ಕೆ.ಆರ್.ಪೇಟೆ: ಕಕ್ಷಿದಾರರಿಗೆ ಶೀಘ್ರವಾಗಿ ನ್ಯಾಯದಾನ ನೀಡಲು ವಕೀಲರು ನ್ಯಾಯಾಂಗ ವ್ಯವಸ್ಥೆಯೊಂದಿಗೆ ಕೈಜೋಡಿಸಿ ಕೆಲಸ ಮಾಡಬೇಕು ಎಂದು ನೂತನ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೃಪಾ ಸಲಹೆ ನೀಡಿದರು.
ವಕೀಲರ ಸಂಘದ ವತಿಯಿಂದ ಆಯೋಜಿಸಿದ್ದ ಸ್ವಾಗತ ನೂತನ ನ್ಯಾಯಾಧೀಶರಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು.
ನ್ಯಾಯಾಧಿಕರಣದ ರಥವನ್ನು ಮುನ್ನಡೆಸಲು ವಕೀಲರು ಸಹಕಾರ ನೀಡಬೇಕು. ಅದರಂತೆ ತಮ್ಮ ಕಕ್ಷಿದಾರರಿಗೆ ಶೀಘ್ರವಾಗಿ ನ್ಯಾಯದಾನ ನೀಡಲು ನ್ಯಾಯಾಂಗ ವ್ಯವಸ್ಥೆಯೊಂದಿಗೆ ಕೈಜೋಡಿಸ ಬೇಕು ಎಂದರು.
ನ್ಯಾಯಾಂಗದ ರಥಕ್ಕೆ ವಕೀಲರು ಮತ್ತು ನ್ಯಾಯಾಧೀಶರು ಎರಡು ಚಕ್ರಗಳಿದ್ದಂತೆ. ವಕೀಲರು ಶೀಘ್ರ ನ್ಯಾಯದಾನಕ್ಕೆ ಪೂರಕವಾಗಿ ನ್ಯಾಯಾಂಗ ವ್ಯವಸ್ಥೆಗೆ ಪೂರಕವಾಗಿ ಕೆಲಸ ಮಾಡಿ ಸಮರ್ಥವಾಗಿ ವಾದ ಮಂಡಿಸುವ ಮೂಲಕ ಕೈಜೋಡಿಸಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಹಿರಿಯ ಶ್ರೇಣಿ ಸಿವಿಲ್ ನೂತನ ನ್ಯಾಯಾಧೀಶರಾದ ಮಂಜುನಾಥ್ ಮಾತನಾಡಿ, ವಕೀಲರಿಗೆ ಕಾನೂನು ಪುಸ್ತಕಗಳೇ ರಾಮಾಯಣ, ಮಹಾಭಾರತ ಗ್ರಂಥಗಳಿದ್ದಂತೆ ಆದ್ದರಿಂದ ಕೇಸುಗಳ ಆಳಕ್ಕೆ ಇಳಿದು ಕಾನೂನು ಪುಸ್ತಗಳನ್ನು ಓದಿಕೊಂಡು ಸಮರ್ಥವಾಗಿ ವಾದ ಮಂಡಿಸಿ ಕಕ್ಷಿದಾರರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದರು.
ಅಪರ ಸಿವಿಲ್ ನ್ಯಾಯಾಧೀಶರಾದ ಶಕುಂತಲಾ, ಅರ್ಪಿತಾ, ವಕೀಲರ ಸಂಘದ ಅಧ್ಯಕ್ಷ ರವಿಶಂಕರ್, ಪ್ರಧಾನ ಕಾರ್ಯದರ್ಶಿ ರಾಜೇಗೌಡ, ಹಿರಿಯ ವಕೀಲರಾದ ಎಸ್.ಸಿ. ವಿಜಯಕುಮಾರ್, ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ವಕೀಲರು ಇದ್ದರು.
l ವರದಿ ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ