VIJAYAPATHA.IN > ವಿಜಯಪಥ > NEWS > Crime > KSRTC: ಮಂಚೇನಹಳ್ಳಿ ಬಸ್ ನಿಲ್ದಾಣ ಬಳಿ ಬಸ್ನಲ್ಲಿ ಬೆಂಕಿ – ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಚಿಕ್ಕಬಳ್ಳಾಪುರ – ಗೌರಿಬಿದನೂರು ಮಾರ್ಗ ಮಧ್ಯೆ ನಡೆದಿದೆ.
ಆಗುತ್ತಿದ್ದ ಭಾರಿ ಅನಾಹುತವೊಂದು ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ್ದು ಬಸ್ನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಪ್ರಯಾಣಿಕರೊಬ್ಬರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಚಿಕ್ಕಬಳ್ಳಾಪುರದಿಂದ ಗೌರಿಬಿದನೂರಿಗೆ ಹೋಗುತ್ತಿದ್ದ ಬಸ್ನಲ್ಲಿ ಮಾರ್ಗ ಮಧ್ಯೆ ಅಂದರೆ ಮಂಚೇನಹಳ್ಳಿ ಬಸ್ ನಿಲ್ದಾಣ ಬಳಿ ಈ ಅವಘಡ ಸಂಭವಿಸಿದ್ದು, ಇದು ಶಾರ್ಟ್ ಸರ್ಕ್ಯೂಟ್ನಿಂದ ಆಗಿದೆ ಎಂದು ತಿಳಿದು ಬಂದಿದೆ.
ಇನ್ನು ಬಸ್ನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಬಸ್ ನಿಲ್ಲಿಸಿದ್ದು ಅಕ್ಕಪಕ್ಕದ ಅಂಡಿಗಳವರ ಸಹಾಯದಿಂದ ಬಿಂದಿಯಲ್ಲಿ ನೀರು ತಂದು ಬೆಂಕಿ ನಂದಿಸುವ ಪ್ರಯತ್ನ ಪಟ್ಟಿದ್ದಾರೆ. ಸ್ಥಳೀಯರು ಬೆಂಕಿ ನಂದಿಸುವುಕ್ಕೆ ಮುಂದಾಗಿದ್ದರಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.
Related
Deva