NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಮೃತ ಚಾಲಕನ ಕುಟುಂಬಕ್ಕೆ ₹1 ಕೋಟಿ ಚೆಕ್‌ ವಿತರಿಸಿದ ಸಚಿವ ಶ್ರೀರಾಮುಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕನ ಕುಟುಂಬದ ಅವಲಂಬಿತರಿಗೆ ಅಪಘಾತ ಪರಿಹಾರ ವಿಮಾ ಸೌಲಭ್ಯ ₹1 ಕೋಟಿ ಚೆಕ್ ಅನ್ನು ಸಾರಿಗೆ ಸಚಿವ ಬಿ.ಶ್ರೀರಾಮುಲು ಇಂದು ವಿತರಿಸಿದರು.

ಶಾಂತಿನಗರದಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಚೆಕ್‌ ವಿತರಣೆ ಕಾರ್ಯಕ್ರಮಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದ ಚಿತ್ರದುರ್ಗ ಘಟಕದ ಚಾಲಕ 35 ವರ್ಷದ ಜೆ.ಎಸ್. ಉಮೇಶ್ (ಚಾ/ನಿ ಬಿ.ಸಂ 1113) ಅವರ ಕುಟುಂಬದವರಿಗೆ ಅಧಿಕಾರಿಗಳು, ಸಂಘಟನೆಗಳ ಪದಾಧಿಕಾರಿಗಳು ಮತ್ತು ನೌಕರರ ಸಮ್ಮುಖದಲ್ಲಿ ಚೆಕ್‌ ವಿತರಿಸಿದರು.

ಈ ವಿಮಾ ಯೋಜನೆ ಜಾರಿ ನಂತರದಲ್ಲಿ ನಿಗಮದ ಚಿತ್ರದುರ್ಗ ವಿಭಾಗ ಚಿತ್ರದುರ್ಗ ಘಟಕದ ಚಾಲಕ ಜೆ.ಎಸ್. ಉಮೇಶ್ ಅವರು 20.11.2022 ರಂದು ದುರಾದೃಷ್ಟವಶಾತ್ ಬಸ್‌ ಅಪಘಾತದಲ್ಲಿ ಮೃತಪಟ್ಟರು. 8 ವರ್ಷ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದರು. ಅವರು 2 ವರ್ಷದ ಪುತ್ರ ಮತ್ತು 4 ವರ್ಷದ ಪುತ್ರಿ, ಹೆಂಡತಿ ಹಾಗೂ ತಾಯಿಯನ್ನು ಅಗಲಿದ್ದಾರೆ.

ಉಮೇಶ್‌ ಅವರ ಅಗಲಿಕೆಗೆ ನಿಗಮವು ತೀವ್ರ ವಿಷಾದವನ್ನು ವ್ಯಕ್ತಪಡಿಸಿ ಅವರ ಕುಟುಂಬ ವರ್ಗದ ಜೀವನ ನಿರ್ವಹಣೆಗೆ ಜಾರಿಗೊಳಿಸಲಾದ ನೂತನ ವಿಮಾ ಯೋಜನೆಯಡಿಯಲ್ಲಿ ಅಪಘಾತ ಪರಿಹಾರ ಧನ ₹1 ಕೋಟಿಗಳ ಚೆಕ್‌ಅನ್ನು ವಿತರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಕೆಎಸ್ಆರ್ಟಿಸಿಯು ಸಿಬ್ಬಂದಿಗಳಿಗೆ ₹1 ಕೋಟಿ ಮೊತ್ತದ ಅಪಘಾತ ವಿಮಾ ಯೋಜನೆಯನ್ನು ಜಾರಿಗೊಳಿಸಿದ್ದು, ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ವತಿಯಿಂದ ಪ್ರೀಮಿಯಂ ರಹಿತ ₹ 50 ಲಕ್ಷಗಳ ವಿಮೆ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಅವರಿಂದ ವಾರ್ಷಿಕ ₹885 ಪ್ರೀಮಿಯಂ (ನೌಕರರಿಂದ) ಪಾವತಿಯ ಮೇರೆಗೆ ₹50 ಲಕ್ಷಗಳ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಈ ಅಪಘಾತ ವಿಮಾ ಯೋಜನೆಯ ಒಡಂಬಡಿಕೆಯನ್ನು SBI ಅವರೊಡನೆ ಕಳೆದ 19-10-2022 ರಂದು, ಯುನೈಟೆಡ್ ಇಂಡಿಯಾ ಇನ್ಸುರೆನ್ಸ್‌ ಕಂಪನಿ ಅವರೊಡನೆ 14-11-2022 ರಂದು ಒಡಂಬಡಿಕೆ ಮಾಡಿಕೊಳ್ಳಲಾಗಿದೆ.

ಈ ವೇಳೆ ಸಂಸ್ಥೆಯ ಅಧ್ಯಕ್ಷ ಚಂದ್ರಪ್ಪ, ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌, ನಿರ್ದೇಶಕರಾದ (ಪರಿಸರ ಮತ್ತು ಜಾಗೃತಾ) ಡಾ.ನವೀನ್ ಭಟ್ ಇನ್ನಿತರ ಅಧಿಕಾರಿಗಳು ನೌಕರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು