NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ಪ್ರೀಮಿಯಂ ರಹಿತ 1 ಕೋಟಿ ರೂ. ವಿಮಾ ಯೋಜನೆಗೆ UBIನೊಂದಿಗೆ ಒಡಂಬಡಿಕೆ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ಪ್ರೀಮಿಯಂ ರಹಿತ 1 ಕೋಟಿ ರೂ. ವಿಮಾ ಯೋಜನೆ ಜಾರಿ ಮಾಡಲು ಗುರುವಾರ ನಿಗಮವು ಯುಬಿಐ ನೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.

ನಿಮಗದ ಕೇಂದ್ರ ಕಚೇರಿಯಲ್ಲಿ ನಡೆದ ಒಡಂಬಡಿಕೆ ಕಾರ್ಯಕ್ರಮದಲ್ಲಿ ಈ ಒಪ್ಪಂದಕ್ಕೆ ನಿಗಮದ ಎಂಡಿ ಮತ್ತು ಬ್ಯಾಂಕ್‌ನ ಕರ್ನಾಟಕ ವಲಯ ಮುಖ್ಯಸ್ಥರು ಸಹಿ ಹಾಕುವ ಮೂಲಕ ಚಾಲನೆ ನೀಡಿದರು.

ಕಲ್ಯಾಣ‌ ಕರ್ನಾಟಕ‌ ರಾಜ್ಯ ರಸ್ತೆ ಸಾರಿಗೆ ನಿಗಮವು ( KKRTC) ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೇವೆ ಕಲ್ಪಿಸಲು ಹಗಲಿರಳು ಶ್ರಮಿಸುತ್ತಿರುವ ತನ್ನ ನಿಗಮದ ಸಿಬ್ಬಂದಿಗಳಿಗಾಗಿ ಸಂಸ್ಥೆಯಿಂದ ಹಲವಾರು ಕಾರ್ಮಿಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಅದರ‌ ಮುಂದುವರಿದ ಭಾಗವಾಗಿ ಮತ್ತೊಂದು ಮಹತ್ವದ ಯೋಜನೆಯಾದ ಪ್ರೀಮಿಯಂ ರಹಿತ 1 ಕೋಟಿ ವಿಮಾ ಯೋಜನೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತಿಯಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕರ್ನಾಟಕ ವಲಯ ಮುಖ್ಯಸ್ಥ ನವನೀತ್ ಕುಮಾರ್ ಅವರೊಂದಿಗೆ ಒಡಂಬಡಿಕೆ ವಿನಿಮಯ ಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಾರಿಗೆ ನಿಗಮದ ಸಿಬ್ಬಂದಿಗಳಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತದಿಂದಾಗಿ ಆಗುತ್ತಿರುವ ಸಾವು-ನೋವಿನ ಪ್ರಮಾಣ ಗಮನಿಸಿ, ನಿಗಮವು ನೌಕರರು ವೈಯಕ್ತಿಕ / ಕರ್ತವ್ಯ ನಿರತ ಸಮಯದಲ್ಲಿ ಅಪಘಾತದಿಂದಾಗಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ, ಅಂಗನ್ಯೂನ್ಯತೆಗೆ ಒಳಗಾದಲ್ಲಿ ಸಿಬ್ಬಂದಿಗಳಿಗೆ ಗಣನೀಯ ಮೊತ್ತದಷ್ಟು ಹಣ ದೊರೆಯುವಂತೆ ಮಾಡುವ ಉದ್ದೇಶದಿಂದ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಬೆಂಗಳೂರು ಮಹಾನಗರ ಸಾರಿಗೆ ನಿಗಮಗಳಲ್ಲಿ 50 ಲಕ್ಷ ರೂ. ಪ್ರೀಮಿಯಂ ರಹಿತ ವಿಮಾ ಯೋಜನೆ ಜಾರಿಯಲ್ಲಿದೆ. ಪ್ರಸ್ತುತ ಇದನ್ನು ಮೀರಿ ಕೆಕೆಆರ್‌ಟಿಸಿಯ ನೌಕರರಿಗೆ ಪ್ರೀಮಿಯಂ ರಹಿತ 1 ಕೋಟಿ ರೂ. ವಿಮಾ ಯೋಜನೆ ಜಾರಿ ಮಾಡಿರುವುದು ಸಂತಸದ ವಿಷತ ಎಂದು ನೌಕರರು ಖುಷಿ ಹಂಚಿಕೊಳ್ಳುತ್ತಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ