ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) 9 ರಾಷ್ಟ್ರದ ಮಟ್ಟದ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಸಂಸ್ಥೆಗೆ 5 ಆಡ್ ವರ್ಲ್ಡ್ ಶೌಡೌನ್ ಚಿನ್ನದ ಪ್ರಶಸ್ತಿ, 2 ಗೌಕೇರ್ ಇಂಡಿ ಹಾಗೂ ಒಂದು ಪಿಆರ್‌ಎಸ್‌ಐ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ಅಶ್ವಮೇಧ ಕ್ಲಾಸಿಕ್ ಬಸ್ಸುಗಳ ಪರಿಚಯ, ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ, ಅಂಬಾರಿ ಉತ್ಸವ ಬಸ್ ಅತ್ಯುತ್ತಮ ಬ್ರಾಂಡ್ ಅನುಭವ. ಅಶ್ವಮೇಧ ಕ್ಲಾಸಿಕ್ ಬಸ್ಸುಗಳು-ಅತ್ಯುತ್ತಮ ಕಾರ್ಪೊರೇಟ್ ಸಂವಹನ ಹಾಗೂ ನಿರ್ವಹಣೆ, ಪಲ್ಲಕ್ಕಿ ಬಸ್ಸುಗಳ- ಅತ್ಯುತ್ತಮ ಗ್ರಾಹಕ ಸ್ವೀಕೃತಿ ಪ್ರತಿಷ್ಠಿತ ಬಸ್ಸು ಸೇವೆಗಳ ಬ್ರಾಂಡಿಂಗ್-ಅತ್ಯುತ್ತಮ ಸಾರ್ವಜನಿಕ ಸಂಪರ್ಕ ವಿಭಾಗಗಳಲ್ಲಿ ಆಡ್ ವರ್ಲ್ಡ್ ಶೌಡೌನ್ ಚಿನ್ನದ ಪ್ರಶಸ್ತಿ ಲಭಿಸಿದೆ.
ಅಶ್ವಮೇಧ ಕ್ಲಾಸಿಕ್ ಬಸ್ಸುಗಳು- ವರ್ಷದ ಅತ್ಯುತ್ತಮ ಬ್ರಾಂಡ್. ನಿಗಮವು ಅತ್ಯುತ್ತಮ ಪರಿಸರ ನಿರ್ವಹಣೆ ಹಾಗೂ ವಿನೂತನ ಮಾನವ ಸಂಪನ್ಮೂಲ ಯೋಜನೆಗಳ ಅನುಷ್ಟಾನಕ್ಕಾಗಿ ಗೋ ಕೇರ್ ಇಂಡಿಯಾ ಪ್ರಶಸ್ತಿ ಎರಡು ವಿಭಾಗದಲ್ಲಿ ಪಡೆದಿದೆ.
ಪಿಆರ್‌ಎಸ್‌ಐ ರಾಷ್ಟ್ರೀಯ ಪ್ರಶಸ್ತಿ ನಿಗಮಕ್ಕೆ ಕಾರ್ಪೋರೇಟ್ ಚಿತ್ರ ವಿಭಾಗದಲ್ಲಿ ಲಭಿಸಿದೆ. ಆಡ್ ವರ್ಲ್ಡ್ ಪ್ರಶಸ್ತಿಗಳನ್ನು ದೆಹಲಿಯಲ್ಲಿ, ಗೋ ಕೇರ್ ಇಂಡಿಯಾ ಪ್ರಶಸ್ತಿಗಳನ್ನು ಗೋವಾದಲ್ಲಿ ಹಾಗೂ ಪಿ.ಆರ್.ಎಸ್.ಐ ಪ್ರಶಸ್ತಿಯನ್ನು ಛತ್ತೀಸ್‌ಘಡ್ ರಾಜ್ಯದ ರಾಯಪುರದಲ್ಲಿ ಪ್ರದಾನ ಮಾಡಲಾಯಿತು.
![](https://vijayapatha.in/wp-content/uploads/2024/02/QR-Code-VP-1-1-300x62.png)