NEWSನಮ್ಮರಾಜ್ಯಶಿಕ್ಷಣ-

KSOUನಿಂದ ಆನ್‍ಲೈನ್ ಶಿಕ್ಷಣ ತರಬೇತಿಗೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಆನ್‍ಲೈನ್ ಶಿಕ್ಷಣ ತರಬೇತಿಗೆ ವಿವಿ ಕುಲಪತಿ ಪ್ರೊ. ವಿದ್ಯಾಶಂಕರ್ ಸೋಮವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್‍ಲೈನ್ ತರಗತಿಗಳನ್ನು ಸೋಮವಾರದಿಂದ ಆರಂಭಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸತತ ಪ್ರಯತ್ನ ಇದ್ದರೆ ಮಾತ್ರ ಯಶಸ್ಸು ಪಡೆಯಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕೋವಿಡ್-19 ತಡೆಗಟ್ಟುವ ಹಿನ್ನಲೆ ಜಿಲ್ಲೆಯಲ್ಲಿ ಲಾಕ್‍ಡೌನ್ ಆಸ್ತಿತ್ವದಲ್ಲಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂದು ಆನ್‍ಲೈನ್ ತರಗತಿಯನ್ನು ಪ್ರಾರಂಭಿಸಲಾಗಿದೆ. ಇಂದು ಮೊದಲ ಬ್ಯಾಚ್‍ನಲ್ಲಿ ಕೆ.ಸೆಟ್ ಪರೀಕ್ಷೆಗಳಿಗೆ ತರಬೇತಿಯನ್ನು ಮಾಡಲಾಗಿದೆ ಎಂದರು.

ಕೊರೊನಾದಿಂದ ಜಗತ್ತಿನಾದ್ಯಂತ ಎಲ್ಲಾ ಕ್ಷೇತ್ರಗಳು ಸ್ಥಗಿತಗೊಂಡು ತಿಂಗಳುಗಳೇ ಕಳೆದಿದೆ. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಗವಹಿಸುವÀ ಅಭ್ಯರ್ಥಿಗಳಿಗೆ ತುಂಬಾ ತೊಂದರೆಯಾಗಿದ್ದರಿಂದ ವಿಶ್ವವಿದ್ಯಾನಿಲಯವು ಆನ್‍ಲೈನ್ ತರಗತಿಯನ್ನು ಪ್ರಾರಂಭಿಸಿದೆ ಇದರಿಂದ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಸಂಪೂರ್ಣವಾಗಿ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಲಿಂಗರಾಜ ಗಾಂಧಿ ಮಾತನಾಡಿ, ಇಂದು ದೇಶದಲ್ಲಿ ಅನೇಕ ವಿಶ್ವವಿದ್ಯಾನಿಲಯಗಳು ಆನ್‍ಲೈನ್ ತರಗತಿಯನ್ನು ಆರಂಭಿಸಿವೆ. ಆದರೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶ್ವವಿದ್ಯಾಲಯವು ಆನ್‍ಲೈನ್ ತರಗತಿಯನ್ನು ಆರಂಭಿಸಿರುವುದು ಇದೇ ಪ್ರಥಮ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದತೆಗೊಳ್ಳುವ ಅಭ್ಯರ್ಥಿಗಳಿಗೆ ನಾವು  ಸಹಾಯ ಮಾಡಿದಾಗ ನಮ್ಮ ಜನ್ಮ ಸಾರ್ಥಕವಾಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

ಇದೇ ವೇಳೆಯಲ್ಲಿ ವಿಶ್ವವಿದ್ಯಾಲಯ ಹಣಕಾಸು ಅಧಿಕಾರಿ ಡಾ.ಎ.ಖಾದರ್ ಪಾಶಾ, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯ ನಾರಾಯಣ ಗೌಡ ಇದ್ದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ