CRIMENEWSನಮ್ಮರಾಜ್ಯ

KKRTC: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ- 8ಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ (KKRTC) ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದು ಪಲ್ಟಿಯಾದ ಘಟನೆ ನಡೆದಿದೆ.

ಬಸ್‌ ಕುಕ್ಕನೂರಿನಿಂದ – ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಎಂಟು ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಬಸ್‍ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಈ ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ವಾಹನೊಂದಕ್ಕೆ ಸೈಡ್‌ ಮಾಡಿಕೊಡಲು ಹೋದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಅವಘಡ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Deva
the authorDeva

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...