NEWS

KSRTC ಸಾರಿಗೆ ನೌಕರರ ಕುಂದು ಕೊರತೆ ಸಭೆ: ಸಮಸ್ಯೆಗೆ ಶೀಘ್ರ ಪರಿಹಾರ ಎಂದು ಅಭಯ ನೀಡಿದ ಎಂಡಿ ಅನ್ಬುಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಸರ್ಕಾರ ಮತ್ತು ಆಡಳಿತ ವರ್ಗಗಳು ನಿಮ್ಮ ಜತೆ ಚರ್ಚಿಸುವ ಮೂಲಕ ಬಗೆಹರಿಸಲಾಗುವುದು ಎಂದು ಬಗ್ಗೆ ನೌಕರರ ಸಂಘಟನೆಗಳಿಗೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ಭರವಸೆ ನೀಡಿದ್ದಾರೆ.

ಶನಿವಾರ ಸಾರಿಗೆ ಕೇಂದ್ರ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕೆಎಸ್‌ಆರ್‌ಟಿಸಿ ನೌಕರರ ಕುಂದು ಕೊರತೆಯ ಸಭೆಯಲ್ಲಿ ಸಾರಿಗೆಯ ವಿವಿಧ ಸಂಘಟನೆಗಳ ಪದಾಧಿಕಾರಿಗಳಿಗೆ ಈ ಭರವಸೆ ನೀಡಿದ್ದು, ಮುಂದಿನ ದಿನಗಳಲ್ಲಿ ನೌಕರರಿಗೆ ಆಗುತ್ತಿರುವ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಮುಖವಾಗಿ ಕರಾರಸಾ ನಿಗಮಗಳ ನೌಕರರ ಫೆಡರೇಷನ್ ( CITU ), ಸಮಾನ ಮನಸ್ಕರ ವೇದಿಕೆ ಸೇರಿದಂತೆ ಸಾರಿಗೆ ನೌಕರರ ಹಲವು ಸಂಘಟನೆಗಳ ಪದಾಧಿಕಾರಿಗಳ ಜತೆ ಪ್ರತ್ಯೇಕವಾಗಿ ಸಭೆ ನಡೆಸಲಾಯಿತು. ಈ ವೇಳೆ ಬಹುತೇಕ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ನೌಕರರಿಗೆ ಆಗುತ್ತಿರುವ ಸಮಸ್ಯೆ ಬಗ್ಗೆ ವ್ಯವಸ್ಥಾಪಕ ನಿರ್ದೇಶಕರು ಮತ್ತು ಅಧಿಕಾರಿಗಳ ಗಮನ ಸೆಳೆದರು. ಜತೆಗೆ ನೌಕರರಿಗೆ ಬರಬೇಕಿರುವ ವೇತನ ಹಿಂಬಾಕಿಯನ್ನು ಕೂಡಲೇ ಒಂದೇ ಕಂತಿನಲ್ಲಿ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

ಬಹುತೇಕ ಎಲ್ಲ ಸಂಘಟನೆಗಳು ಸಭೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ 01.01.2020 ರಿಂದ ವೇತನ ಹೆಚ್ಚಳದ ಬಾಕಿ (ಅರಿಯರ್ಸ್) ಹಣ ನೀಡಬೇಕು. 01.01.2020 ರಿಂದ ನಿವೃತ್ತಿ ಆದ ನೌಕರರ ವೇತನ ಹೆಚ್ಚಳದ ಪಿಕ್ಸೇಷನ್ ಆಗಬೇಕು. ತುಟ್ಟಿ ಭತ್ಯೆ ಬಾಕಿ ಹಣ ನೀಡಬೇಕು. 2021ರ ಮುಷ್ಕರದ ವೇಳೆ BJP ಸರ್ಕಾರ ತೆಗೆದುಕೊಂಡಿರುವ ಎಲ್ಲ ರೀತಿಯ ಅಕ್ರಮ ಶಿಕ್ಷೆಗಳು ವಾಪಸ್‌ ಪಡೆಯಬೇಕು.

ಎಲೆಕ್ಟ್ರಿಕ್ ಬಸ್‌ಗಳನ್ನು ನಮ್ಮ ಸಾರಿಗೆ ನಿಗಮಗದ ನೌಕರರೇ ಓಡಿಸಬೇಕು. ಕೇಂದ್ರ ಸರ್ಕಾರ FAME-2 ಯೋಜನೆ ( ಎಲೆಕ್ಟ್ರಿಕ್ ಬಸ್‌ಗಳನ್ನು ) ಖಾಸಗೀಯವರ ಮೂಲಕ ಓಡಿಸುವ ಖಾಸಗೀಕರಣವನ್ನು ಕೈ ಬಿಡಬೇಕು. BMTC ಯಲ್ಲಿ ಡಬ್ಬಲ್ ಡ್ಯೂಟಿ ಮಾಡಿಸಿ 4 ಗಂಟೆಗಳ ಕಾಲ OT ನೀಡುವುದನ್ನು ನಿಲ್ಲಿಸಿ ಕಾನೂನು ಬದ್ಧವಾಗಿ ಡಬಲ್ ವೇತನ ನೀಡಬೇಕು.

ಕಿರುಕುಳಗಳು/ ದೌರ್ಜನ್ಯದ/ ಭ್ರಷ್ಟಾಚಾರದ ಆಡಳಿತಕ್ಕೆ ಕಡಿವಾಣ ಹಾಕಬೇಕು. ಗುತ್ತಿಗೆ ಕಾರ್ಮಿಕರ ನೇಮಕಾತಿ ಮಾಡಿಕೊಳ್ಳದೆ ಸಂಸ್ಥೆಯಿಂದಲೇ ನೇರವಾಗಿ ನೇಮಕ ಮಾಡಿಕೊಳ್ಳಬೇಕು. ಆಡಳಿತ ವರ್ಗಗಳು ಏಕ ಪಕ್ಷೀಯವಾಗಿ ಸುತ್ತೋಲೆಗಳನ್ನು ತರುವ ಪದ್ಧತಿ ನಿಲ್ಲಿಸಬೇಕು. ನೌಕರರ ಸಂಘಗಳ ಜತೆ ಮಾತುಕತೆ ನಡೆಸುವ ಮೂಲಕ ಉತ್ತಮ ಕೈಗಾರಿಕಾ ಬಾಂಧವ್ಯ ರೂಪಿಸಬೇಕು.

ಇನ್ನು ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುವ ಚಾಲನ ಸಿಬ್ಬಂದಿಗಳು ಹಾಗೂ ಸಿಬ್ಬಂದಿಗಳು ಅನಿವಾರ್ಯ ಸಂಧರ್ಭದಲ್ಲಿ ತಿಂಗಳಲ್ಲಿ ಒಂದು ಅಥವಾ ಎರಡು ದಿನ ಕರ್ತವ್ಯಕ್ಕೆ ಗೈರು ಹಾಜರಿ ಆದರೆ ವಾರದ ರಜೆಯನ್ನು ರದ್ದು ಮಾಡುವ ಸುತ್ತೋಲೆ ರದ್ದು ಮಾಡಬೇಕು. ತಾಂತ್ರಿಕ ಸಿಬ್ಬಂದಿಗಳಿಗೆ, ಘಟಕದ ಅಡಳಿತ ಸಿಬ್ಬಂದಿಗಳಿಗೆ ಹಾಗೂ ಭದ್ರತಾ ಸಿಬ್ಬಂದಿಗಳಿಗೆ ಪ್ರತಿ ದಿನ ಬರುವ ಘಟಕದ ಆದಾಯಕ್ಕೆ ಅನುಗುಣವಾಗಿ (ಕಾರ್ಯಾಗಾರದ ಸಿಬ್ಬಂದಿಗಳನ್ನು ಒಳಗೊಂಡತೆ) ಪ್ರೋತ್ಸಹ ಧನ ನೀಡಬೇಕು.

ಈ ಆಧುನಿಕ ಹಾಗೂ ವೈಜ್ಞಾನಿಕ ಯುಗದಲ್ಲಿ ಘಟಕಗಳಲ್ಲಿ ಹಾಗೂ ಕಾರ್ಯಾಗಾರಗಳಲ್ಲಿ ನಮ್ಮ ತಾಂತ್ರಿಕ ಸಿಬ್ಬಂದಿಗಳು ಇನ್ನು ಹಳೆಯ ಕಾಲದ ಸಲಕರಣೆಗಳನ್ನು ಬಳಸಿ ಕರ್ತವ್ಯ ನಿರ್ವಹಿಸುತ್ತಿರುವ ಕಾರಣ ದೈಹಿಕ ಶ್ರಮವು ಹೆಚ್ಚು, ಸಮಯವು ವ್ಯರ್ಥ. ಜತೆಗೆ ಅಪಘಾತಗಳು ಆಗುತ್ತಿವೆ, ಅದರಿಂದ ಕೂಡಲೆ ಆಧುನಿಕ ಸಲಕರಣೆಗಳನ್ನು ಖರೀದಿಸಿ ತಾಂತ್ರಿಕ ಸಿಬ್ಬಂದಿಗಳಿಗೆ ನೀಡಬೇಕು.

ಸಮಾನ ತಪ್ಪಿಗೆ, ಸಮಾನ ಶಿಕ್ಷೆ ಪದ್ಧತಿ ಜಾರಿಗೆ ತದು ಅವೈಜ್ಞಾನಿಕ ಶಿಕ್ಷೆ ಪದ್ಧತಿಯನ್ನು ಕೊನೆಗಾಣಿಸುವುದು. ಮಾಸ್ಟರ್ ಪೇ ಸೈಲ್ ಪದ್ಧತಿ ಜಾರಿಗೆ ತರಬೇಕು. ಈಗೀರುವ ಅವೈಜ್ಞಾನಿಕ ಫಾರಂ-4 ನ್ನು ವೈಜ್ಞಾನಿಕವಾಗಿ ರಚಿಸಬೇಕು.

ಇನ್ನು ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ಕ್ರೆಡಿಟ್, ಬಳಕೆದಾರರ ಹಾಗೂ ಗೃಹ ಸಂಘಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದ್ದು, ಈ ಭ್ರಷ್ಟಾಚಾರಗಳ ಬಗ್ಗೆ ಸಂಸ್ಥೆ ವತಿಯಿಂದ ತನಿಖೆ ನಡೆಸಿ, ತಪ್ಪಿತಸ್ಥ ಸಂಘಗಳ ಪ್ರತಿನಿಧಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಸಾರಿಗೆ ಸಂಸ್ಥೆಯ ನೌಕರರು ಕಷ್ಟಪಟ್ಟು ಸಂಪಾದಿಸಿ ಉಳಿಸಿರುವ ಹಣವನ್ನು ಕಾಪಾಡಬೇಕೆಂದು ಸಭೆಯಲ್ಲಿ ಒತ್ತಾಯಿಸಿದ್ದಾರೆ.

ಈ ಎಲ್ಲ ಸಮಸ್ಯೆ ಮತ್ತು ಬೇಡಿಕೆಗಳಿಗೆ ಪರಿಹಾರ ಕೊಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಂಡಿ ಅನ್ಬುಕುಮಾರ್‌ ಭಾಗವಹಿಸಿದ್ದ ಎಲ್ಲ ಸಂಘಟನೆಗಳ ಪದಾಧಿಕಾರಿಗಳಿಗೆ ಅಭಯ ನೀಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು