NEWSಕೃಷಿನಮ್ಮಜಿಲ್ಲೆ

KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಹಳೇ ಮೈಸೂರು ಭಾಗದ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟೆ ಭರ್ತಿಯಾಗಿದ್ದು, ಡ್ಯಾಂನಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರನ್ನು ಹರಿಯ ಬಿಡಲಾಗಿದೆ. ಇದರಿಂದ ಕಾವೇರಿ ಭೋರ್ಗರೆಯುತ್ತಿರುವುದರಿಂದ ಕಾವೇರಿ ಕೊಳ್ಳದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಹಳೇ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆ ಭರ್ತಿಯಾಗಿದೆ. ಇನ್ನೂ ಡ್ಯಾಂನಿಂದ ಒಂದು ಲಕ್ಷ ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡಲಾಗಿದೆ. ಹೀಗಾಗಿ ಕಾವೇರಿ ನದಿಯ ಅಕ್ಕಪಕ್ಕದ ಜನರಲ್ಲಿ ಪ್ರವಾಹ ಸಂಕಷ್ಟ ಎದುರಾಗಿದೆ.

ಕೆಆರ್‌ಎಸ್ ಅಣೆಕಟ್ಟೆಯಿಂದ ಒಂದು ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬಿಟ್ಟಿರುವ ಪರಿಣಾಮ ಜಿಲ್ಲಾ ವ್ಯಾಪ್ತಿಯಲ್ಲಿ ಹಲವು ಅವಘಡಗಳು ಜರುಗಿವೆ. ಒಂದು ಕಡೆ ಕಾವೇರಿ ನದಿ ಅಕ್ಕಪಕ್ಕದ ಜಮೀನುಗಳು ಜಲಾವೃತಗೊಂಡು ಅಲ್ಲಿನ ಬೆಳೆಗಳು ಮುಳುಗಡೆಯಾಗಿವೆ.

ಮತ್ತೊಂದೆಡೆ, ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನದ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಈ ಹಿನ್ನೆಲೆ ನದಿಗೆ ಇಳಿಯದಂತೆ ಭಕ್ತರಿಗೆ ನಿಷೇಧ ಹೇರಲಾಗಿದೆ. ಶ್ರೀರಂಗಪಟ್ಟಣ ಕೋಟೆ ಗಣಪತಿ ದೇವಸ್ಥಾನ ಕಾವೇರಿ ನದಿಯ ಪ್ರವಾಹದಿಂದ ಮುಳುಗಡೆಯಾಗಿದ್ದು, ವಿಘ್ನೇಶ್ವರನಿಗೆ ಪೂಜೆ ಇಲ್ಲದಂತಾಗಿದೆ.

ಇನ್ನು ಸುಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೂ ಜಲಕಂಟಕ ಎದುರಾಗಿದೆ. ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಹಿನ್ನೆಲೆ ರಂಗನತಿಟ್ಟಿನ 25 ನಡುಗಡ್ಡೆಗಳ ಪೈಕಿ ಬಹುತೇಕ ನಡುಗಡ್ಡೆಗಳು ಮುಳುಗಡೆಯಾಗಿವೆ. ಇದರಿಂದ ಇಲ್ಲಿನ ಪಕ್ಷಿ ಸಂಕುಲಗಳು ತಮ್ಮ ಗೂಡು, ಮೊಟ್ಟೆ, ಮರಿಗಳ ರಕ್ಷಣೆಗೆ ಪರದಾಡುತ್ತಿವೆ. ಅಲ್ಲದೇ ರಂಗನತಿಟ್ಟಿನ ವಾಕಿಂಗ್ ಪಾಥ್‌ ಸಹ ಮುಳುಗಡೆಯಾಗಿದೆ.

ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಡಿಸಿ ಡಾ.ಕುಮಾರ, ಜಿಪಂ ಸಿಇಒ ತನ್ವೀರ್ ಸೇಠ್ ಆಸೀಫ್ ಅವರು ಪ್ರವಾಹದಿಂದ ಆಗಿರುವ ಸಮಸ್ಯೆಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಮುಂದೆ 1.50 ಲಕ್ಷ ಕ್ಯುಸೆಕ್ ನೀರು ಬಿಟ್ಟರೆ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಜತೆಗೆ ಬೆಳೆ ಹಾನಿ ಪರಿಹಾರದ ಬಗ್ಗೆ ಚಿಂತನೆ ಮಾಡಿದ್ದಾರೆ. ಇನ್ನು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕಾವೇರಿಯಿಂದ ಪ್ರವಾಹ ಸಮಸ್ಯೆಯನ್ನು ಎದುರಿಸುವ ಆತಂಕದಲ್ಲಿರುವ ಜನರಿಗೆ ರಕ್ಷಣೆ ನೀಡುವ ಮೂಲಕ ಪರಿಹಾರ ಕಂಡುಕೊಳ್ಳುವ ಪ್ರಯತ್ನವನ್ನು ಜಿಲ್ಲಾಡಳಿತ ಮಾಡುತ್ತಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ