NEWSಕ್ರೀಡೆನಮ್ಮರಾಜ್ಯ

KKRTC ಸಾರಿಗೆ ನೌಕರರ ಕ್ರೀಡಾಕೂಟ: 10 ಬಹುಮಾನಗಳ ಮುಡಿಗೇರಿಸಿಕೊಂಡ ವಿಜಯಪುರ ವಿಭಾಗ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಂಸ್ಥಾಪನಾ ದಿನಾಚರಣೆ ಹಾಗೂ ರಜತ ಮಹೋತ್ಸವದ ಅಂಗವಾಗಿ ನಿಗಮದ ಅಧಿಕಾರಿ, ಸಿಬ್ಬಂದಿಯವರಿಗೆ ಕಲಬುರಗಿಯ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಬುಧವಾರ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.

ನಿಗಮದಿಂದ ಒಟ್ಟು 9 ವಿಭಾಗಗಳಲ್ಲಿನ 450 ಕ್ರೀಡಾಪಟುಗಳು ಭಾಗವಹಿಸಿದ್ದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ಕ್ರೀಡಾಪಟುಗಳು ವೈಯಕ್ತಿಕ ಅಥ್ಲೆಟಿಕ್ಸ್ ಆಟಗಳಲ್ಲಿ 10 ಬಹುಮಾನಗಳನ್ನು ಪಡೆದಿದ್ದಾರೆ.

ಮಹಿಳೆಯರ ಥ್ರೋಬಾಲ್ ಆಟದಲ್ಲಿ ಕಲಬುರಗಿ ವಿಭಾಗ-1ರ ತಂಡದ ವಿರುದ್ಧ ವಿಜಯಪುರ ವಿಭಾಗ-1ರ ಮಹಿಳಾ ಕ್ರೀಡಾಪಟುಗಳು ವಿಜೇತರಾಗಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಕ್ರೀಡಾಪಟುಗಳ ಸಾಧನೆಗೆ ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಕೇಂದ್ರ ಕಚೇರಿಯ ಇಲಾಖೆಯ ಮುಖ್ಯಸ್ಥರು ಹಾಗೂ ವಿಭಾಗೀಯ ನಿಯಂತ್ರಣಾಧಿಕಾರಿಗಳು ಅಭಿನಂದಿಸಿದ್ದಾರೆ.

Megha
the authorMegha

Leave a Reply

error: Content is protected !!