ಬೆಂಗಳೂರು: ಶಕ್ತಿ ಯೋಜನೆ ಜಾರಿಯಾದ ನಂತರ ಹಲವು ಮಾರ್ಗಗಳಲ್ಲಿ ಬಸ್‌ಗಳ ಕೊರತೆ ಎದುರಾಗಿತ್ತು. ಇದರಿಂದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟವು ಹೆಚ್ಚಾಗಿತ್ತು. ಹೀಗಾಗಿ ಹೆಚ್ಚಿನ ಬಸ್‌ಗಳ ನಿಯೋಜನೆಗೆ ಒತ್ತಾಯ ಮಾಡಿದ್ದರು. ಜನರ ಒತ್ತಾಯಕ್ಕೆ ಮಣಿದಿರುವ ಕೆಎಸ್‌ಆರ್‌ಟಿಸಿ ಪ್ರಸ್ತುತ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಸೇವೆ ಆರಂಭಿಸಲು ತೀರ್ಮಾನಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಈ ನಿರ್ಧಾರದಿಂದ ಸದ್ಯ ಶಾಲೆ-ಕಾಲೇಜುಗಳು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಹೆಚ್ಚು ಜನಸಂದಣಿ ಇರುವ ಮಾರ್ಗಗಳನ್ನು ಕೆಎಸ್‌ಆರ್‌ಟಿಸಿ ಈಗಾಗಲೇ ಗುರುತಿಸಿದ್ದು, ಆ ಮಾರ್ಗಗಳಲ್ಲಿಹೆಚ್ಚುವರಿ ಅಥವಾ ಹೊಸದಾಗಿ ಬಸ್ ಸೇವೆ ಆರಂಭಿಸಲು ಸಜ್ಜಾಗಿದೆ.
ಈ ನಿಟ್ಟಿನಲ್ಲಿ ಈಗಾಗಲೇ ಸಂಸ್ಥೆಗೆ ಹೊಸದಾಗಿ ಸೇರ್ಪಡೆಯಾಗಿರುವ 814 ಬಸ್‌ಗಳಲ್ಲಿ 500 ಬಸ್‌ಗಳನ್ನು ಈ ಹೆಚ್ಚುವರಿ ಮಾರ್ಗಗಳಿಗೆ ನಿಯೋಜಿಸಲು ನಿರ್ಧರಿಸಿದೆ.
ನಮ್ಮ ಸರ್ಕಾರ ಹೊಸ ಬಸ್ ಖರೀದಿಗೆ ಮುಂದಾಗಿದೆ. ಬಿಜೆಪಿ ಸರ್ಕಾರದಲ್ಲಿ ಒಂದೇವೊಂದು ಹೊಸ ಬಸ್ ಸಹ ಖರೀದಿ ಮಾಡಿರಲಿಲ್ಲ ಇದರಿಂದ ಪ್ರಯಾಣಿಕರಿಗೆ ತುಂಬಾ ಕಷ್ಟ ಆಗಿತ್ತು. ವಿಭಾಗೀಯ ಮಟ್ಟದಲ್ಲಿ ಗುರುತಿಸಲಾಗಿರುವ ಹೊಸ ಮಾರ್ಗಗಳಲ್ಲಿ ಮುಂದಿನ 3 ತಿಂಗಳಲ್ಲಿ ಸೇವೆ ಆರಂಭಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ.
ಇನ್ನು ಬಸ್ ಅವಶ್ಯಕತೆಯಿರುವ ಮಾರ್ಗಗಳ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಕೆಎಸ್‌ಆರ್‌ಟಿಸಿ ವ್ಯಾಪ್ತಿಯಲ್ಲಿ ಬಸ್‌ಗಳ ಕೊರತೆ ನೀಗಿಸುವ ಸಲುವಾಗಿ ಹೊಸ ಬಸ್ ಖರೀದಿ ಮಾಡಲಾಗುತ್ತಿದೆ. ಸದ್ಯ 814 ಹೊಸ ಬಸ್‌ಗಳ ಸೇರ್ಪಡೆ ಜತೆಗೆ 977 ಹಳೇ ಬಸ್‌ಗಳನ್ನು ಪುನಶ್ಚೇತನ ಮಾಡಲಾಗುವುದು ಎಂದು ತಿಳಿಸಿದರು.
100 ಹೊಸ ಪಲ್ಲಕ್ಕಿ ಸ್ಲೀಪರ್ ಬಸ್‌ಗಳ ಸೇರ್ಪಡೆಗೆ ಸರ್ಕಾರ ಈಗಾಗಲೇ ಅನುಮತಿ ನೀಡಿದ್ದು, ಇನ್ನೂ 20 ಅಂಬಾರಿ, 20 ಐರಾವತ ಉತ್ಸವ ಬಸ್‌ಗಳ ಖರೀದಿಗೆ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರ್ಕಾರ ಕೂಡ ಈಗಾಗಲೇ ಅದಕ್ಕೂ ಗ್ರೀನ್ ಸಿಗ್ನಲ್ ನೀಡಿದೆ. ಸಾಮಾನ್ಯ ಸಾರಿಗೆ ಬಸ್‌ಗಳ ಜತೆಗೆ ಪ್ರೀಮಿಯಂ ಬಸ್‌ಗಳ ಸಂಖ್ಯೆಯನ್ನೂ ಹೆಚ್ಚಿಸಲು ನಿಗಮ ಯೋಜನೆ ಮಾಡಿದೆ ಎಂದರು.
