Breaking NewsNEWSನಮ್ಮಜಿಲ್ಲೆ

KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು

ಸ್ಥಳದಲ್ಲಿದ್ದ ಪ್ರಯಾಣಿಕರು ಸಹ ಧರ್ಮದೇಟು ನೀಡಿದ್ದು, ಯುವಕ ಬಸ್ ನಿಲ್ದಾಣದಿಂದ ಪರಾರಿಯಾಗಿದ್ದಾನೆ. ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇಂಥ ಪುಂಡರಿಗೆ ಬುದ್ಧಿ ಕಲಿಸಬೇಕು ಎಂದು ಜನರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಅನುಚಿತ ವರ್ತನೆ ತೋರಿದ ಯುವಕನಿಗೆ ಮಹಿಳೆ ಚಪ್ಪಲಿ ಏಟು ನೀಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ಯುವಕ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಜತೆಗೆ ಅಶ್ಲೀಲವಾಗಿ ಮಾತಾಡಿದ್ದಾನೆ. ಇದರಿಂದ ಸಹನೆ ಕಳೆದುಕೊಂಡ ಮಹಿಳೆ ಯುವಕನ ವರ್ತನೆ ಸಹಿಸಲಾಗದೇ ಕೆನ್ನೆಗೆ ಬಾರಿಸಿ, ಚಪ್ಪಲಿಯಿಂದ ಹೊಡೆದಿದ್ದಾರೆ.

ಈ ವೇಳೆ ಸ್ಥಳದಲ್ಲಿದ್ದ ಪ್ರಯಾಣಿಕರು ಸಹ ಧರ್ಮದೇಟು ನೀಡಿದ್ದು, ಯುವಕ ಬಸ್ ನಿಲ್ದಾಣದಿಂದ ಪರಾರಿಯಾಗಿದ್ದಾನೆ. ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇಂಥ ಪುಂಡರಿಗೆ ಬುದ್ಧಿ ಕಲಿಸಬೇಕು ಎಂದು ಜನರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

ಇನ್ನು ಬಸ್‌ ನಿಲ್ದಾಣದಲ್ಲಿ ಈರೀತಿ ಬಸ್‌ಗಾಗಿ ಕಾಯುವವರೊಂದಿಗೆ ಅನುಚಿತ ವರ್ತನೆ ತೋರುವ ಕಿಡಿಗೇಡಿಗಳನ್ನು ಬಸ್‌ ನಿಲ್ದಾಣದ ಅಧಿಕಾರಿಗಳು ಸೂಕ್ಷ್ಮವಾಗಿ ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ನಿಲ್ದಾಣ ಪ್ರಯಾಣಿಕರಿಗೆ ಸುರಕ್ಷಿತವಾಗಿ ಎಂದು ಅನಿಸುವಂತಾಗಬೇಕು ಎಂದು ಹೇಳಿದ್ದಾರೆ.

ಬಹುತೇಕ ರಾಜ್ಯದಲ್ಲಿರುವ ಬಸ್‌ ನಿಲ್ದಾಣಗಳಲ್ಲಿ ಕೆಲ ಪುಂಡಪೋಕರಿಗಳು ಈರೀತಿಯ ವರ್ತನೆ ತೋರುತ್ತಿರುವುದು ಅಲ್ಲಲ್ಲಿ ಕಂಡು ಬರುತ್ತದೆ. ಇದಕ್ಕೆ ಸಂಬಂಧಪಟ್ಟ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಎಂಡಿಗಳು ಎಚ್ಚರಿಕೆ ವಹಿಸುವ ಅಗತ್ಯ ತುಂಬಾ ಇದೆ ಎಂದು ಪ್ರಜ್ಞಾವಂತ ನಾಗರಿಕರು ಹೇಳಿದ್ದಾರೆ.

Deva
the authorDeva

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ