NEWSಕೃಷಿನಮ್ಮರಾಜ್ಯಮೈಸೂರು

98 ಅಡಿಗೆ ತಲುಪಿದ KRS ನೀರಿನ ಮಟ್ಟ: ಕನ್ನಂಬಾಡಿ ಕಟ್ಟೆಯಲ್ಲಿ ಕಾವೇರಿ ನರ್ತನ – ರೈತರ ಮೊಗದಲ್ಲಿ ಮಂದಹಾಸ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆಎರ್‌ಎಸ್  ಅಣೆಕಟ್ಟೆಯ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಒಂದೇ ವಾರದಲ್ಲಿ 11 ಅಡಿಯಷ್ಟು ನೀರು ಡ್ಯಾಂಗೆ ಹರಿದು ಬರುವ ಮೂಲಕ ಕೆಆರ್‌ಎಸ್ ನೀರಿನ ಮಟ್ಟ ಇಂದು 98 ಅಡಿಗೆ ತಲುಪಿದೆ.

ಮಳೆಯಿಂದಾಗಿ ಕೃಷ್ಣರಾಜ ಸಾಗರಕ್ಕೆ 14,135 ಕ್ಯೂಸೆಕ್ ಒಳಹರಿವು ಬರುತ್ತಿದೆ. 124.80 ಗರಿಷ್ಠ ಮಟ್ಟದ ಅಣೆಕಟ್ಟೆಯಲ್ಲಿ ಸದ್ಯ 98.10 ಅಡಿ ನೀರು ಸಂಗ್ರಹವಾಗಿದೆ. 49.452 ಟಿಎಂಸಿ ಗರಿಷ್ಠ ಸಾಮರ್ಥ್ಯದ  ಅಣೆಕಟ್ಟೆಯಲ್ಲಿ 21.978 ಟಿಎಂಸಿ ನೀರು ಸಂಗ್ರಹವಾಗಿದೆ.

ಇನ್ನು ಅಣೆಕಟ್ಟೆಯಿಂದ 532 ಕ್ಯೂಸೆಕ್ ನೀರು ಕುಡಿಯುವ ಉದ್ದೇಶಕ್ಕೆ ಹೊರ ಬಿಡಲಾಗುತ್ತಿದೆ. ನಿನ್ನೆ 8,787 ಕ್ಯೂಸೆಕ್ ಒಳಹರಿವು ಇತ್ತು. ವಾರದ ಹಿಂದಷ್ಟೇ 87 ಅಡಿಗೆ ಕುಸಿದಿತ್ತು. ಪ್ರಸ್ತುತ ನಿರಂತರ ಮಳೆಯಿಂದಾಗಿ ಕೆಆರ್‌ಎಸ್‌ಗೆ ನೀರು ಹರಿದು ಬರುತ್ತಿದೆ. ಮಳೆ ಮತ್ತಷ್ಟು ಜೋರಾದರೆ ಕೆಲವೇ ದಿನದಲ್ಲಿಅಣೆಕಟ್ಟೆ  ಸಂಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ.

ಇನ್ನು ಒಂದು ವಾರದಲ್ಲಿ 6 ಟಿಎಂಸಿಯಷ್ಟು ನೀರು ಸಂಗ್ರಹವಾಗಿದ್ದು, ದಿನೇ ದಿನೇ ನೀರಿನ ಮಟ್ಟ ಹೆಚ್ಚಳದಿಂದ ರೈತರಲ್ಲಿ ಸಂತಸ ಮನೆ ಮಾಡಿದೆ. ಅಲ್ಲದೇ ಅನ್ನದಾತರು ಶೀಘ್ರವೇ ನಾಲೆಗಳಿಗೆ ನೀರು ಬಿಡಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ.

ಇಂದಿನ  ನೀರಿನ ಮಟ್ಟ: ಗರಿಷ್ಠ ಮಟ್ಟ – 124.80 ಅಡಿ, ಇಂದಿನ ಮಟ್ಟ – 98.10 ಅಡಿ, ಗರಿಷ್ಠ ಸಂಗ್ರಹ ಸಾಮರ್ಥ – 49.452 ಟಿಎಂಸಿ, ಇಂದಿನ ಸಗ್ರಹ – 21.978 ಟಿಎಂಸಿ, ಒಳ ಹರಿವು – 14,135 ಕ್ಯೂಸೆಕ್, ಹೊರ ಹರಿವು – 532 ಕ್ಯೂಸೆಕ್ ಇದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ