ಬಸವಕಲ್ಯಾಣ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (KKRTC ಬಸ್ ಚಾಲಕರೊಬ್ಬರು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ್ದರಿಂದ 5 ಸಾವಿರ ರೂಪಾಯಿ ದಂಡ ಕಟ್ಟಿರುವ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ.
ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವ ಮೂಲಕ ರಸ್ತೆ ನಿಯಮ ಉಲ್ಲಂಘನೆ ಮಾಡಿರುವ ( Using mobile Phone while driving) ಪ್ರಕರಣದಡಿ 5 ಸಾವಿರ ರೂಪಾಯಿ ದಂಡ ಹಾಕಿದ್ದಾರೆ ಪೊಲೀಸರು.
ಸಂಸ್ಥೆಯ ಬಸ್ ಚಾಲಕ ಮೊಬೈಲ್ ನೋಡಿಕೊಂಡು ಆ.27ರಂದು ಬಸ್ ಚಾಲನೆ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಚಾಲಕನ ಪತ್ತಹಚ್ಚಿ ದಂಡ ವಿಧಿದ್ದಾರೆ.
ಇನ್ನು ವೈರಲ್ ಆಗಿರುವ ವಿಡಿಯೋ ಸಂಬಂಧ ಬಸವಕಲ್ಯಾಣ ಸಂಚಾರ ಪೊಲೀಸ್ ಠಾಣೆ ಅಧಿಕಾರಿಗಳು ಸತ್ಯಾಸತ್ಯೆಯ ಬಗ್ಗೆ ಪರಿಶೀಲಿಸಿದ್ದು, ಬಸ್ ಚಾಲಕನನ್ನು ಪತ್ತೆ ಮಾಡಿ, ಚಾಲಕನಿಗೆ ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಕೆಯಿಂದ ಆಗುವ ಅನಾಹುತಗಳ ಬಗ್ಗೆ ತಿಳಿ ಹೇಳಿದ್ದಾರೆ.
ಅಲ್ಲದೆ ಚಾಲಕನ ವಿರುದ್ಧಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವ ಮೂಲಕ ರಸ್ತೆ ನಿಯಮ ಉಲ್ಲಂಘನೆ ಮಾಡಿರುವುದಕ್ಕೆ ಸ್ಥಳದಂಡ ಪ್ರಕರಣ ದಾಖಲಿಸಿ 5000 ರೂ.ಗಳನ್ನು ದಂಡ ವಿಧಿಸಿದ್ದು ಆ ದಂಡವನ್ನು ಚಾಲಕ ಕಟ್ಟಿ ರಶೀದಿ ಪಡೆದುಕೊಂಡಿದ್ದಾರೆ.
ಸಾರಿಗೆ ಸಂಸ್ಥೆಯ ಚಾಲಕರು ಸೇರಿದಂತೆ ಜಿಲ್ಲೆಯ ಎಲ್ಲ ವಾಹನ ಚಾಲಕರು, ತಮ್ಮ ವಾಹನವನ್ನು ಚಲಾಯಿಸುವಾಗ ಮೊಬೈಲ್ ಫೋನ್ ಬಳಸಬಾರದು, ಒಂದು ವೇಳೆ ಕಂಡು ಬಂದರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಾಗುವುದು ಎಂದು ಈ ಮೂಲಕ ಎಚ್ಚರಿಸಿದ್ದಾರೆ.