ಕೊಪ್ಪಳ: ಭಾರೀ ಮಳೆಗೆ ಮನೆ ಕುಸಿದು ಒಂದೂವರೆ ವರ್ಷದ ಮಗುವೊಂದು ಮೃಪಟ್ಟಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಮನೆ ಕುಸಿದು ಪ್ರಶಾಂತಿ ಎಂಬ ಪುಟ್ಟಮಗು ಮೃತಪಟ್ಟಿದು, ಹನುಮಂತಿ (28), ದುರಗಮ್ಮ (65), ಭೀಮಮ್ಮ (19), ಹುಸೇನಪ್ಪ(46), ಫಕೀರಪ್ಪ ಎಂಬುವರು ಗಾಯಗೊಂಡಿದ್ದಾರೆ.
ಬುಧವಾರ ಜಿಲ್ಲೆಯಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಮನೆ ಕುಸಿದ ಪರಿಣಾಮ ಮನೆಯಲ್ಲಿದ್ದ ಮಗು ಅಸುನೀಗಿದೆ. ಇನ್ನುಳಿದ ಈ ಆರು ಜನರು ಗಾಯಗೊಂಡಿದ್ದಾರೆ.
ಈ ಆರು ಜನ ಗಾಯಾಳುಗಳನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಹಸೀಲ್ದಾರ್ ಯು.ನಾಗರಾಜ್ ಹಾಗೂ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Related

Megha