NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ಹಲವು ವರ್ಷಗಳಿಂದ ಬೇರುಬಿಟ್ಟ ಸಿಬ್ಬಂದಿಗಳ ಬದಲಾಯಿಸಿ: ಸಿಪಿಎಂ ಆದೇಶ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಮೂರು ವರ್ಷ ಮೇಲ್ಪಟ್ಟು ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಡಳಿತ ಸಿಬ್ಬಂದಿಗಳ ಬದಲಾವಣೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕ ಆದೇಶಿಸಿದ್ದಾರೆ.

ಈ ಸಂಬಂಧ ಕೆಕೆಆರ್‌ಟಿಸಿ ನಿಗಮದ ಎಲ್ಲ ವಿಭಾಗೀಯ ಕಚೇರಿ, ಘಟಕಗಳು ಹಾಗೂ ಯುನಿಟ್‌ಗಳಲ್ಲಿ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿ ಒಂದೇ ಶಾಖೆ/ ಒಂದೇ ವಿಷಯ ಸಂಕಲನವನ್ನು ನಿರ್ವಹಿಸುತ್ತಿರುವ ವಿಷಯ ನಿರ್ವಾನಕರುಗಳನ್ನು ಹಾಗೂ ಇತರೇ ಸಿಬ್ಬಂದಿಯನ್ನು ಮೂರು ವರ್ಷಗಳಿಗೊಮ್ಮೆ ಬದಲಾವಣೆ ಮಾಡುವಂತೆ ನಿರ್ದೇಶನ ವಿದೆ.

ಈ ನಿರ್ದೇಶನವಿದ್ದರೂ ಸಹ ಕೆಲವೊಂದು ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಷಯ ನಿರ್ವಾಹಕರು ಹಲವಾರು ವರ್ಷಗಳಿಂದ ಒಂದೇ ಕಡೆ ಕೆಲಸ ನಿರ್ವಹಿಸುತ್ತಿರುವುದಾಗಿ ಇತರ ಸಿಬ್ಬಂದಿಗಳಿಂದ/ ಸಂಘಟನೆಗಳಿಂದ ಹಲವಾರು ದೂರುಗಳು ಈ ಕಚೇರಿಗೆ ಬಂದಿವೆ.

ಮುಂದುವರೆದು ಈ ಕುರಿತು ಪರಿಶೀಲಿಸಿದ ಸೂಕ್ತಾಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಕೂಡಲೇ ವಿಭಾಗೀಯ ಕಚೇರಿ/ಶಾಖೆ/ಘಟಕ/ಯುನಿಟ್‌ಗಳಲ್ಲಿ 03 ವರ್ಷಗಳಗಿಂತ ಹೆಚ್ಚಿನ ಅವಧಿಯಲ್ಲಿ ಒಂದೇ ಶಾಖೆ/ ಒಂದೇ ವಿಷಯ ಸಂಕಲನವನ್ನು ನಿರ್ವಹಿಸುತ್ತಿರುವ ವಿಷಯ ನಿರ್ವಾಹಕರನ್ನು ಹಾಗೂ ಇತರೇ ಸಿಬ್ಬಂದಿಯನ್ನು ಬದಲಾಯಿಸುವಂತೆ ಆದೇಶ ಹೊರಡಿಸಿದ್ದಾರೆ.

ಸೂಕ್ತಾಧಿಕಾರಿಗಳ ಆದೇಶದಂತೆ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿಯಲ್ಲಿ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ವಿಷಯ ನಿರ್ವಾಹಕರನ್ನು ಹಾಗೂ ಇತರೇ ಸಿಬ್ಬಂದಿಯನ್ನು ಕೂಡಲೇ ಬದಲಾಯಿಸಲು ಕ್ರಮವಹಿಸಿ, ಅನುಸರಣಾ ವರದಿಯನ್ನು ಈ ಕಚೇರಿಗೆ ಕೊಡಬೇಕು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...