CrimeNEWSನಮ್ಮಜಿಲ್ಲೆ

KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ- ಅಧಿಕಾರಿಗಳ ನಡೆಗೆ ನೌಕರರ ಬೇಸರ

ಡ್ಯೂಟಿ ಮೇಲೆ ಇದ್ದಾಗಲೇ ನಿಧನರಾದ ಚಾಲಕ ರವಿ.
ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿಕ್ಕಮಗಳೂರು ಘಟಕದ ಚಾಲಕ ರವಿ ಎಸ್. ಅವರು ಡ್ಯೂಟಿ ಮೇಲೆ ಇದ್ದಾಗಲೇ ಕೊಯಮುತ್ತೂರಿನಲ್ಲಿ ಹೃದಯಾಘಾತದಿಂದ ಮಂಗಳವಾರ ಬೆಳಗ್ಗಿನ ಜಾವ ನಿಧನಾರಾಗಿದ್ದಾರೆ.

ಅವರು ಚಿಕ್ಕಮಗಳೂರು ವಿಭಾಗದ ಚಿಕ್ಕಮಗಳೂರು ಘಟಕದಲ್ಲಿ ಚಾಲಕರಾಗಿದ್ದರು. ಅಂತ್ಯೆಯೆ ಮಂಗಳವಾರ ಅನುಸೂಚಿ ಸಂಖ್ಯೆ 25/26 ರಲ್ಲಿ ಕರ್ತವ್ಯ ನಿರ್ವಹಿಸಿಕೊಂಡು ಚಿಕ್ಕಮಗಳೂರಿನಿಂದ ಕೊಯಮುತ್ತೂರಿಗೆ ಹೋಗಿ ತಂಗಿದ್ದರು.

ಈ ವೇಳೆ ಅಂದರೆ 10.09.2024 ರಂದು ಬೆಳಗಿನ ಜಾವ ತಮ್ಮ ನಿತ್ಯ ಕರ್ಮಗಳನ್ನು ಮುಗಿಸಿಕೊಳ್ಳಲು ಹೋದ ಸಂದರ್ಭದಲ್ಲಿ ಶೌಚಾಲಯದಲ್ಲೇ ಹೃದಯಾಘಾತದಿಂದ ನಿಧನರಾಗಿದ್ದರು.

ಬಳಿಕ ರವಿ ಅವರ ಪಾರ್ಥಿವ ಶರೀರವನ್ನು ಬುಧವಾರ ಅಂದರೆ ಸೆ.11ರಂದು ಬೆಳಗ್ಗೆ ಸುಮಾರು ಆರು ಗಂಟೆಗೆ ಚಿಕ್ಕಮಗಳೂರು ಘಟಕಕ್ಕೆ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅದರಂತೆ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಸಿಬ್ಬಂದಿಗಳು ಪಡೆದರು.

ನಿಗಮದ ಒಬ್ಬ ಚಾಲನಾ ಸಿಬ್ಬಂದಿ ನಿಧನರಾಗಿದ್ದು ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು ಸರಿಯಾಗಿಯೇ ಇದೆ. ಆದರೆ ಆ ಪಾರ್ಥಿವ ಶರೀರವನ್ನು ಘಟಕದ ಒಳ ಭಾಗದಲ್ಲಿ ಇಡದೆ ಗೇಟ್‌ ಪಕ್ಕದಲ್ಲಿ ತ್ಯಾಜ್ಯಗಳಿದ್ದ ಸ್ಥಳದಲ್ಲಿ ಇಟ್ಟಿದ್ದು ಭಾರಿ ನೋವಿನ ಸಂಗತಿಯಾಗಿದೆ.

ಸಂಸ್ಥೆಯಲ್ಲಿ ಹಲವಾರು ವರ್ಷಗಳ ಕಾಲ ದುಡಿದು ಡ್ಯೂಟಿಯಲ್ಲೇ ನಿಧನರಾದ ಒಬ್ಬ ಚಾಲಕರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಈ ರೀತಿ ಬೇಕಾಬಿಟ್ಟಿಯಾಗಿ ವ್ಯವಸ್ಥೆ ಮಾಡಿದ್ದು ಮಾತ್ರ ನಾಗರಿಕ ಸಮಾಜ ತಲೆ ತಗ್ಗಿಸುವ ವಿಷಯ. ಇದರಿಂದ ಹಲವು ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೃತ ಚಾಲಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವಾಗ ಘಟಕದ ಅಧಿಕಾರಿಗಳು ಕಾಳಜಿ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಈ ರೀತಿ ಯಾರೋ ದಾರಿಹೋಕರು ಮೃತಪಟ್ಟಿದ್ದಾರೆ ಎಂಬಂತೆ ಗೇಟ್‌ ಪಕ್ಕದಲ್ಲಿ ಅದೂ ಕೂಡ ತ್ಯಾಜ್ಯವಿರುವ ಸ್ಥಳದಲ್ಲಿ ಪಾರ್ಥಿವ ಶರೀರ ಇರಿಸಿದ್ದು ಮಾತ್ರ ಅವಮಾನ ಮಾಡಿದಂತೆಯೇ ಸರಿ ಎಂದು ನೌಕರರು ಭಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಈ ಬಗ್ಗೆ ಮೇಲಧಿಕಾರಿಗಳಿಗೆ ಘಟಕದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವಾಗ ಸಾಮಾನ್ಯ ಅರಿವು ಇರಬೇಕು ಎಂಬುದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸಲಹೆ ನೀಡಬೇಕು. ಈಗ ಆಗಿರುವ ಪ್ರಮಾದ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ