CRIMENEWSVideosನಮ್ಮಜಿಲ್ಲೆ

ಭ್ರಷ್ಟ ಕಾರ್ಮಿಕ ಅಧಿಕಾರಿಗೆ ಕೆಆರ್‌ಎಸ್ ಪಕ್ಷದಿಂದ ನಾಗರೀಕ ಸನ್ಮಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾರ್ಮಿಕ ಪರವಾನಿಗೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಗೆ ಸಿಕ್ಕಿದ ಕಾರ್ಮಿಕ ಅಧಿಕಾರಿಗೆ ಕೆಆರ್‌ಎಸ್ ಪಕ್ಷದ ವತಿಯಿಂದ ಸನ್ಮಾನ ಮಾಡಲು ಕಚೇರಿಗೆ ಹೋದಾಗ ಅಧಿಕಾರಿ ಇಲ್ಲದ ಕಾರಣ ಅವರ ಭಾವಚಿತ್ರಕ್ಕೆ ಸನ್ಮಾನ ಮಾಡಲಾಯಿತು.

ಸೆ.9ರಂದು ಬೆಂಗಳೂರಿನ ಬಾಗಲಗುಂಟೆಯಲ್ಲಿರುವ ಕಾರ್ಮಿಕ ಇಲಾಖೆಯ ಕಚೇರಿಯಲ್ಲಿ 10,000  ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ದಾಳಿಗೆ ಒಳಗಾದ ಭ್ರಷ್ಟ ಕಾರ್ಮಿಕ ಅಧಿಕಾರಿ ಶ್ಯಾಮರಾವ್‌ಗೆ ನಾಗರಿಕ ಸನ್ಮಾನ ಮಾಡುವ ಮೂಲಕ ಭ್ರಷ್ಟರಿಗೆ ಅವಮಾನ ಮಾಡುವ ವಿನೂತನ ಪ್ರತಿಭಟನೆಯನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸದಸ್ಯರು ಇಂದು ಆಯೋಜಿಸಿದರು.

ಭ್ರಷ್ಟ ಕಾರ್ಮಿಕ ಅಧಿಕಾರಿ ಕಚೇರಿಯಲ್ಲಿ ಇಲ್ಲವಾದುದರಿಂದ ಅವರು ಕುಳಿತುಕೊಳ್ಳುತ್ತಿದ್ದ ಕುರ್ಚಿಯ ಮೇಲೆ ಅವರ ಭಾವಚಿತ್ರ ಇಟ್ಟು, ಮೈಸೂರು ಪೇಟ ಹಾಕಿ ಶಾಲು ತೊಡಿಸಿ ಹಾರ ಹಾಕುವ ಮೂಲಕ ಅವಮಾನದ ಸನ್ಮಾನವನ್ನು ಮಾಡಿದರು.

ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್, ಬೆಂಗಳೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ನರಸಿಂಹ ರೆಡ್ಡಿ ಕೆ ಎಲ್, ದೇವರಾಜ್, ಲೋಕೇಶ್, ಬಾಲಕೃಷ್ಣ, ಶ್ರೀನಿವಾಸ ಮೂರ್ತಿ, ವಾಸುದೇವ, ಕೀರ್ತಿ ಗೌಡ ಹಾಗೂ ಬೆಂಗಳೂರಿನ ಪದಾಧಿಕಾರಿಗಳು ಹಾಗೂ ಸೈನಿಕರು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ ತಿ.ನರಸೀಪುರ: ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಹಸೀಲ್ದಾರ್‌ಗೆ ಮನವಿ ಚಾಲನೆಯಲ್ಲಿದ್ದ ಬಸ್‌ನ ಸ್ಟೇರಿಂಗ್‌ ಹಿಡಿದ ಕುಡುಕ- ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್‌ ಡಿಕ್ಕಿ, 11 ಮಂದಿಗೆ ಗಂಭೀರ... KSRTC: ಶೇ.44 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಗೃಹಜ್ಯೋತಿಯಿಂದ ಸರ್ಕಾರಿ ನೌಕರರ ಹೊರಗಿಡಲು ಸರ್ಕಾರದ ಚಿಂತನೆ ಸರ್ಕಾರಿ ನೌಕರಿ ಮಹಿಳೆಯರಿಗೆ ಇನ್ನು ಮುಂದೆ ಸಿಗಲ್ವ ಶಕ್ತಿ ಯೋಜನೆಯ ಉಚಿತ ಪ್ರಯಾಣ?