ಕೆ.ಆರ್.ಪೇಟೆ: ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ಇಂದು ಕೃಷ್ಣರಾಜಪೇಟೆಯ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ನೂರಾರು ಪ್ರಕರಣಗಳು ಇತ್ಯರ್ಥವಾದವು.
ಈ ವೇಳೆ ಸಿವಿಲ್ ನ್ಯಾಯಾಲಯದ ಪ್ರಧಾನ ನ್ಯಾಯಾಧಿಶರಾದ ಕೃಪಾ ಮಾತನಾಡಿ, ಇಂದು ಕೆ.ಆರ್.ಪೇಟೆಯ ಸಿವಿಲ್ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ವಕೀಲರ ಸಂಘದ ಸಹಕಾರದಿಂದ ಹತ್ತಾರು ವರ್ಷಗಳಿಂದ ಇತ್ಯರ್ಥವಾಗದ ನೂರಾರು ಪ್ರಕರಣಗಳನ್ನು ರಾಜಿ ಸಂಧಾನ ನಡೆಸಿ ಪರಸ್ಪರ ಮಾತುಕತೆಯ ಮೂಲಕ ಮನವೊಲಿಸಿ ವ್ಯಾಜ್ಯಗಳನ್ನು ಮುಕ್ತಾಯಗೊಳಿಸಲಾಯಿತು ಎಂದು ತಿಳಿಸಿದರು.
ಸಣ್ಣ ಪುಟ್ಟ ವಿಚಾರಗಳಿಗೆ ಪರಸ್ಪರ ನಿಷ್ಟುರ ಮಾಡಿಕೊಂಡು ದ್ವೇಷ ಸಾಧಿಸಿ ಪ್ರಕರಣಗಳನ್ನು ದಾಖಲಿಸಿ ಬದ್ಧ ದ್ವೇಷಿಗಳಂತೆ ನ್ಯಾಯಾಲಯಕ್ಕೆ ಬರುತ್ತಿದ್ದ ಕಕ್ಷಿದಾರರು ಇಂದು ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಂಡು ಸಂತೋಷದಿಂದ ತಮ್ಮ ಮನೆಗಳಿಗೆ ಹೋಗುತ್ತಿರುವುದು ಸಮಾಜದಲ್ಲಿ ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.
ಅಪರ ಸಿವಿಲ್ ನ್ಯಾಯಾಧೀಶರಾದ ಶಕುಂತಲಾ, ಅರ್ಪಿತಾ, ವಕೀಲರ ಸಂಘದ ಅಧ್ಯಕ್ಷ ಎನ್.ಆರ್.ರವಿಶಂಕರ್, ಪ್ರಧಾನ ಕಾರ್ಯದರ್ಶಿ ಆರ್.ಕೆ. ರಾಜೇಗೌಡ, ಸಹಾಯಕ ಸರ್ಕಾರಿ ಅಭಿಯೋಜಕರಾದ ಶಿವಪ್ಪ, ಜಿ.ಸುರೇಂದ್ರ, ವೀರಭದ್ರ ಸೇರಿದಂತೆ ನ್ಯಾಯಾಲಯದ ಸಿಬ್ಬಂದಿಗಳು ಹಾಗೂ ಕಕ್ಷಿದಾರರು ಭಾಗವಹಿಸಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ