CrimeNEWSಕೃಷಿ

ಕೊಡಗು: ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಬಲಿಯಾದ ಕಾಫಿ ಬೆಳೆಗಾರ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಕೊಡಗಿನಲ್ಲಿ ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ನಿಲ್ಲುವಂತೆ ಕಾಣಿಸುತ್ತಿಲ್ಲ. ಮೇಲಿಂದ ಮೇಲೆ ಕಾಡಾನೆ ದಾಳಿಗೆ ಬಲಿಯಾಗುತ್ತಿರುವ ಪ್ರಕರಣಗಳು ನಡೆಯುತ್ತಿದ್ದು, ಸೋಮವಾರ ಬೆಳಗ್ಗೆ ದಕ್ಷಿಣಕೊಡಗಿನಲ್ಲಿ ಕಾಡಾನೆ ಬೆಳೆಗಾರರೊಬ್ಬರನ್ನು ಬಲಿ ಪಡೆದಿದೆ.

ಅಯ್ಯಮಾಡ ಮಾದಯ್ಯ(63) ಕಾಡಾನೆ ದಾಳಿಗೆ ಬಲಿಯಾದವರು. ಇವರು ಬೆಳಗ್ಗೆ 6.45ರ ಸಮಯದಲ್ಲಿ ತೋಟಕ್ಕೆ ತೆರಳುತ್ತಿದ್ದ ಸಂದರ್ಭ ಪೊನ್ನಂಪೇಟೆ ತಾಲೂಕು ಬೀರುಗ ಗ್ರಾಮದ ಚಾಮುಂಡಿ ಮುತ್ತಪ್ಪ ಕೊಲ್ಲಿ ರಸ್ತೆಯಲ್ಲಿ ದಿಢೀರ್ ಬಂದ ಕಾಡಾನೆ ದಾಳಿ ಮಾಡಿದ್ದು, ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈಗಾಗಲೇ ಕೊಡಗಿನಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಹಲವರನ್ನು ಬಲಿಪಡೆದಿದೆ. ಆದರೆ ಅರಣ್ಯ ಇಲಾಖೆ ಯಾವುದೇ ರೀತಿಯ ಕ್ರಮಕೈಗೊಳ್ಳದ ಕಾರಣದಿಂದ ಮೇಲಿಂದ ಮೇಲೆ ಘಟನೆಗಳು ನಡೆಯುತ್ತಿವೆ.

ಇದೀಗ ಬೆಳೆಗಾರರು ಮೃತಪಟ್ಟ ಪ್ರದೇಶದಲ್ಲಿ ಕಾಡಾನೆ ಹಾವಳಿ ಜಾಸ್ತಿಯಾಗಿದೆ. ಇನ್ನು ಬೀರುಗ ಹಾಗೂ ಕುರ್ಚಿ ಭಾಗದಲ್ಲಿ 40ಕ್ಕೂ ಹೆಚ್ಚು ಕಾಡನೆಗಳು ವಿವಿಧ ತೋಟಗಳಲ್ಲಿ ಬೀಡು ಬಿಟ್ಟಿದ್ದು, ಅವುಗಳು ತೋಟದಲ್ಲಿ ಎಲ್ಲೆಂದರಲ್ಲಿ ಅಡ್ಡಾಡುತ್ತಿರುವುದರಿಂದ ಕಾಫಿ ತೋಟ ನಾಶವಾಗುತ್ತಿದೆ.  ಜತೆಗೆ ಜನ ಅಡ್ಡಾಡಲು ಭಯಪಡುವಂತಾಗಿದೆ.

ಕಾಡಾನೆಗಳ ಹಾವಳಿಯಿಂದಾಗಿ ರೈತರು ಕಾಫಿ, ಬೆಳೆಗಾರರು, ಕಾರ್ಮಿಕರು ಇಲ್ಲಿ ಬದುಕುವುದೇ ಕಷ್ಟವಾಗಿದೆ ವನ್ಯಪ್ರಾಣಿಗಳ ಉಪಟಳದಿಂದ ಈ ಭಾಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ರೈತ ಸಂಘದ ಮುಖಂಡರಾದ ಅಜ್ಜಮಾಡ ಚಂಗಪ್ಪ ಅಳಲು ತೋಡಿಕೊಂಡಿದ್ದಾರೆ.

ಬಿಸಿಲಿನಿಂದಾಗಿ ಅರಣ್ಯದಲ್ಲಿ ಮೇವು ಮತ್ತು ನೀರಿಲ್ಲದ ಕಾರಣ ಕಾಡಾನೆಗಳೆಲ್ಲವೂ ನಾಡಿನತ್ತ ಲಗ್ಗೆಯಿಡುತ್ತಿದ್ದು ಇದರಿಂದ ಈ ವ್ಯಾಪ್ತಿಯಲ್ಲಿ ತೋಟದಲ್ಲಿ ಕೆಲಸ ಮಾಡಲು ಜನ ಹೆದರುವಂತಾಗಿದೆ.

ಎಷ್ಟೇ ಜಾಗ್ರತೆ ವಹಿಸಿದರೂ ತೋಟದ ನಡುವೆ ಇರುವ ಕಾಡಾನೆಗಳು ಗೊತ್ತೇ ಆಗದಂತೆ ದಾಳಿ ಮಾಡಿಬಿಡುತ್ತವೆ. ಹೀಗಾಗಿ ತೋಟದಲ್ಲಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ತನಕ ಈ ವ್ಯಾಪ್ತಿಯ ಜನ ನೆಮ್ಮದಿಯಾಗಿ ಇರಲು ಸಾಧ್ಯವಾಗದಂತಾಗಿದೆ.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ