NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ಅಂತರ ನಿಗಮ ವರ್ಗಾವಣೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ: ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ದರ್ಜೆ 3 ಮತ್ತು 4ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ನಾಳೆಯಿಂದ (ಜುಲೈ 5) ಅರ್ಜಿ ಸಲ್ಲಿಸಲ್ಲಿಸ ಬಹುದು ಎಂದು  ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಈ ಬಗ್ಗೆ ಇಂದು (ಜು.4) ಆದೇಶ ಹೊರಡಿಸಿರುವ ಅವರು, 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ 05-07-2023ರ ಬೆಳಗ್ಗೆ 11 ಗಂಟೆಯಿಂದ ಪ್ರಾರಂಭವಾಗಲಿದ್ದು, 18-08-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrttorm/transfer ರಲ್ಲಿ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಾಮಾನ್ಯ ವರ್ಗಾವಣೆಯಲ್ಲಿ ಪತಿ/ಪತ್ನಿ ಪ್ರಕರಣಗಳೊಂದಿಗೆ ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು/ತೀವ್ರ ತರಹದ ಅನಾರೋಗ್ಯ (ಎಚ್.ಐ.ವಿ ಹೃದಯ ರೋಗ, ಕ್ಯಾನ್ಸರ್, ಸ್ಪೈನಲ್ ಕಾರ್ಡ್‌, ಕಿಡ್ನಿ ವೈಫಲ್ಯ ಹಾಗೂ ಮೆದುಳು ಸಂಬಂಧಿ ಖಾಯಿಲೆಗಳು) ಪ್ರಕರಣಗಳಿಗೆ ವಗಾರ್ವಣೆಯಲ್ಲಿ ಶೇ. 5 ರಷ್ಟು ಮೀಸಲಾತಿ ಕಲ್ಪಿಸಲಾಗಿದ್ದು, ನೌಕರರು ವೈದ್ಯಕೀಯ ಮಂಡಳಿಯು ನೀಡುವ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಇನ್ನು ಪರಸ್ಪರ ವರ್ಗಾವಣೆಗೆ ಪರಸ್ಪರ ನೌಕರರ ಮೂಲ ವೇತನ ಹಾಗೂ ತುಟ್ಟಿ ಭತ್ಯೆ ಶೇ.10 ರ ಬದಲಾಗಿ ಶೇ.15 ರಷ್ಟನ್ನು ಪರಿಗಣಿಸಲಾಗುವುದು ಎಂದು ವಿವರಿಸಿದ್ದಾರೆ.

ನೌಕರರು ಈ ಸೌಲಭ್ಯದ ಸದುಪಯೋಗವನ್ನು ಪಡೆಯಲು ತಿಳಿಸಲಾಗಿದ್ದು, ಈ ವಿಷಯವನ್ನು ನೌಕರರ ಗಮನಕ್ಕೆ ತರಲು ಹಾಗೂ ಕೇಂದ್ರ ಕಚೇರಿ/ ವಿಭಾಗ/ ಘಟಕದ/ ತರಬೇತಿ ಕೇಂದ್ರ ಕಾರ್ಯಾಗಾರಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ.

ಅಂತರ ನಿಗಮ ವರ್ಗಾವಣೆಗಾಗಿ ನೂರಾರು ನೌಕರರು ಕಾಯುತ್ತಿದ್ದು, ಯಾವಾಗ ವರ್ಗಾವಣೆಗೆ ಆದೆಶ ಹೊರಬೀಳಲಿದೆ ಎಂದು ಎದುರು ನೋಡುತ್ತಿದ್ದರು. ಆ ನೌಕರರಿಗೆ ಈ ಮೂಲಕ ಸಿಹಿಸುದ್ದಿ ಸಿಕ್ಕಂತಾಗಿದೆ. ಇದರ ಸದುಯೋಗವನ್ನು ಪಡೆದುಕೊಳ್ಳಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ