CrimeNEWSನಮ್ಮಜಿಲ್ಲೆ

KKRTC: ಆತ್ಮಹತ್ಯೆ ಮಾಡಿಕೊಂಡ ಬಿಎಂಟಿಸಿ ನೌಕರರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು- ಧರಣಿಗೆ ನಾವು ಬರಲು ಸಿದ್ಧ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ 24 ಗಂಟೆಯಲ್ಲಿ ಬಿಎಂಟಿಸಿಯ ಮೂವರು ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬಕ್ಕೆ ತಲಾ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಸಾರಿಗೆ ಸಂಘಟನೆಗಳ ಮುಖಂಡರು ಮತ್ತು ನೌಕರರು ಧರಣಿ ನಡೆಸುತ್ತಿದ್ದು, ಈ ಧರಣಿಗೆ ನಾವು ಬರಲು ಸಿದ್ದರಿದ್ದೇವೆ ಎಂದು ಕೆಕೆಆರ್‌ಟಿಸಿ ನೌಕರರು ಹೇಳುತ್ತಿದ್ದಾರೆ.

ಕೆಕೆಆರ್‌ಟಿಸಿ ನೌಕರರು ಹೇಳಿರುವುದು: ಸಾಮಾಜಿಕ ಜಾಲತಾಣಗಳಲ್ಲಿ ಬೀಗುವ ಮುಖಂಡರುಗಳೇ ದಯವಿಟ್ಟು ನಮ್ಮದೊಂದು ಮನವಿ. ನಿನ್ನೆದಿನ ಬೆಂಗಳೂರಿನ ಬಿಎಂಟಿಸಿ ಚನ್ನಸಂದ್ರ ಘಟಕದಲ್ಲಿ ಆತ್ಮ ಹತ್ಯೆ ಮಾಡಿ ಕೊಂಡಿರುವ ಚಾಲನಾ ಸಿಬ್ಬಂದಿಯ ಪರವಾಗಿ 50 ಲಕ್ಷ ರೂ. ಪರಿಹಾರ ಕೊಡಬೇಕೆಂದು ಕೆಲ ಧೀಮಂತ ಮುಖಂಡರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ.

ಆದ್ದರಿಂದ ಬೆಂಗಳೂರು ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಸ್ಥಳೀಯ ಮತ್ತು ಸುತ್ತಮುತ್ತಲಿನ ಎಲ್ಲ ಮುಖಂಡರು ಮತ್ತು ಸ್ವಾಭಿಮಾನಿ ನೌಕರ ಬಂಧುಗಳು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ನೊಂದ ಕುಟುಂಬಗಳ ಪರವಾಗಿ ಧ್ವನಿ ಆಗಬೇಕು.

ಏಕೆಂದರೆ ಮುಂದೊಂದು ದಿನ ಈ ಚಾಲನಾ ಸಿಬ್ಬಂದಿಗಳ ಗತಿ ನಮಗೂ ಬರುವುದರಲ್ಲಿ ಯಾವುದೇ ಅನುಮಾನ ಇಲ್ಲ. ಇಂದೆ ಮುಗಿದರೆ ಪರವಾಗಿಲ್ಲ ಇಂದು ಸಂಜೆ ಮೇಲೆ ಮುಂದುವರಿದರೆ ಕಲ್ಯಾಣ ಕರ್ನಾಟಕ ಭಾಗದಿಂದ ನಾವು ಕೂಡ ಬಂದು ನಾಳೆ ಧರಣಿಯಲ್ಲಿ ಭಾಗವಹಿಸುತ್ತೇವೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ