NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಅಪಘಾತದಲ್ಲಿ ಮೃತಪಟ್ಟ ಇಬ್ಬರು ನೌಕರರ ಕುಟುಂಬಕ್ಕೆ ತಲಾ 1 ಕೋಟಿ ರೂ. ಚೆಕ್‌ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರಿಬ್ಬರ ಕುಟುಂಬದವರಿಗೆ ತಲಾ ವಿಮೆ ಮೊತ್ತ 1 ಕೋಟಿ ರೂ.ಗಳ ಚೆಕ್ ಅನ್ನು ವಿತರಿಸಲಾಯಿತು.

ಇಂದು ಸಾರಿಗೆ, ಮುಜರಾಯಿ ಸಚಿವ ಹಾಗೂ ನಿಗಮದ ಅಧ್ಯಕ್ಷ ರಾಮಲಿಂಗಾ ರೆಡ್ಡಿ ಅವರು, ಅಪಘಾತದಲ್ಲಿ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಅವಲಂಬಿತರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 1 ಕೋಟಿ ಅಪಘಾತ ವಿಮೆ ಪರಿಹಾರ  ಚೆಕ್‌ ನೀಡಿದರು.

ಕೆಎಸ್ಆರ್ಟಿಸಿಯು ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣದ ವಿನೂತನ ಯೋಜನೆ ಅಡಿಯಲ್ಲಿ ತನ್ನ ಸಿಬ್ಬಂದಿಗಳಿಗೆ 1 ಕೋಟಿ ರೂ. ಮೊತ್ತದ ಅಪಘಾತ ವಿಮೆಯನ್ನು ಜಾರಿಗೊಳಿಸಿದೆ.

ಈ ಯೋಜನೆಯಲ್ಲಿ, ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ವತಿಯಿಂದ ಪ್ರೀಮಿಯಂ ರಹಿತ 50 ಲಕ್ಷ ರೂ.ಗಳ ವಿಮೆ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ನಿಂದ ವಾರ್ಷಿಕ 885 ರೂ. ಪ್ರೀಮಿಯಂ (ನೌಕರರಿಂದ) ಪಾವತಿ ಮೇರೆಗೆ 50 ಲಕ್ಷ ರೂ.ಗಳ ವಿಮೆಯು ಒಳಗೊಂಡಿದೆ. ಈ ಯೋಜನೆಯಡಿಯಲ್ಲಿ ಸಿಬ್ಬಂದಿಗಳು ಕರ್ತವ್ಯದಲ್ಲಿದ್ದಾಗ ಅಥವಾ ಇಲ್ಲದ ಸಂದರ್ಭಗಳಲ್ಲಿಯೂ ಉಂಟಾಗುವ ಅಪಘಾತಗಳಿಗೂ ಸಹ ಈ ವಿಮಾ ಸೌಲಭ್ಯ ಅನ್ವಯಿಸಲಿದೆ.

  1. ಈ ಯೋಜನೆಯ ಜಾರಿಯ ನಂತರದಲ್ಲಿ ಕೆಎಸ್ಆರ್ಟಿಸಿಯ ಚಾಲನಾ ಸಿಬ್ಬಂದಿ ಜಿ.ವಿ.ಚಲಪತಿ, 41 ವರ್ಷ, ಚಾಲಕ-ಕಂ-ನಿರ್ವಾಹಕ (ಬಿಲ್ಲೆ ಸಂಖ್ಯೆ 7275, ಘಟಕ-6, ಬೆಂಗಳೂರು ಕೇಂದ್ರೀಯ ವಿಭಾಗ) ಅವರು ನಿಗಮದಲ್ಲಿ 11 ವರ್ಷಗಳ ಸೇವೆ ಸಲ್ಲಿಸಿದ್ದರು.

ಚಲಪತಿ ಅವರು 29/01/2023 ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಮೃತಪಟ್ಟಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಕುಟುಂಬದವರಿಗೆ ವಿಮಾ ಪರಿಹಾರ 1 ಕೋಟಿ ರೂ.ಗಳನ್ನು ಇಂದು ವಿತರಿಸಲಾಯಿತು.

ಅದರ ಜತೆಗೆ ಚಲಪತಿ ಅವರಿಗೆ ನಿಗಮದಿಂದ ಬರಬೇಕಿರುವ ಪಿಎಫ್‌, ಗ್ರಾಚ್ಯುಟಿ ಸೇರಿದಂತೆ  17.21 ಲಕ್ಷ ರೂ.ಗಳಲ್ಲಿ  ಈಗಾಗಲೇ ಈ ಪೈಕಿ 12.71 ಲಕ್ಷ ರೂ.ಗಳನ್ನು ವಿತರಿಸಲಾಗಿದೆ. ಬಾಕಿ ಮೊತ್ತ 4.50 ಲಕ್ಷ ರೂ.ಗಳನ್ನು ಮೃತ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದೊಡನೆ ಭವಿಷ್ಯ ನಿಧಿ ಇಲಾಖೆಯಿಂದ ಶೀಘ್ರದಲ್ಲಿ ಪಾವತಿಯಾಗಲಿದೆ ಎಂದು ನಿಗಮದ ಎಂಡಿ ಅನ್ಬುಕುಮಾರ್‌ ತಿಳಿಸಿದ್ದಾರೆ.

  1. ಪಿ.ಎನ್. ನಾಗರಾಜು, 52 ವರ್ಷ, ಚಾಲಕ-ಕಂ-ನಿರ್ವಾಹಕ (ಬಿಲ್ಲೆ ಸಂಖ್ಯೆ. 1173, ಘಟಕ-2, ಹಾಸನ ವಿಭಾಗ) ಅವರು ನಿಗಮದಲ್ಲಿ 17 ವರ್ಷಗಳ ಸೇವೆ ಸಲ್ಲಿಸಿದ್ದರು. ನಾಗರಾಜು 01/02/2023 ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಮೃತಪಟ್ಟಿದ್ದರು.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ವಿಮಾ ಪರಿಹಾರ 1 ಕೋಟಿ ರೂ. ಹೊರತುಪಡಿಸಿ, ಪಿಎಫ್‌, ಗ್ರಾಚ್ಯುಟಿ ಸೇರಿ ನಿಗಮದ ವತಿಯಿಂದ 21.94 ಲಕ್ಷ ರೂ. ಬರಬೇಕಿದ್ದು, ಈ ಪೈಕಿ 16.19 ಲಕ್ಷ ರೂ.ಗಳನ್ನು ಈಗಾಗಲೇ ವಿತರಿಸಲಾಗಿದೆ. ಬಾಕಿ 5.75 ಲಕ್ಷ ರೂ.ಗಳನ್ನು ಮೃತರ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದೊಡನೆ ಭವಿಷ್ಯ ನಿಧಿ ಇಲಾಖೆಯಿಂದ‌ ಶೀಘ್ರದಲ್ಲಿಯೇ ಪಾವತಿಸಲಾಗುವುದು ಎಂದು ತಿಳಿಸಿದರು.

ಸಾರಿಗೆ ಸಚಿವರು ಚಾಲನಾ ಸಿಬ್ಬಂದಿಗಳ ಈ ಎರಡು ಕುಟುಂಬ ವರ್ಗದವರಿಗೆ ಅಪಘಾತ ಪರಿಹಾರ ವಿಮೆಯ ಮೊತ್ತ ತಲಾ 1 ಕೋಟಿ ರೂ.ಗಳ ಚೆಕ್‌ ವಿತರಿಸಿ ಸಾಂತ್ವನ ಹೇಳಿದರು.

ಈ ವೇಳೆ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಮೃತಪಟ್ಟ ಚಾಲನಾ ಸಿಬ್ಬಂದಿಗಳನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ, ಅವರ ಕುಟುಂಬಗಳ ಸುಭದ್ರತೆಗಾಗಿ ನಿಗಮವು ಜಾರಿಗೊಳಿಸಿರುವ ಈ ಅಪಘಾತ ಪರಿಹಾರ ವಿಮಾ ಯೋಜನೆಯು ಬಹಳ ಉತ್ತಮವಾಗಿದ್ದು, ಈ ಯೋಜನೆಯನ್ನು ಸದ್ಯದಲ್ಲಿಯೇ ಇತರೆ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕುಟುಂಬದವರು ಈ  ಹಣವನ್ನು‌ ಬ್ಯಾಂಕ್‌ನಲ್ಲಿ ಸ್ಥಿರ ಠೇವಣಿಯನ್ನು ಇಟ್ಟು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಾಗೂ ತಮ್ಮ ಮುಂದಿನ ಜೀವನಕ್ಕಾಗಿ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ಅನುಕಂಪ‌ದ ಆಧಾರದ‌ ಮೇಲಿನ‌ ಕೆಲಸಕ್ಕೆ ಅರ್ಜಿ ಸಲ್ಲಿಸಲು ತಿಳಿಸಿದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ