NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನೌಕರರ 38 ತಿಂಗಳ ವೇತನ ಹಿಂಬಾಕಿ ಬಿಡುಗಡೆಗೆ ಒಂದೆಡೆ ಆಗ್ರಹ ಮತ್ತೊಂದೆಡೆ ತಡೆ!?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈ ಹಿಂದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರಿಗೆ 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮತ್ತು ವೇತನ ಪರಿಷ್ಕರಣೆ ಮುಂತಾದ ದೀರ್ಘಾವಧಿಯ ಬೇಡಿಕೆಗಳನ್ನು ಜೂನ್ 15 ರೊಳಗೆ ಈಡೇರಿಸದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಸ್ಟಾಫ್‌ ಮತ್ತು ವರ್ಕರ್ಸ್‌ ಫೆಡರೇಶನ್ ಎಚ್ಚರಿಕೆ ನೀಡಿತ್ತು.

ಅಂದು ಅಂದರೆ ಮೇ ಕೊನೆಯ ವಾರ ಹುಬ್ಬಳ್ಳಿಯ ಪತ್ರಕರ್ತರ ಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಡಿ.ಎ.ವಿಜಯಾ, 2020ರ ಜನವರಿ 1ರಿಂದ ಶೇ.15 ರಷ್ಟು ವೇತನವನ್ನು ಸರ್ಕಾರ ಹೆಚ್ಚಳ ಮಾಡಿದೆ. ಆದರೆ ಇಲ್ಲಿಯವರೆವಿಗೂ ಪರಿಷ್ಕೃತ ವೇತನದ ಹಿಂಬಾಕಿಯನ್ನು 4 ನಿಗಮಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ನೀಡಿಲ್ಲ.

ಇನ್ನು KSRTC, NWKRTC, KKRTC ಮತ್ತು BMTC ಈ ನಾಲ್ಕೂ ನಿಗಮಗಳ ನೌಕರರಿಗೆ 38 ತಿಂಗಳ ಬಾಕಿಗೆ ಬೇಕಾಗುವ ಮೊತ್ತ ಸುಮಾರು 1,600 ಕೋಟಿ ರೂ. ರಾಜ್ಯ ಸಾರಿಗೆ ನಿಗಮಗಳು ಈ ಹೊರೆಯನ್ನು ಹೊರಲು ಸಾಧ್ಯವಿಲ್ಲದ ಕಾರಣ ಸರ್ಕಾರವು ಕೂಡಲೇ ಅನುದಾನ ನೀಡಬೇಕು. ಆ ಮೂಲಕ ನೌಕರರಿಗೆ ಸೇರಬೇಕಿರುವ ನ್ಯಾಯಯುತ ಹಣವನ್ನು ಪಾವತಿಸಬೇಕು ಎಂದು ಎಂದು ಭಾಸ್ಕ‌ರ್ ಆಗ್ರಹಿಸಿದ್ದರು.

‘ಶಕ್ತಿ’ ಯೋಜನೆ ಜಾರಿಯಾದ ನಂತರ ಚಾಲಕರು ಮತ್ತು ಕಂಡಕ್ಟರ್‌ಗಳಿಗೆ ಕೆಲಸದ ಹೊರೆ ಹೆಚ್ಚಿದೆ. 50-60 ಸಾಮರ್ಥ್ಯದ ಬಸ್‌ನಲ್ಲಿ 100ಕ್ಕೂ ಹೆಚ್ಚು ಪ್ರಯಾಣಿಕರನ್ನು ಸಾಗಿಸುವ ವಾಹನಗಳು ತಾಂತ್ರಿಕ ತೊಂದರೆಗಳನ್ನು ಎದುರಿಸುತ್ತಿವೆ ಮತ್ತು ವರ್ಕ್‌ಶಾಪ್‌ಗಳಲ್ಲಿ ಕೆಲಸ ಮಾಡುವ ತಂತ್ರಜ್ಞರು ಹೆಚ್ಚಿನ ಹೊರೆಯನ್ನು ಎದುರಿಸುತ್ತಿದ್ದಾರೆ. ಹೀಗಾಗಿ ತಾಂತ್ರಿಕ ಸಿಬ್ಬಂದಿಗಳಿಗೂ ಪ್ರೋತ್ಸಾಹ ಧನ ನೀಡಬೇಕು ಎಂದು ಒತ್ತಾಯಿಸಿದ್ದರು.

ಬಸ್‌ ಹೊರಡುವ ಮತ್ತು ತಲುಪುವ ಈ ಎರಡು ಸ್ಥಳಗಳ ನಡುವಿನ ಅಂತರ ಮತ್ತು ಪ್ರಯಾಣದ ಸಮಯವನ್ನು ಅವೈಜ್ಞಾನಿಕವಾಗಿ ಲೆಕ್ಕಹಾಕಲಾಗಿದೆ. ನಿಗಮಗಳು ಗಮ್ಯಸ್ಥಾನವನ್ನು ವೈಜ್ಞಾನಿಕವಾಗಿ ತಲುಪಲು ದೂರ ಮತ್ತು ಅಗತ್ಯವಿರುವ ಸಮಯವನ್ನು ಲೆಕ್ಕ ಹಾಕಬೇಕು ಈ ಮೂಲಕ ಚಾಲಕರು ಮತ್ತು ನಿರ್ವಾಹಕರ ಮೇಲೆ ಆಗುತ್ತಿರುವ ಒತ್ತಡವನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿದ್ದರು.

ಆದರೆ, ಅದರಂತೆ ಸಾರಿಗೆ ಇಲಾಖೆ ಜೂನ್‌ 15ರಂದು ವೇತನ ಹೆಚ್ಚಳ 38 ತಿಂಗಳ ಹಿಂಬಾಕಿ ಕೊಡುವುದಕ್ಕೆ ಎಂಡಿಗಳ ಸಭೆ ಕರೆದಿತ್ತು. ಬಳಿಕ ಜೂನ್‌ 13ರಂದು ಏಕಾಏಕಿ ದಿಢೀರ್‌ ಎಂದು ಮುಂದೂಡಿತು. ಇದನ್ನು ಗಮನಿಸಿದರೆ ಇಲ್ಲಿ ಕೆಲಸ ಸಂಘಟನೆಗಳ ಮುಖಂಡರೆ ಈ ಸಭೆಯನ್ನು ಮುಂದೂಡುವುದಕ್ಕೆ ಪರೋಕ್ಷವಾಗಿ ಕಾರಣರಾಗಿದ್ದು, ನೌಕರರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಇಂಥ ಕಿಡಿಗೇಡಿ ಸಂಘಟನೆಗಳ ಪದಾಧಿಕಾರಿಗಳಿಂದ ನೌಕರರಿಗೆ ಅನುಕೂಲವಾಗುತ್ತದೆ ಎಂದು ಹೇಗೆ ನಂಬುವುದು. ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಎಚ್ಚರಿಕೆ ನೀಡಿದರೆ ಬೆಂಗಳೂರಿನಲ್ಲಿ ಕುಳಿತವರು ಅದಕ್ಕೆ ವಿರುದ್ಧವಾಗಿ ನಡೆದುಕೊಂಡು ಸರ್ಕಾರವನ್ನೇ ದಿಕ್ಕುತಪ್ಪಿಸಿ ನೌಕರರಿಗೆ ನ್ಯಾಯಯುತವಾಗಿ ಕೊಡಬೇಕಿರುವುದಕ್ಕೆ ತಡೆಯಾಗುತ್ತಿರುವುದು ಏಕೆ ಎಂಬ ಪ್ರಶ್ನೆ ಈಗ ನೌಕರರನ್ನು ಕಾಡುತ್ತಿದೆ.

ಒಟ್ಟಾರೆ ಇಲ್ಲಿ ಹಾವು ಸಾಯಬಾರದು ಕೋಲು ಮುರಿಯ ಬಾರದು ಎಂಬಂತೆ ನೌಕರರನ್ನು ಯಾಮಾರಿಸಿಕೊಂಡೆ ಕೆಲ ಸಂಘಟನೆಗಳು ಒಳಗೇಮ್‌ ಆಡುತ್ತಿರುವುದರಿಂದ ನೌಕರರಿಗೆ ಸಿಗಬೇಕಿರುವುದು ಇನ್ನೂ ಮರೀಚಿಕೆಯಾಗಿಯೇ ಉಳಿದಿರುವುದು ದುರಂತ..!?

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ