Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಕೊಡಗು: ವಿದ್ಯುತ್ ತಂತಿ ತಗುಲಿ ಧಗ ಧಗ ಉರಿದ ಟ್ರ್ಯಾಕ್ಟರ್​​ನಲ್ಲಿದ್ದ ಹುಲ್ಲು

ವಿಜಯಪಥ ಸಮಗ್ರ ಸುದ್ದಿ

ಕೊಡಗು: ಟ್ರ್ಯಾಕ್ಟರ್​​ನಲ್ಲಿ ಹುಲ್ಲು ಸಾಗಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡು ಧಗ ಧಗ ಉರಿದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಟ್ರ್ಯಾಕ್ಟರ್‌ ಪಾರಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಯಡೂರು ಗ್ರಾಮದ ಮಾರಿಗುಡಿ ಬಳಿ ನಡೆದಿದೆ.

ಸಾಮರ್ಥ್ಯಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಟ್ರ್ಯಾಕ್ಟರ್​ನಲ್ಲಿ ಹುಲ್ಲು ತುಂಬಿಕೊಂಡು ಹೋಗುತ್ತಿದ್ದರು. ಈ ವೇಳೆ ಗ್ರಾಮದ ಮಾರಿಗುಡಿ ಬಳಿ ಬರುವಾಗ ಮೇಲಿನಿಂದ ಹಾದು ಹೋಗಿದ್ದ ಕರೆಂಟ್ ವೈರ್ ತಗುಲಿದೆ. ತಕ್ಷಣ ಬೆಂಕಿಹೊತ್ತುಕೊಂಡು ಉರಿಯುತ್ತಿತ್ತು.

ಈ ವೇಳೆ ಟ್ರ್ಯಾಕ್ಟರ್​ ಚಾಲಕನ ಚಾಣಾಕ್ಷತೆಯಿಂದ ಟ್ರಾಲಿಯಲ್ಲಿದ್ದ ಹುಲ್ಲನ್ನು ಲಿಫ್ಟ್​ ಮಾಡುವ ಮೂಲಕ ಕೆಳಗೆ ಸುರಿದಿದ್ದಾನೆ. ಹೀಗಾಗಿ ಚಾಲಕ ಪಾರಾಗಿದ್ದಲ್ಲದೇ ಟ್ರ್ಯಾಕ್ಟರ್‌ಅನ್ನು ಕೂಡ ಸೇಫ್ ಮಾಡಿ ಆಗುವ ಅನಾಹುತ ತಪ್ಪಿಸಿದ್ದಾನೆ.

ಈ ಹುಲ್ಲು ಕುಂದಳ್ಳಿ ಗ್ರಾಮದ ಪ್ರವೀಣ್ ಎನ್ನುವರಿಗೆ ಸೇರಿದ್ದು ಬೆಟ್ಟದಳ್ಳಿಯಿಂದ ಮಸಗೋಡಿಗೆ ತೆಗೆದುಕೊಂಡು ಹೋಗಲಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...