Friday, November 1, 2024
CrimeNEWSನಮ್ಮಜಿಲ್ಲೆ

KKRTC: ಶವ ತರಲು ಹೋಗಿ ಶವವಾದ ಬಸ್ ಚಾಲಕನ ಪಾರ್ಥಿವ ಶರೀರದ ದರ್ಶನ ಪಡೆದ ಮಾಜಿ ಸಚಿವ ಶ್ರೀರಾಮುಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಪಾರ್ಥಿವ ಶರೀರವನ್ನು ತರಲು ಹೋಗಿದ್ದ ಮತ್ತೊಬ್ಬ ಬಸ್ ಚಾಲಕ ಅಪಘಾತದಿಂದ ಮೃತಪಟ್ಟಿರುವ ಘಟನೆ ತುಮಕೂರು ಬಳಿ ಶನಿವಾರ ಮುಂಜಾನೆ ನಡೆದಿತ್ತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬಳ್ಳಾರಿ ಒಂದನೇ ಘಟಕದ ಸಾರಿಗೆ ಸಂಸ್ಥೆಯ ಬಸ್ ಚಾಲಕ ದಾವಲ್ ಸಾಬ್ (45) ಚೆನ್ನೈಗೆ ಬಸ್ ತೆಗೆದುಕೊಂಡು ಹೋದಾಗ ಹೃದಯಾಘಾತದಿಂದ ಅಸುನೀಗಿದ್ದರು. ಅವರ ಶವವನ್ನು ತರಲು ಗೋನಾಳ್ ಗ್ರಾಮದ ನಿವಾಸಿ ಬಸ್ ಚಾಲಕ ಜಗನ್ನಾಥ (35) ತಮ್ಮ ಇನ್ನಿತರ ಸಿಬ್ಬಂದಿಗಳೊಂದಿಗೆ ಹೋಗಿದ್ದರು.

ಇದನ್ನೂ ಓದಿ: ಚನ್ನೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ KKRTC ಕಂಡಕ್ಟರ್‌: ಪಾರ್ಥಿವ ಶರೀರದ ಜತೆ ಸಾಗುತ್ತಿದ್ದ ವಾಹನ ಪಲ್ಟಿ- ಚಾಲಕ ಸಾವು, ಐವರಿಗೆ ಗಾಯ

ಚೆನ್ನೈಗೆ ಹೋಗಿ ದಾವಲ್ ಸಾಬ್ ಅವರ ಶವ ತೆಗೆದುಕೊಂಡು ಶನಿವಾರ ಬರುವಾಗ ತುಮಕೂರು ಬಳಿ ಜೀಪ್ ಅಪಘಾತಗೊಂಡು ಜಗನ್ನಾಥ ಸ್ಥಳದಲ್ಲೇ ಮೃತಪಟ್ಟಿದ್ದರು.

ಇಬ್ಬರು ಮಕ್ಕಳು, ಪತ್ನಿಯನ್ನು ಅಗಲಿದ ಜಗನ್ನಾಥ ಅವರ ಪಾರ್ಥಿವ ಶರೀರದ ದರ್ಶನವನ್ನು ಇಂದು ಬಳಗ್ಗೆ ಪಡೆದ ಸಾರಿಗೆ ಮಾಜಿ ಸಚಿವ ಬಿ.ಶ್ರೀರಾಮುಲು ಕುಟುಂಬಕ್ಕೆ ಸಾಂತ್ವನ ಹೇಳಿದರು.

ಸತತ ಕರ್ತವ್ಯದಿಂದ ಜೀಪ್ ಚಾಲನೆ ಮಾಡುವಾಗ ನಿದ್ರೆಗೆ ಜಾರಿದ್ದು ಅಪಘಾತಕ್ಕೆ ಕಾರಣವಾಗಿದೆ. ಈ ರೀತಿ ಆಗಬಾರದಿತ್ತು. ಈ ಬಗ್ಗೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರಿಕೆವಹಿಸಲು ಸಲಹೆ ನೀಡುತ್ತೇನೆ ಶ್ರೀರಾಮುಲು‌ ಹೇಳಿದ್ದಾರೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...