NEWSನಮ್ಮಜಿಲ್ಲೆಸಂಸ್ಕೃತಿ

ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ

ವಿಜಯಪಥ ಸಮಗ್ರ ಸುದ್ದಿ

ಕೃಷ್ಣರಾಜಪೇಟೆ: ಪಟ್ಟಣದ ನೇಕಾರ ತೊಗಟವೀರ ಸಮಾಜದ ವತಿಯಿಂದ ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವವನ್ನು ಶ್ರದ್ದಾ ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು.

ಇತಿಹಾಸ ಪ್ರಸಿದ್ಧವಾದ ಶ್ರೀ ದೇವಿರಮ್ಮಣ್ಣಿ ಕೆರೆಯಲ್ಲಿ ಕರಗವನ್ನು ಸ್ಥಾಪಿಸಿ ಬಾಲಕಿಯರ ತಲೆಯ ಮೇಲೆ ಕರಗವನ್ನು ಹೊರಿಸಿ ನಡೆಮುಡಿಯೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಮಂಗಳ ವಾಧ್ಯಗಳು ಹಾಗೂ ಜಾನಪದ ಕಲಾ ತಂಡಗಳ ವೈಭವದ ಮೆರವಣಿಗೆಯೊಂದಿಗೆ ಬಸವೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಶ್ರೀ ರಾಮ ಮಂದಿರದ ಆವರಣಕ್ಕೆ ಕರಗದ ಕಳಸವನ್ನು ತಂದು ಪ್ರತಿಷ್ಟಾಪಿಸಿ ವಿಶೇಷ ಪೂಜೆ ಸಲ್ಲಿಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಲಾಯಿತು.

ನೇಕಾರ ತೊಗಟವೀರ ಸಮಾಜದ ಮುಖಂಡ ಹಂಸ ರಮೇಶ್ ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವದ ನೇತೃತ್ವ ವಹಿಸಿ ಮಾತನಾಡಿ ಹಾಲಿಗೆ ಸಕ್ಕರೆ ಬೆರೆತರೆ ಹಾಲಿನ ರುಚಿಯು ಹೆಚ್ಚಾಗುವಂತೆ ಸಮಾಜದಲ್ಲಿ ಅತ್ಯಂತ ಹಿಂದುಳಿದಿರುವ ನೇಕಾರ ತೊಗಟವೀರ ಸಮಾಜ ಎಲ್ಲ ಜಾತಿ ವರ್ಗಗಳ ಜನರೊಂದಿಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಎಂಧರು.

ಮೈಸೂರು ವಿಭಾಗದ ತೊಗಟವೀರ ಸಮಾಜದ ಅಧ್ಯಕ್ಷ ಇಂಜಿನಿಯರ್ ವೆಂಕಟೇಶ್, ಪಿಎಲ್ ಡಿ ಬ್ಯಾಂಕ್ ಮಾಜಿ ನಿರ್ದೇಶಕ ಕೆ.ಆರ್. ಪುಟ್ಟಸ್ವಾಮಿ, ಪುರಸಭೆ ಸದಸ್ಯೆ ಇಂದ್ರಾಣಿ ವಿಶ್ವನಾಥ್, ಪದ್ಮರಾಜು, ಪುರಸಭೆ ಮಾಜಿ ಅಧ್ಯಕ್ಷ ರಾಮಕೃಷ್ಣ ಮಾಸ್ಟರ್, ರಾಚಿ ನಂಜುಂಡಣ್ಣ, ಮೈಲಾರಿ ರವಿ, ಕ್ಯಾಂಟೀನ್ ರಾಮಣ್ಣ, ಅಂಗಡಿ ಲಕ್ಷ್ಮಣ, ಕೈಗೋನಹಳ್ಳಿ ಈರಪ್ಪಣ್ಣ, ಚಂದ್ರಕಲಾ ರಮೇಶ್.

ಮೀಸೆ ರಮೇಶಣ್ಣ, ಮಲ್ಲಿಕಾರ್ಜುನ, ನಿರಂಜನ, ಮಧುಸೂದನ್, ಕ್ಯಾಂಟೀನ್ ವಾಸು ಸೇರಿದಂತೆ ಅಂಚನಹಳ್ಳಿ, ತಗಡೂರು, ತೆಂಡೆಕೆರೆ, ಹೊನ್ನಾವರ, ಮಾಳಗೂರು, ಸರಗೂರು, ಶ್ರೀರಂಗಪಟ್ಟಣ, ಪಾಂಡವಪುರ, ಉಂಡಿಗನಹಾಳು, ಹರವು ಅರಳಕುಪ್ಪೆ, ಕೈಗೋನಹಳ್ಳಿ, ಸಿಂಧಘಟ್ಟ ಗ್ರಾಮಗಳಿಂದ ಸಾವಿರಾರು ಜನರು ಕರಗ ಮಹೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಕರಗ ಮಹೋತ್ಸವದ ಅಂಗವಾಗಿ ನಡೆದ ಅನ್ನ ದಾಸೋಹ ಕಾರ್ಯಕ್ರಮದಲ್ಲಿ ಐದು ಸಾವಿರಕ್ಕೂ ಹೆಚ್ಚಿನ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ವರದಿ.ಡಾ.ಕೆ.ಆರ್.ನೀಲಕಂಠ , ಕೃಷ್ಣರಾಜಪೇಟೆ

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ