NEWSಉದ್ಯೋಗನಮ್ಮರಾಜ್ಯ

KPSC: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಿವಿಲ್‌ ಇಂಜಿನಿಯರ್‌ ಸೇರಿ 277 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಏಪ್ರಿಲ್‌ 15ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ l ಮೇ 15-2024 ಕೊನೇ ದಿನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನು) ನಿಯಮಗಳು 2021 ರಸ್ತೆಯ ಉಳಿಕೆ ಮೂಲ ವೃಂದದಲಿನ ಗ್ರೂಪ್-‘ಬಿ’ ವೃಂದದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 92 ಸಹಾಯಕ ಇಂಜಿನಿಯರ್‌ (ಸಿವಿಲ್‌- ವಿಭಾಗ-1) ಅದರಂತೆ ಜಲ ಸಂಪನ್ಮೂಲ ಇಲಾಖೆಯ 90 ಖಾಲಿ ಇರುವ ಸಹಾಯಕ ಇಂಜಿನಿಯರ್‌ (ಸಿವಿಲ್‌- ವಿಭಾಗ-1).

ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಭೂ ದಾಖಲೆಗಳ ಸಹಾಯಕ ನಿರ್ದೇಶಕರ 24 ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರು/ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ 21 ಹುದ್ದೆಗಳು ಕಾಲಿ ಇವೆ.

ಇನ್ನು ಅದರಂತೆಯೇ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸಹಾಯಕ ನಿರ್ದೇಶಕರ 20 ಹುದ್ದೆಗಳು ಖಾಲಿ ಇದ್ದು ಇವುಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಇಂಜಿನಿಯರ್‌ (ಮೆಕ್ಯಾನಿಕಲ್‌- ವಿಭಾಗ-1) 10 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಹುದಾಗಿದೆ.

ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿ ಖಾಲಿ ಇರುವ ಕಾರ್ಖಾನೆಗಳ ಸಹಾಯಕ ನಿರ್ದೇಶಕರ 7 ಹುದ್ದೆಗಳಿಗೆ ಹಾಗೂ  ಬಾ‌ಯ್ಲರುಗಳ ಸಹಾಯಕ ನಿರ್ದೇಶಕರ 3 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಂತರ್ಜಲ ನಿರ್ದೇಶನಾಲಯದ ಭೂ ವಿಜ್ಞಾನಿಯ 10 ಹುದ್ದೆಗಳು ಸೇರಿದಂತೆ ಒಟ್ಟು 277 ಹುದ್ದೆಗಳು ವಿವಿಧ ಇಲಾಖೆಗಳಲ್ಲಿ ಕಾಲಿ ಇದ್ದು ಈ ಎಲ್ಲ ಹುದ್ದೆಗಳ ಭರ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಎಲ್ಲ ಹುದ್ದೆಗಳಿಗೂ ಏಪ್ರಿಲ್‌ 15ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು,  15-5 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಜತೆಗೆ ಶುಲ್ಕ ಪಾವತಿಗೂ ಕೂಡ 14-5-2024 ಕೊನೆಯ ದಿನವಾಗಿದೆ.

ಇನ್ನು ಈ ಎಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕ (ತಾತ್ಕಾಲಿಕ) 11-08-2024 ಆಗಿರುತ್ತದೆ. ಈ ಪರೀಕ್ಷೆಯಲ್ಲಿ ಕನ್ನಡ ಭಾಷಾ ಪರೀಕ್ಷೆ ಮತ್ತು ಸಾಮಾನ್ಯ ಪತ್ರಿಕೆ ಮಾತ್ರ ಇರುತ್ತದೆ ಎಂದು ಆಯೋಗ ತಿಳಿಸಿದೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ