NEWSನಮ್ಮಜಿಲ್ಲೆನಮ್ಮರಾಜ್ಯ

KKRTC:  ₹6 ಸಾವಿರ, ಮೊಬೈಲ್‌ ಇದ್ದ ಬ್ಯಾಗ್‌ ಬಿಟ್ಟುಹೋಗಿದ್ದ ಪ್ರಯಾಣಿಕರು- ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲನಾ ಸಿಬ್ಬಂದಿ

ವಿಜಯಪಥ ಸಮಗ್ರ ಸುದ್ದಿ

ಯಲಬುರ್ಗಾ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ಯಲಬುರ್ಗಾ ಘಟಕದ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟುಹೋಗಿದ್ದ ಬ್ಯಾಗನ್ನ ವಾರಸುದಾರರಿಗೆ ಮರಳಿಸುವ ಮೂಲಕ ಚಾಲನಾ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಯಲಬುರ್ಗಾ ಘಟಕದ ವಾಹನ (KA 37 F 0791) ಬೆಂಗಳೂರಿಂದ ಯಲಬುರ್ಗಕ್ಕೆ ಹೋಗುವಾಗ ಸರಸ್ವತಿ ಎಂಬ ಮಹಿಳಾ ಪ್ರಯಾಣಿಕರು ಚಿತ್ರದುರ್ಗದಿಂದ ಹೊಸಪೇಟೆಗೆ ಪ್ರಯಾಣ ಚೀಟಿಯನ್ನು ಪಡೆದಿದ್ದರು.

ಆದರೆ ಅವರು ಮಾರ್ಗ ಮಧ್ಯೆ ಕಾನಹೊಸಳಿಯಲ್ಲಿ ಇಳಿದಿದ್ದು ಈ ವೇಳೆ ಅವರು ತೌು ತಂದಿದ್ದ ಬ್ಯಾಗನ್ನು ಬಸ್ಸಿನಲ್ಲೇ ಮರೆತು ಬಿಟ್ಟುಹೋಗಿದ್ದರು. ಕಾರಣ ವಾರಸುದಾರರ ಸಂಬಂಧಿಕರು ಹೊಸಪೇಟೆಗೆ ಬಂದು ನಿರ್ವಾಹಕರನ್ನು ವಿಚಾರಿಸಿದಾಗ ನಿರ್ವಾಹಕರು ಬಸ್ಸಿನಲ್ಲಿದ್ದ ಬ್ಯಾಗನ್ನು ಪರಿಶೀಲಿಸಿ ಅದನ್ನು ಹೊಸಪೇಟೆ ಬಸ್ ನಿಲ್ದಾಣ ಅಧಿಕಾರಿ ಹತ್ತಿರ ತೆಗೆದುಕೊಂಡು ಹೋದರು.

ಬಳಿಕ ಬಸ್ ನಿಲ್ದಾಣ ಅಧಿಕಾರಿ ಅವರ ಸಮ್ಮುಖದಲ್ಲಿ ಬ್ಯಾಗನ್ನು ಪರಿಶೀಲಿಸಿ ಅದರಲ್ಲಿ ಮಹಿಳೆಯ ಆಧಾರ್ ಕಾರ್ಡ್ ಕೀಪ್ಯಾಡ್ ಮೊಬೈಲ್ ಹಾಗೂ ಒಂದು ಪರ್ಸಿದ್ದು ಅದರಲ್ಲಿ ಆರು ಸಾವಿರ ರೂಪಾಯಿ ಇತ್ತು. ಈ ಎಲ್ಲವನ್ನು ವಾರಸುದಾರರಿಗೆ ತಲುಪಿಸಲಾಯಿತು.

ಈ ವೇಳೆ ಚಾಲಕ ಮತ್ತು ನಿರ್ವಾಹಕರು ಇದ್ದು ವಾರಸುದಾರರಿಗೆ ನೀಡುವ ಮೂಲಕ ಪ್ರಾಮಾಣಿಕತೆ ಮೆರೆದ ಚಾಲನಾ ಸಿಬ್ಬಂದಿಯನ್ನು ಬಸ್ ನಿಲ್ದಾಣ ಅಧಿಕಾರಿ ಶ್ಲಾಘಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...