NEWSನಮ್ಮಜಿಲ್ಲೆನಮ್ಮರಾಜ್ಯ

KKRTC ಜನಸ್ನೇಹಿ ಸಾರಿಗೆ ವ್ಯವಸ್ಥೆ: ಅಧ್ಯಕ್ಷ ಅರುಣಕುಮಾರ ಎಂ.ಪಾಟೀಲ ಶ್ಲಾಘನೆ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಜನಸ್ನೇಹಿ ಸಾರಿಗೆ ವ್ಯವಸ್ಥೆಯಾಗಿದ್ದು, ಹತ್ತು ಹಲವು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನವಾಗಿದೆ ಎಂದು ನಿಗಮದ ಅಧ್ಯಕ್ಷ ಅರುಣಕುಮಾರ ಎಂ.ಪಾಟೀಲ ಹೇಳಿದರು.

ನಗರದ ಕೇಂದ್ರ ಬಸ್ ನಿಲ್ದಾಣ ಮತ್ತು ಘಟಕಗಳಲ್ಲಿ ಮೂಲಸೌಕರ್ಯ ಪರಿಶೀಲಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸಾರಿಗೆ ವ್ಯವಸ್ಥೆ ದೇಶದಲ್ಲೇ ಮಾದರಿಯ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಇನ್ನಷ್ಟು ಉತ್ತಮ ಜನಸ್ನೇಹಿ ಸಾರಿಗೆ ವ್ಯವಸ್ಥೆ ಹೊಂದುವುದಕ್ಕಾಗಿ ಬೇಕಾದ ಸುಧಾರಣೆಗಳನ್ನು ತರಲು ನಮ್ಮ ಕಾಂಗ್ರೆಸ್‌ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

ಜನಪರ ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಬಸ್ ಘಟಕಗಳಿಗೆ ಭೇಟಿ ಮಾಡಿದ್ದೇನೆ ಎಂದ ಅವರು, ಉತ್ತಮ ರೀತಿಯ ಸ್ವಚ್ಛತೆ ಹಾಗೂ ಸಿಬ್ಬಂದಿಗಳ ಐಕ್ಯತೆಯ ಕಾರ್ಯ ಮೆಚ್ಚುವಂಥದ್ದು. ಸುಗಮ ಸಾರಿಗೆ ಸೇವೆಯ ನಡುವೆ ಕೆಲ ಸಮಸ್ಯೆಗಳು ಗಮನಕ್ಕೆ ಬಂದಿದ್ದು, ಮುಂಬರುವ ದಿನಗಳಲ್ಲಿ ಈ ಎಲ್ಲ ಸಮಸ್ಯೆಗಳನ್ನು ಸರಿಪಡಿಸಲು ಸಂಬಂಧಪಟ್ಟ ಘಟಕ ವ್ಯವಸ್ಥಾಪಕರಿಗೆ ಹಾಗೂ ಸಿಬ್ಬಂದಿಗಳಿಗೆ ಆದೇಶ ಮಾಡಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ. ಬಿ.ಸುಶೀಲಾ, ಮುಖ್ಯ ಸಂಚಾರ ವ್ಯವಸ್ಥಾಪಕ ಸಂತೋಷ್ ಕುಮಾರ್, ಅಧಿಕಾರಿಗಳಾದ ಸಿದ್ದಪ್ಪ ಗಂಗಾಧರ್, ಚಂದು ಕೆ.ನಾಗರಾಜ್ ವಾರದ್, ಐ.ಸಿ. ಹೊಸಮನಿ, ಅನಿಲ್ ಕುಮಾರ್ ಹಾಗೂ ಘಟಕದ ಎಲ್ಲಾ ಸಿಬ್ಬಂದಿ ಇದ್ದರು.

Megha
the authorMegha

Leave a Reply

error: Content is protected !!