NEWSನಮ್ಮಜಿಲ್ಲೆನಮ್ಮರಾಜ್ಯ

KKRTC- ಮೇ 18ರಿಂದ 22ರವರೆಗೆ ಪಡೆದಿರುವ ಚಾಲನಾ ಸಿಬ್ಬಂದಿಗಳ ರಜೆ ಮಂಜೂರು ಮಾಡಲು ಡಿಸಿಗಳಿಗೆ ಸಿಟಿಎಂ ಆದೇಶ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 18.05.2026 ರಿಂದ 22.05.2026 ರವರೆಗೆ ರಜೆ ಪಡೆದಿರುವ ಚಾಲನಾ ಸಿಬ್ಬಂದಿಗಳ ರಜೆಗಳನ್ನು ಪರಿಶೀಲಿಸಿ ಮಂಜೂರು ಮಾಡುವಂತೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಎಲ್ಲ ಹಿರಿಯ, ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 18.05.2026 ರಿಂದ 22.05.2026 ರವರೆಗೆ ರಜೆ ಪಡೆದಿರುವ ಚಾಲನಾ ಸಿಬ್ಬಂದಿಗಳ ರಜೆಗಳನ್ನು ಪರಿಶೀಲಿಸಿ ಮಂಜೂರು ಮಾಡುವಂತೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಎಲ್ಲ ಹಿರಿಯ, ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.

ಈ ಸಂಬಂಧ ಮಂಗಳವಾರ ಜೂನ್‌ 2ರಂದು ಆದೇಶ ಹೊರಡಿಸಿರುವ ಅವರು ಸಕ್ಷಮ ಪ್ರಾಧಿಕಾರಿಗಳಾದ ವ್ಯವಸ್ಥಾಪಕ ನಿರ್ದೇಶಕರ ಆದೇಶವಾಗಿದ್ದು ಅದರಂತೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶ ನೀಡಿದ್ದಾರೆ.

ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ, 20.05.2026 ರಂದು ಜಂಟಿ ಕ್ರಿಯಾ ಸಮಿತಿ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಕರೆಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಕೆಲಸಮಾಡದಿದ್ದಾಗ ವೇತನವಿಲ್ಲ ಎಂಬ ನಿಯಮ ಜಾರಿಮಾಡಿ 18.05.2026 ರಿಂದ 22.05.2026 ರವರೆಗೆ ಚಾಲನಾ ಸಿಬ್ಬಂದಿಗಳು ಮೊಬೈಲ್ ಮುಖಾಂತರ ಪಡೆದಿದ್ದ ರಜೆಗಳನ್ನು ರದ್ದುಪಡಿಸಲಾಗಿತ್ತು.

ಇತ್ತ ಆ ಬಳಿಕ ನ್ಯಾಯಾಲಯದ ನಿರ್ದೇಶನದಂತೆ ಮುಷ್ಕರ ಹಿಂಪಡೆದಿರುವುದರಿಂದ ಈ ಅವಧಿಯಲ್ಲಿ ಮೊಬೈಲ್ ಮುಖಾಂತರ (LMS  Leave) ಮಂಜೂರಾಗಿ, ರದ್ದುಪಡಿಸಿರುವ ರಜೆಗಳನ್ನು ಪರಿಶೀಲಿಸಿ ಮ್ಯಾನಿವಲ್ ರಜೆಗಳನ್ನು ಮಂಜೂರು ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಹೀಗಾಗಿ 18.05.2026 ರಿಂದ 22.05.2026 ರವರೆಗೆ ಚಾಲನಾ ಸಿಬ್ಬಂದಿಗಳು ಮೊಬೈಲ್ ಮುಖಾಂತರ ಪಡೆದಿದ್ದ ರಜೆಗಳನ್ನು ರದ್ದುಪಡಿಸಿದ್ದು, ಅವುಗಳನ್ನು ಪರಿಶೀಲಿಸಿ ಮ್ಯಾನಿವಲ್ ರಜೆಗಳನ್ನು ಮಂಜೂರು ಮಾಡುವ ಮೂಲಕ ನೌಕರರಿಗೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ