NEWSನಮ್ಮರಾಜ್ಯಸಂಸ್ಕೃತಿ

KKRTC: ಏ.14ರಂದು ಡಾ.ಅಂಬೇಡ್ಕ‌ರ್‌ ಜಯಂತಿ-ತಲಾ 20 ಸಾವಿರ ರೂ. ಮಂಜೂರು

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಇದೇ ಏ.14ರಂದು ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕ‌ರ್‌ ಅವರ ಜಯಂತಿ ಕಾರ್ಯಕ್ರಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಲ್ಲ ವಿಭಾಗಗಳು ಹಾಗೂ ಕಾರ್ಯಾಗಾರಗಳಿಗೆ ತಲಾ 20 ಸಾವಿರ ರೂ. ಹಣ ಮಂಜೂರು ಮಾಡಿ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಿಗಮದ ವ್ಯವಸ್ಥಾಪಕ ನಿರ್ದೇಶಕರ ಏ.1ರಂದು ಮಾಡಿದ ಆದೇಶ ಮೇರೆಗೆ ಪ್ರತಿ ವರ್ಷದಂತೆ ಈ ವರ್ಷವು 14-04-2026 ರಂದು ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿ ಸಮಾರಂಭವನ್ನು ಏರ್ಪಡಿಸಲು ನಿಗಮದ ಎಲ್ಲ ವಿಭಾಗ ಹಾಗೂ ಪ್ರಾದೇಶಿಕ ಕಾರ್ಯಾಗಾರಗಳಲ್ಲಿ ಆಚರಿಸಲು ಪ್ರತಿ ವಿಭಾಗಕ್ಕೆ 20,000 ರೂ.ಗಳಂತೆ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವ್ಯವಸ್ಥಾಪಕ ನಿರ್ದೇಶಕರವರ ಆದೇಶದಂತೆ, ಏ.14ರಂದು ಅಂಬೇಡ್ಕ‌ರ್‌ ಅವರ ಜಯಂತಿ ಕಾರ್ಯಕ್ರಮವನ್ನು ತಮ್ಮ ವಿಭಾಗದಲ್ಲಿರುವ ಎಲ್ಲ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ನೌಕರರ ಸಂಘಟನೆಗಳ ಪದಾಧಿಕಾರಿಗಳನ್ನು, ಕಾರ್ಮಿಕ ಸಂಘಟನೆಯ ಮುಖಂಡರು ಹಾಗೂ ಎಲ್ಲ ನೌಕರರನ್ನು ಆಹ್ವಾನಿಸಿ, ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯಕ್ರಮವನ್ನು ಅಚ್ಚು-ಕಟ್ಟಾಗಿ ಆಯೋಜಿಸಬೇಕು ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ