NEWSನಮ್ಮಜಿಲ್ಲೆನಮ್ಮರಾಜ್ಯ

KSRTC- ನಮ್ಮ ದಶಕಗಳ ಬೇಡಿಕೆ ಈಡೇರಿಕೆಗೆ ನೀವು ಬೆಂಬಲಿಸಿ : ಸಮಸ್ತ ಸಂಘಟನೆಗಳಲ್ಲಿ ನೌಕರರ ವೇದಿಕೆ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ನಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಬೆಳಗಾವಿಯಲ್ಲಿ ಹಮ್ಮಿಕೊಂಡಿರುವ ಸಾರಿಗೆ ನೌಕರರ ಅಹೋರಾತ್ರಿ ಧರಣಿಗೆ ಸಮಸ್ತ ನಾಡಿನ ಸಂಘಟನೆಗಳು ಬೆಂಬಲ ನೀಡಬೇಕು ಎಂದು ನೌಕರರು ಮನವಿ ಮಾಡಿದ್ದಾರೆ.

ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವಂತೆ ಹುದ್ದೆಗೆ ತಕ್ಕ ಸರಿಸಮಾನ ವೇತನ ನೀಡಬೇಕು. ಮುಷ್ಕರದ ಸಮಯದಲ್ಲಿ ಮಾಡಿರುವ ವಜಾ ಪ್ರಕರಣಗಳನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೆ ಈ ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾRದ ಮುಂದಿಟ್ಟು ಹೋರಾಟ ಹಮ್ಮಿಕೊಂಡಿದ್ದೇವೆ.

ಹೀಗಾಗಿ ಜಿಲ್ಲಾ, ತಾಲೂಕಿನ ಎಲ್ಲ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಸಾರಿಗೆ ನೌಕರರ ಪರ ಹೋರಾಟಗಾರರು, ಕನ್ನಡ ಪರ ವಿವಿಧ ಸಂಘಟನೆಗಳು, ಶಿಕ್ಷಣ ಸಂಸ್ಥೆಗಳು, ಸರ್ಕಾರಿ ನೌಕರರ ಸಂಘದ, ಪತ್ರಿಕಾ ಮತ್ತು ದೃಶ್ಯ ಮಾಧ್ಯಮಗಳು, ಡಿಜಿಟಲ್‌ ಮೀಡಿಯಾಗಳು, ರೈತಪರ ಸಂಘಟನೆಗಳು, ವಕೀಲರ ಸಂಘಟನೆಗಳು, ದಲಿತಪರ ಸಂಘಟನೆಗಳು.

ಸ್ಯಾಂಡಲ್‌ವುಡ್‌ ಕಲಾಬಳಗಗಳು, ಜಾನಪದ ಕಲಾವಿದರು ರೋಟರಿ, ಲಯನ್ಸ್, ಭಾರತ್ ವಿಕಾಸ್ ಪರಿಷತ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎಲ್ಲ ಸಮಸ್ತ ಸಂಘ ಸಂಸ್ಥೆಗಳು, ಎಲ್ಲ ರಾಜಕೀಯ ಪಕ್ಷಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ನಮ್ಮ ಹೋರಾಟಕ್ಕೆ ಕೈ ಜೋಡಿಸಿ ಬೇಡಿಕೆ ಈಡೇರಿಸಲು ಸಹಕರಿಸಿ ಎಂದು ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಇನ್ನು ನಾಳೆಯಿಂದ ಡಿ.30ರ ವರೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಚಳಿಗಾಲದ ಈ ಅಧಿವೇಶದ ವೇಳೆ ವೇದಿಕೆ ಪದಾಧಿಕಾರಿಗಳು ನೌಕರರ ಪರ ಹೋರಾಟ ಮಾಡುತ್ತಿದ್ದು ಇದಕ್ಕೆ ಸಮಸ್ತ ಸಾರಿಗೆ ನೌಕರರ ಸಂಘಟನೆಗಳು ಸೇರಿದಂತೆ ಈ ಮೇಲೆ ಹೆಸರಿಸಿರುವ ಎಲ್ಲ ಸಂಘಟನೆಗಳ ಪದಾಧಿಕಾರಿಗಳು, ರಾಜಕೀಯ ಪಕ್ಷಗಳ ಕಾರ್ಯಕರ್ತರು ನಮಗೆ ಸಹಕಾರ ನೀಡಿ ಸರ್ಕಾರಕ್ಕೆ ನಮ್ಮ ಸಮಸ್ಯೆಯನ್ನು ಪ್ರದರ್ಶಿಸಲು ಸಹಕರಿಸಿ ಎಂದು ಕೇಳಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ನಡೆಯುವ ನಮ್ಮ ಅಹೋರಾತ್ರಿ ಧರಣಿ ಬಗ್ಗೆ ಜನರಲ್ಲಿ ಬೇರೆ ರೀತಿ ಸಂದೇಶ ಹೋಗಬಾರದು. ಹೀಗಾಗಿ ತಾವು ಕೈ ಜೋಡಿಸಿ ನಮ್ಮ ದಶಕಗಳ ಬೇಡಿಕೆಗಳನ್ನು ಈಡೇರಿಸಲು ನೆವಾಗಬೇಕು ಎಂದು ಮನವಿ ಮಾಡಿದ್ದಾರೆ.

ಈ ಹೋರಾಟಕ್ಕೆ ರಾಜ್ಯದ ಪ್ರತಿಯೊಬ್ಬರೂ ಕೈಜೋಡಿಸಿ ನಮ್ಮ ನೋವಿಗೆ ಸ್ಪಂದಿಸಬೇಕು. ಆ ಮೂಲಕ ನಿಮ್ಮ ಸೇವೆಯಲ್ಲಿ ನಿರತರಾಗಿರುವ ನಮ್ಮ ಧ್ವನಿಗೆ ಧ್ವನಿಯಾಗಿ ನಿಲ್ಲಬೇಕು ಎಂದು ಕೇಳಿಕೊಳ್ಳುತ್ತಿದ್ದೇವೆ ಎಂದು ಸಮಾನ ಮನಸ್ಕರ ವೇದಿಕೆ ಮನವಿ ಮಾಡಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ