂದ ಅವರ ಸೇವಾ ಜೇಷ್ಠತೆಯ ಆಧಾರದ ಮೇಲೆ ಕೌನ್ಸೆಲಿಂಗ್ ಮುಖಾಂತರ ಡ್ಯೂಟಿ ರೋಟಾ ಸಿದ್ಧಪಡಿಸಿ ಜಾರಿಗೊಳಿಸಲು ಪ್ರಗತಿ ಪರಿಶೀಲನಾ ಸಭೆಗಳಲ್ಲಿ ತಿಳಿಸಲಾಗಿದೆ ಎಂದು ವಿವರಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ- ಸಣ್ಣಪುಟ್ಟ ಗಾಯದೊಂದಿಗೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು KKRTC: ಜೂ.14ರೊಳಗೆ ಡ್ಯೂಟಿ ರೋಟಾ ಬ್ಲಾಕ್ ಪ್ರದರ್ಶಿಸಿ, ಜೂ.18ರೊಳಗೆ ಜೇಷ್ಠತಾ ಪಟ್ಟಿ ಅಂತಿಮಗೊಳಿಸಿ-ಡಿಸಿಗಳಿಗೆ ಸೂಚನ... ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು: ಸಿಎಂ ಡಿಕೆಶಿ ನೂತನ ಸಿಎಂ ಡಿಕೆಶಿಗೆ ಶುಭಾಶಯ ಕೋರಿದ ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ KKRTC: ನೌಕರರ ಮೇ ತಿಂಗಳ ವೇತನ ನಾಳೆ ಆಗುತ್ತದೆ, ಗೊಂದಲ ಬೇಡ: ಸಿಎಒ ಸ್ಪಷ್ಟನೆ KSRTC: ಮೂರು ವರ್ಷಕ್ಕೂ ಹೆಚ್ಚುಕಾಲ ಒಂದೇ ಕಡೆ ಬೇರುಬಿಟ್ಟಿರುವ ನೌಕರರ ವರ್ಗಾವಣೆಗೆ ಆದೇಶ ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್‌ ಕೊಟ್ಟ ಕೇಂದ್ರ ಸರ್ಕಾರ: ಗೃಹಬಳಕೆ ಗ್ಯಾಸ್‌ ಸಿಂಡರ್‌ಗೆ 29 ರೂ. ಏರಿಕೆ, ಇಂದಿನಿಂದ... ರಾಮಲಿಂಗಾರೆಡ್ಡಿ: ರಾಜೀನಾಮೆ ವಾಪಸ್‌ -ಡಿಕೆಶಿ ಸರ್ಕಾರದಲ್ಲಿದ್ದ ಭಿನ್ನಮತ ಶಮನ ಸರ್ಕಾರದ ಮಹತ್ವಾಕಾಂಕ್ಷಿ ಭೂ ಗ್ಯಾರಂಟಿ ಯೋಜನೆಯ "ನನ್ನ ಇ-ಖಾತಾ ನನ್ನ ಹಕ್ಕು" ಅಭಿಯಾನಕ್ಕೆ ಉತ್ತಮ ಸ್ಪಂದನೆ ಪಾರ್ಕ್‌ಗಳ ನಡಿಗೆದಾರರ ಸ್ನೇಹಿಯನ್ನಾಗಿ ರೂಪಿಸಿ: ನೂತನ ಆಯುಕ್ತ ಜಗದೀಶ್ ಕರೆ